Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘SIR’ ಸಿಎಂ ಪ್ರತಿಭಟನೆ ವಿರುದ್ಧ...

‘SIR’ ಸಿಎಂ ಪ್ರತಿಭಟನೆ ವಿರುದ್ಧ ಎನ್‍ಡಿಎ ಆಕ್ರೋಶ, ಚುನಾವಣಾ ಆಯೋಗಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ5 Oct 2026 8:54 PM IST
share
‘SIR’ ಸಿಎಂ ಪ್ರತಿಭಟನೆ ವಿರುದ್ಧ ಎನ್‍ಡಿಎ ಆಕ್ರೋಶ, ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಕಾನೂನುಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿ ಎನ್‍ಡಿಎ ಒಕ್ಕೂಟದ ನಾಯಕರು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್‌ ಗೆ ಜಂಟಿ ದೂರು ಸಲ್ಲಿಸಿದ್ದಾರೆ.

ಸೋಮವಾರ ಸಂಜೆ ನಗರದ ಅರಮನೆ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿದ ಎನ್‍ಡಿಎ ಒಕ್ಕೂಟದ ನಾಯಕರು, ಮತದಾರರ ಪಟ್ಟಿಯಿಂದ ಅನರ್ಹರನ್ನು ಹೊರಗಿಡಲು ಮತ್ತು ಅರ್ಹರಿಗೆ ಸಾಂವಿಧಾನಿಕ ಹಕ್ಕು ಕಲ್ಪಿಸಲು ಎಸ್‍ಐಆರ್ ಪ್ರಕ್ರಿಯೆ ಅತ್ಯಗತ್ಯವಾಗಿದೆ. ಆದರೆ ಕಾಂಗ್ರೆಸ್ ಸರಕಾರ ಮತ್ತು ಆ ಪಕ್ಷದ ಕಾರ್ಯಕರ್ತರು ಈ ಪ್ರಕ್ರಿಯೆಯ ಮೇಲೆ ತೀವ್ರ ಒತ್ತಡ ಹೇರುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ, ಮತದಾರರ ಪಟ್ಟಿಯ ಅಕ್ರಮಗಳ ವಿರುದ್ಧ ಯಾವುದೇ ನೋಂದಾಯಿತ ಮತದಾರನು ಫಾರ್ಮ್-7 ರ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ, ಆಕ್ಷೇಪಣೆ ಸಲ್ಲಿಸುತ್ತಿರುವ ಬಿಜೆಪಿ ಕಾರ್ಯಕರ್ತರು ಮತ್ತು ಹಿತೈಷಿಗಳನ್ನು ಗುರಿಯಾಗಿಸಿಕೊಂಡು ಸರಕಾರವು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎನ್‍ಡಿಎ ನಾಯಕರು ದೂರಿದ್ದಾರೆ.

ಬೀದರ್‌ ನ ಭಾಲ್ಕಿ, ಬೆಳಗಾವಿಯ ಮಾರ್ಕೆಟ್ ಏರಿಯಾ, ಬೆಂಗಳೂರಿನ ವೈಯಾಲಿಕಾವಲ್, ಬಳ್ಳಾರಿ ಮತ್ತು ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಗಳಲ್ಲಿ ರಾಜಕೀಯ ಒತ್ತಡದ ಮೇರೆಗೆ ವಂಚನೆ ಮತ್ತು ಬೆದರಿಕೆಯಂತಹ ಗಂಭೀರ ಸ್ವರೂಪದ ಸುಳ್ಳು ಎಫ್‍ಐಆರ್‍ಗಳನ್ನು ದಾಖಲಿಸಲಾಗುತ್ತಿದ್ದು, ಇದು ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಚುನಾವಣಾ ಕಚೇರಿ ಎದುರು ಪ್ರತಿಭಟನೆ: ಹೈಕೋರ್ಟ್ ಆದೇಶ ಉಲ್ಲಂಘನೆ?: ಅ.1ರಂದು ಮುಖ್ಯಮಂತ್ರಿ ಹಾಗೂ ಸಚಿವರ ದಂಡು ಮುಖ್ಯ ಚುನಾವಣಾಧಿಕಾರಿ ಕಚೇರಿಯ ಆವರಣದಲ್ಲೆ ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸುವ ಮೂಲಕ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದೆ. ಅಲ್ಲದೆ, ಬೆಂಗಳೂರು ನಗರದಲ್ಲಿ ಕೇವಲ ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂಬ ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಎನ್‍ಡಿಎ ನಾಯಕರು ಗಮನ ಸೆಳೆದಿದ್ದಾರೆ.

ನಿಯೋಗದಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಬಸವರಾಜ ಬೊಮ್ಮಾಯಿ, ಪಿ.ಸಿ. ಮೋಹನ್, ಶಾಸಕರಾದ ಸುರೇಶ್ ಬಾಬು, ಮುನಿರತ್ನ, ಉದಯ್ ಗರುಡಾಚಾರ್, ಟಿ.ಎ.ಶರವಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags

NDASIRElection Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X