ವಯನಾಡ್ ದುರಂತ | ಕೇರಳಕ್ಕೆ ಅಗತ್ಯ ನೆರವು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಜು.31: ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೂರವಾಣಿ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಯನಾಡ್ ಸಂಭವಿಸಿರುವ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು.
ಪರಿಹಾರ ಕಾರ್ಯದಲ್ಲಿ ನಮ್ಮ ಸರಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು… pic.twitter.com/t8up46VV08
— Siddaramaiah (@siddaramaiah) July 30, 2024
Next Story







