Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನ.13-14ರಂದು ʼರಾಷ್ಟ್ರೀಯ ಸ್ವರಾಜ್...

ನ.13-14ರಂದು ʼರಾಷ್ಟ್ರೀಯ ಸ್ವರಾಜ್ ಸಮ್ಮೇಳನʼ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ2 Oct 2024 7:36 PM IST
share
ನ.13-14ರಂದು ʼರಾಷ್ಟ್ರೀಯ ಸ್ವರಾಜ್ ಸಮ್ಮೇಳನʼ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಸಾಕಾರಗೊಂಡಿರುವ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993’ ಜಾರಿಗೊಂಡು 30 ವರ್ಷಗಳು ಸಂದಿವೆ. ಈ ನಿಟ್ಟಿನಲ್ಲಿ ನ.13 ಹಾಗೂ 14ರಂದು ರಾಷ್ಟ್ರೀಯ ಸ್ವರಾಜ್ ಸಮ್ಮೇಳನ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಬುಧವಾರ ವಿಕಾಸಸೌಧದಲ್ಲಿ ರಾಷ್ಟ್ರೀಯ ಸ್ವರಾಜ್ ಸಮ್ಮೇಳನದ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ 30 ವರ್ಷಗಳ ಕಾಲ ಪಂಚಾಯತ್ ವ್ಯವಸ್ಥೆ ನಡೆದು ಬಂದ ಹಾದಿ ಕುರಿತು ಅವಲೋಕನ ಮಾಡುವ ಹಾಗೂ ಮುಂದಿನ 30 ವರ್ಷಗಳಿಗೆ ಅನ್ವಯವಾಗುವ ಕರ್ನಾಟಕ ಸ್ವರಾಜ್ಯ ಚಾರ್ಟರ್ ರೂಪಿಸುವ ಕುರಿತು ವಿಚಾರ ಸಂಕಿರಣ, ದುಂಡುಮೇಜಿನ ಪರಿಷತ್ತು, ಕಾರ್ಯಾಗಾರ, ಸಂವಾದ, ಚರ್ಚಾಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಕಾರ್ಯಕ್ರಮಗಳಿಗೆ ರಾಜ್ಯ, ರಾಷ್ಟ್ರ ಹಾಗೂ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಾಮಾಜಿಕ ತಜ್ಞರು, ಆರ್ಥಿಕ ತಜ್ಞರು, ಕಾನೂನು ತಜ್ಞರು, ಆಡಳಿತ ತಜ್ಞರು, ಸಂವಿಧಾನ ತಜ್ಞರು, ವಿಷಯ ತಜ್ಞರು ಮುಂತಾದ ಪರಿಣಿತರನ್ನು ಆಹ್ವಾನಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.

ಈ ಗೋಷ್ಠಿಗಳ ನಂತರ ಹೊಮ್ಮುವ ವಿಚಾರಗಳನ್ನು ಆಧರಿಸಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಮುಂದಿನ 30 ವರ್ಷಗಳಿಗೆ ಕರ್ನಾಟಕ ಹಾಗೂ ಭಾರತದ ಪಂಚಾಯತಿ ವ್ಯವಸ್ಥೆಯಲ್ಲಿ ತರಬದಾದ ಮತ್ತಷ್ಟು ಸುಧಾರಣೆಗಳನ್ನು ಸೂಚಿಸುವ ನೀಲಿನಕ್ಷೆಯನ್ನು ಒಳಗೊಂಡ ಕರ್ನಾಟಕ ಸ್ವರಾಜ್ಯ ಚಾರ್ಟರ್ ರೂಪಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸಮ್ಮೇಳನದಲ್ಲಿ ತೆಗೆದುಕೊಳ್ಳುವ ಮಹತ್ವವಾದ ನಿರ್ಧಾರಗಳನ್ನು ‘ಕರ್ನಾಟಕ ಪಂಚಾಯತ್ ರಾಜ್ ಘೋಷಣೆ’ ಎಂದು ಕರೆಯಲಾಗುವುದು. ಗಾಂಧೀಜಿಯವರ ಜೀವನ ಮತ್ತು ಕಾರ್ಯಗಳಿಂದ ಸ್ಫೂರ್ತಿ ಪಡೆದು ಸತ್ಯ (ಸತ್ಯ), ಅಹಿಂಸಾ (ಅಹಿಂಸೆ), ಅಸ್ತೇಯ (ಪ್ರಾಮಾಣಿಕತೆ) ಮತ್ತು ಮೈತ್ರಿ (ಭ್ರಾತೃತ್ವ) ತತ್ವಗಳನ್ನು ಆಧರಿಸಿ ರಾಷ್ಟ್ರೀಯ ಸ್ವರಾಜ್ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಸಮ್ಮೇಳನದ ಉದ್ದೇಶವು ಭಾರತವು ತಾರತಮ್ಯ ಮತ್ತು ಹಿತಾಸಕ್ತಿಗಳ ಘರ್ಷಣೆಯ ಆಧಾರದ ಮೇಲೆ ನಿರ್ಮಿತವಾಗಿಲ್ಲ, ಬದಲಿಗೆ ಮಾನವನಿಷ್ಟ ಭಾರತೀಯತೆ ತತ್ವದ ಆಧಾರದ ಮೇಲೆ ಬಲಿಷ್ಠವಾಗಿ ನೆಲೆ ನಿಂತಿದೆ ಎನ್ನುವುದನ್ನು ಪ್ರತಿಪಾದಿಸುವುದಾಗಿದೆ ಎಂದು ಅವರು ವಿವರಿಸಿದರು.

