Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೇ.50ರ ಮೀಸಲಾತಿ ಮಿತಿ ತೆಗೆದು ಹಾಕಲು...

ಶೇ.50ರ ಮೀಸಲಾತಿ ಮಿತಿ ತೆಗೆದು ಹಾಕಲು ಅಗತ್ಯ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ವಾರ್ತಾಭಾರತಿವಾರ್ತಾಭಾರತಿ6 Sept 2023 11:54 PM IST
share
ಶೇ.50ರ ಮೀಸಲಾತಿ ಮಿತಿ ತೆಗೆದು ಹಾಕಲು ಅಗತ್ಯ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು ಸೆ. 6: ‘ಯಾದವ (ಗೊಲ್ಲ), ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ.ಗೆ ಸೇರಿಸಿ ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದೇನೆ. ಹಾಗೆಯೇ ಶೇ.50ರ ಮೀಸಲಾತಿ ಪ್ರಮಾಣದ ಮಿತಿ ತೆಗೆದುಹಾಕಲು ಕಾನೂನು ತಜ್ಞರೊಂದಿಗೆ ಚರ್ಚಿಸಿ, ಕೇಂದ್ರಕ್ಕೆ ಪತ್ರ ಬರೆಯಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.

ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ‘ಶ್ರೀ ಕೃಷ್ಣ ಜಯಂತಿ’ ಉದ್ಘಾಟಿಸಿ ಮಾತನಾಡಿದ ಅವರು, ‘ಯಾದವ ಸಮುದಾಯವನ್ನು ಎಸ್‍ಟಿ ಪಟ್ಟಿಗೆ ಸೇರಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇದ್ದಿದ್ದರೆ ಇಷ್ಟೊತ್ತಿಗೆ ನಾನೇ ಮಾಡಿ ಮುಗಿಸುತ್ತಿದ್ದೆ. ಆದರೂ ನಮ್ಮ ಶಿಫಾರಸ್ಸನ್ನು ಜಾರಿ ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಾಕುತ್ತೇವೆ ಎಂದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ. ಮನುಷ್ಯ ದ್ವೇಷದ, ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೆ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ಮನುಷ್ಯ ಪ್ರೀತಿಯ ಸಮಾನತೆಯ ಸಮಾಜ ಸೃಷ್ಟಿ ಆಗಬೇಕು ಎನ್ನುವುದಾಗಿತ್ತು. ಸ್ವತಂತ್ರ ಭಾರತಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವೂ ಇದೇ ಆಗಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದ ಧರ್ಮವನ್ನು ಒಪ್ಪಿಕೊಳ್ಳುವ, ಆಚರಿಸುವ ಸ್ವಾತಂತ್ರ್ಯವನ್ನು ನೀಡಿತು ಎಂದು ಅವರು ಹೇಳಿದರು.

ಜಾತಿ, ಧರ್ಮ ಆಧಾರಿತ ತಾರತಮ್ಯ ಮತ್ತು ಅಸಮಾನತೆಯನ್ನು ಸಂವಿಧಾನಬಾಹಿರ ಎಂದು ಅಂಬೇಡ್ಕರ್ ಘೋಷಿಸಿದರು. ಹೀಗಾಗಿ ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ ಅಧಿಕಾರ ಇರಬೇಕು. ಸಂವಿಧಾನ ವಿರೋಧಿಗಳ ಕೈಗೆ ದೇಶದ ಅಧಿಕಾರವನ್ನು ನೀಡಿ ಪರಿತಪಿಸಬೇಡಿ ಎಂದು ಕಿವಿಮಾತು ಹೇಳಿದರು.

ಯಾದವ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಮಾತ್ರ ತಾರತಮ್ಯದಿಂದ ಹೊರಗೆ ಬರಬಹುದು. ಶಿಕ್ಷಣದ ಮೂಲಕ ಅಸಮಾನತೆಯನ್ನು ತೊಡೆದು ಹಾಕಬಹುದು. ಯಾದವ ಸಮುದಾಯದ ಯಾರೊಬ್ಬರೂ ಶಾಸಕರಾಗಿ ಗೆಲ್ಲದ ಕಾರಣದಿಂದ ನಾನು ಈ ಸಮುದಾಯಕ್ಕೆ ಸೇರಿದ ನಾಗರಾಜ ಯಾದವರನ್ನು ಕರೆದು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆ. ಇದೇ ರೀತಿ ಸಮುದಾಯದ ಹಲವು ಮಂದಿಗೆ ನಾನಾ ರೀತಿಯ ರಾಜಕೀಯ ಪ್ರಾತಿನಿಧ್ಯ ಅವಕಾಶಗಳನ್ನು ನಾನು ಒದಗಿಸಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ಶ್ರೀ ಕೃಷ್ಣ ಯಾದವ ಮಹಾಸಂಸ್ಥಾನ ಮಠದ ಯಾದವಾನಂದ ಶ್ರೀಗಳು, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

‘ಯಾದವ ಸಮುದಾಯದ ಒಬ್ಬರನ್ನು ಕೆಪಿಎಸ್‍ಸಿ ಸದಸ್ಯರನ್ನಾಗಿ ಮಾಡಿ ಎನ್ನುವ ಬೇಡಿಕೆ ಇದೆ. ಮುಂದೆ ಅವಕಾಶ ಒದಗಿಸುತ್ತೇನೆ. ನಾನು ಸಾಮಾಜಿಕ ನ್ಯಾಯದಿಂದ ವಂಚಿತರಾದ ಎಲ್ಲ ಜಾತಿ ಸಮುದಾಯಗಳ ಪರವಾಗಿ ನಾನು ಇರುತ್ತೇನೆ. ಸಾಮಾಜಿಕ ನ್ಯಾಯದ ಹಿತಾಸಕ್ತಿ ಕಾಪಾಡುತ್ತೇನೆ’

-ಸಿದ್ಧರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X