Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ...

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಮೂಡಿಗೆರೆಯಲ್ಲಿ ಶಾಸಕರು, ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ8 Nov 2023 10:24 PM IST
share
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಚಿಕ್ಕಮಗಳೂರು, ನ.8: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕಾಡಾನೆಗಳ ಹಾವಳಿ ತಪ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ಮೂಡಿಗೆರೆ ಪಟ್ಟಣದ ಪ್ಲಾಂಟರ್ಸ್ ಕ್ಲಬ್‍ನಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಶಾಸಕರು ಹಾಗೂ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಂಧಲೆ ಹೆಚ್ಚಾಗಿದ್ದು, ಕಾಡಾನೆಗಳನ್ನು ಕಾಡಿಗೆ ಅಟ್ಟಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಆಲ್ದೂರು ಸಮೀಪ ಕಾಡಾನೆ ದಾಳಿಯಿಂದ ಮೃತರಾದ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿದ್ದ ಪ್ರತಿಭಟನಕಾರರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಆ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರ ನೀಡಲಾಗುವುದು. ಅರಣ್ಯ ಸಚಿವರು ಶೀಘ್ರ ಜಿಲ್ಲೆಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತು ಕ್ರಮಕೊಳ್ಳುತ್ತಾರೆ ಎಂದ ಅವರು, ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೆ ಬ್ಯಾರಿಕೇಡ್ ಹಾಕುವುದೂ ಸೇರಿದಂತೆ ಅಗತ್ಯ ಕ್ರಮಗಳ ಕುರಿತು ಕಾರ್ಯಪಡೆಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜೊತೆ ಚರ್ಚಿಸಿದ್ದೇನೆ ಎಂದರು.

ಕಾಡಾನೆಗಳಿಗೆ ಗುಂಡು ಹೊಡೆದು ಕೊಲ್ಲಬೇಕು ಎನ್ನುವ ಸ್ಥಳೀಯರ ಮತ್ತು ಪ್ರತಿಭಟನಕಾರರ ಒತ್ತಾಯದ ಕುರಿತಂತೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ ಹಂತಕ್ಕೆ ಯೋಚನೆ ಮಾಡುವುದು ಬೇಡ. ಕಾಡಾನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ರೈತರ ಪಂಪ್‍ಸೆಟ್‍ಗಳಿಗೆ 7ಗಂಟೆಗಳ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ, ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ತಾಲೂಕು ಅಧಿಕಾರಿಗಳು ತಾಲೂಕು ಕೇಂದ್ರದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ಉಳಿಯಬೇಕು. ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಮಸ್ಯೆ ಆಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ನಯನಾ ಮೋಟಮ್ಮ, ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಕೆ.ಎಸ್.ಆನಂದ್, ಜಿ.ಎಚ್.ಶ್ರೀನಿವಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X