ಈ ಸಮ್ಮೇಳನದಲ್ಲಿ ನೀತಿನಿರೂಪಕರು, ಶಿಕ್ಷಣತಜ್ಞರನ್ನು ಒಳಗೊಂಡಂತೆ ಶೈಕ್ಷಣಿಕ ಅಧಿವೇಶನಗಳು, ಗಾಂಧೀಜಿಯವರ ತತ್ವಗಳು ಮತ್ತು ಭಾರತೀಯ ಸಂವಿಧಾನದಲ್ಲಿ ಹುದುಗಿರುವ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯಮೌಲ್ಯಗಳನ್ನು ಆಧರಿಸಿ ವಿಷಯಾಧಾರಿತ ಚರ್ಚೆಗಳು, ಪ್ರಸ್ತುತ ನಮ್ಮ ಸಮಾಜ ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳಿಗೆ ಪರಿಹಾರ, ದುಂಡುಮೇಜಿನ ಚರ್ಚೆಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ಭಾರತದ ವೈವಿಧ್ಯಮಯ ಹಾಗೂ ವೈಶಿಷ್ಟ್ಯಪೂರ್ಣ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ರಂಗಭೂಮಿ, ಸಾಂಪ್ರದಾಯಿಕ ಕಲೆ ಮತ್ತು ಚಲನಚಿತ್ರಗಳ ಪ್ರದರ್ಶನ, ಚರಕ ತರಗತಿಗಳು ಮತ್ತು ಧ್ಯಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಸಂವಿಧಾನದ 75 ವರ್ಷಗಳ ಅವಧಿಯಲ್ಲಿ ಕಂಡ ಪ್ರಗತಿ, ಅಭಿವೃದ್ಧಿ ಹಾಗೂ ಸವಾಲುಗಳ ಚಿತ್ರಣವನ್ನು ಪ್ರತಿಬಿಂಬಿಸುವ ಪೇಂಟಿಂಗ್ಸ್, ಛಾಯಾಚಿತ್ರಗಳು ಮತ್ತು ವಿಡಿಯೋಗಳನ್ನು ಒಳಗೊಂಡ ವಸ್ತುಪ್ರದರ್ಶನ ಆಯೋಜಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಪೂರ್ವಭಾವಿಯಾಗಿ ಸಮ್ಮೇಳನ ಕುರಿತಂತೆ ಅರಿವು ಮೂಡಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಕಿರುಚಿತ್ರಗಳ ಆರೋಹಣ, ಜಿಲ್ಲಾ ಮಟ್ಟದಲ್ಲಿ ಉಪನ್ಯಾಸಗಳು ಹಾಗೂ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಅವರು ಹೇಳಿದರು.

2025ನೆ ಸಾಲಿನಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮವನ್ನು ಮುನ್ನಡೆಸಿದ ಹಾಗೂ ಸಂವಿಧಾನದಲ್ಲಿ ಅಳವಡಿಸಲಾದ ಮೌಲ್ಯಗಳನ್ನು ಜನಪ್ರಿಯಗೊಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು, ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಮತ್ತು ನೀತಿ ಕುರಿತ ಕೋರ್ಸ್, ಮಹಾತ್ಮಗಾಂಧಿ ಫೆಲೋಶಿಪ್, ಸಂವಿಧಾನ ಮ್ಯೂಸಿಯಂ ಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X