Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ...

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಜಯ; ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್​​ಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ28 Oct 2026 1:13 PM IST
share
ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಜಯ; ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್​​ಗೆ ಸೋಲು

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ 4 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ (ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಭರ್ಜರಿ ಗೆಲುವು ಸಾಧಿಸಿದೆ.

ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಜಯಗಳಿಸಿದ್ದಾರೆ.

ಗೆಲುವಿನ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಮೂರು ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲು ಎದುರಾಗಿದ್ದು, ಮೈತ್ರಿಕೂಟದ ನಾಯಕರಲ್ಲಿ ಹೊಸ ಹುರುಪು ಮೂಡಿಸಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶೀಲ್ ನಮೋಶಿ ಗೆಲುವು :

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ವಿರುದ್ಧ ಅವರು ಸ್ಪಷ್ಟ ಅಂತರದ ಜಯ ದಾಖಲಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ; ಎ.ಪಿ.ರಂಗನಾಥ್ ಗೆಲುವು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 10.810 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

ಅ.23ರಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 8,360 ಪುರುಷರು ಹಾಗೂ 14,108 ಮಹಿಳೆಯರು ಇದ್ದರು. ಮಂಗಳವಾರ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು,ಎ.ಪಿ. ರಂಗನಾಥ್ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಪಶ್ಚಿಮ ಪದವೀಧರರ ಕ್ಷೇತ್ರ: ಎಸ್.ವಿ ಸಂಕನೂರ ಹ್ಯಾಟ್ರಿಕ್ ಗೆಲುವು

ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ 33,711 ಮತ ಗಳಿಸಿ ಗೆಲುವು ಸಾಧಿಸಿದ್ಧಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮೋಹನ ಲಿಂಬಿಕಾಯಿ ಅವರನ್ನು 9,323 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಸತತ ಮೂರನೇ ಬಾರಿಗೆ ಮೇಲ್ಮನೆ ಪ್ರವೇಶಿಸಿರುವ ಪ್ರೊ.ಎಸ್.ವಿ.ಸಂಕನೂರ್ ಅವರು 2014ರ ಚುನಾವಣೆಯಲ್ಲಿ 22, 507 ಹಾಗೂ 2020ರ ಚುನಾವಣೆಯಲ್ಲಿ 23, 857 ಮತಗಳನ್ನು ಪಡೆದಿದ್ದರು.

ಆಗ್ನೇಯ ಪದವೀಧರ ಕ್ಷೇತ್ರ; ಬಿಜೆಪಿಯ ಸುರೇಶ್‌ ಗೆ ಭರ್ಜರಿ ಜಯ

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ್ (ಸೋಮೇಶ್ವರ) ಅವರು ಗೆಲುವಿನ ನಗೆ ಬೀರಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ 66,020 ಮತಗಳನ್ನು ಪಡೆದ ಅವರು, ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಅವರನ್ನು 23,098 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

ಅಕ್ಟೋಬರ್ 28ರಂದು ಪ್ರಕಟವಾದ ಸುತ್ತುವಾರು ಮತ ಎಣಿಕೆಯ ವಿವರಗಳ ಪ್ರಕಾರ, ಶಶಿ ಹುಲಿಕುಂಟೆಮಠ 42,922 ಮತಗಳನ್ನು ಪಡೆದಿದ್ದಾರೆ. ಎಲ್ಲ 10 ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡ ಸುರೇಶ್, ಅಂತಿಮವಾಗಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ಒಟ್ಟಾರೆ, ನಾಲ್ಕು ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಎನ್‌ಡಿಎಗೆ ರಾಜಕೀಯ ಬಲ ತುಂಬಿದೆ.

Tags

NDALegislative Council Elections
share
ವಾರ್ತಾಭಾರತಿ
ವಾರ್ತಾಭಾರತಿ
Next Story
X