Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರದಲ್ಲೇ ನೂತನ ಜೈವಿಕ ಇಂಧನ ನೀತಿ...

ಶೀಘ್ರದಲ್ಲೇ ನೂತನ ಜೈವಿಕ ಇಂಧನ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ16 July 2025 8:24 PM IST
share
ಶೀಘ್ರದಲ್ಲೇ ನೂತನ ಜೈವಿಕ ಇಂಧನ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10ನೆ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಜೈವಿಕ ಇಂಧನ ನೀತಿಯ ಬಗ್ಗೆ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದರು.

ಈ ಸಂಬಂಧ ಈಗಾಗಲೇ ಕೆಲವು ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗಿದೆ, ರಾಜ್ಯದಲ್ಲಿ ಹಾಗೂ ಇತರ ರಾಜ್ಯಗಳಿಗೆ ಭೇಟಿ ನೀಡಿ ಜೈವಿಕ ಇಂಧನ ಕಾರ್ಯಯೋಜನೆಗಳ ಅನುಷ್ಟಾನ ಪ್ರಕ್ರಿಯೆ ಹಾಗೂ ವಸ್ತುಸ್ಥಿತಿ ಅಧ್ಯಯನ ಮಾಡಲಾಗಿದೆ, ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜೈವಿಕ ಇಂಧನ ನೀತಿಗಳ ವಿಶ್ಲೇಷಣೆ ಮಾಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಜೈವಿಕ ಇಂಧನ ಸಂಪನ್ಮೂಲಗಳ ಲಭ್ಯತೆ, ಕ್ರೋಢಿಕರಣ ಕುರಿತು ಪರಿಶೀಲನೆ ಮಾಡಲಾಗಿದ್ದು, ನೂತನ ಕರ್ನಾಟಕ ರಾಜ್ಯ ಜೈವಿಕ ಇಂಧನ ರಚನೆ ಕುರಿತು ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣ ನಿರ್ಮಾಣ ಮಾಡುವ ಕುರಿತು ಸಮ್ಮೇಳನಗಳು, ಕಾರ್ಯಗಾರಗಳು, ವಸ್ತು ಪ್ರದರ್ಶನಗಳು ಹಾಗೂ ಹೂಡಿಕೆದಾರರ ಸಮಾವೇಶಗಳಲ್ಲಿ ಭಾಗವಹಿಸಿ ಮಾಹಿತಿ ಸಂಗ್ರಹಿಸಲಾಗಿದೆ ಹಾಗೂ ಮಂಡಳಿಗೆ ಕೈಗಾರಿಕಾ ಸಂಘಟನೆಗಳು, ಸಂಸ್ಥೆಗಳು, ವಿದೇಶದ ವಿಶ್ವವಿದ್ಯಾಲಯಗಳು ಮುಂತಾದ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿನ ಜೈವಿಕ ಇಂಧನ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಬಯೋಚಾರ್, ಬಯೋಕೋಲ್. ಬಯೋಡೀಸೆಲ್, 2ಜಿ ಎಥನಾಲ್, ಗ್ರೀನ್ ಹೈಡ್ರೋಜನ್ ಕಾರ್ಯ ಯೋಜನೆಗಳಲ್ಲಿ ನಿರತರಾಗಿರುವ ಉದ್ದಿಮೆದಾರರುಗಳ ವಿಚಾರ ವಿನಿಮಯ ಸಭೆಯನ್ನು ತುಮಕೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಮಾಹಿತಿ ಮಾಹಿತಿ ಸಂಗ್ರಹಿಸಲಾಗಿದೆ, ಶೀಘ್ರದಲ್ಲೇ ನೀತಿಯ ಕರಡು ಸಿದ್ಧಪಡಿಸಿ ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಪ್ರಕಟಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸಭೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಇ.ಸುಧೀಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸಮೀರ್ ಶುಕ್ಲಾ, ಆಯುಕ್ತೆ ಅರುಂಧತಿ ಚಂದ್ರಶೇಖರ್ ಹಾಗೂ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X