Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೂತನ ಸಂಪುಟ ರಚನೆಗೆ ಕಸರತ್ತು

ನೂತನ ಸಂಪುಟ ರಚನೆಗೆ ಕಸರತ್ತು

ವಾರ್ತಾಭಾರತಿವಾರ್ತಾಭಾರತಿ29 May 2026 11:28 PM IST
share
ನೂತನ ಸಂಪುಟ ರಚನೆಗೆ ಕಸರತ್ತು

ಬೆಂಗಳೂರು : ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಖಚಿತವಾಗಿದ್ದು, ಅವರು ಪ್ರಮಾಣ ವಚನ ಸ್ವೀಕಾರ ಮಾಡುವುದು ನಿಶ್ಚಿತವಾಗಿದೆ. ಈ ಮಧ್ಯೆ ನೂತನ ಸಂಪುಟಕ್ಕೆ ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಗೊಂದಲ ಸೃಷ್ಟಿಸಿದೆ. ಆ ಹಿನ್ನೆಲೆಯಲ್ಲೇ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮವು ವಿಳಂಬವಾಗುವ ಸಾಧ್ಯತೆಗಳಿವೆ.

ನೂತನ ಸರಕಾರ, ಸಚಿವ ಸಂಪುಟ ರಚನೆಯ ಸಂಬಂಧ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ವರಿಷ್ಠರೊಡನೆ ಸಮಾಲೋಚನೆ ನಡೆಸಿ, ಸಚಿವರ ಪಟ್ಟಿ ಸಿದ್ಧಪಡಿಸಿಕೊಳ್ಳಲಿದ್ದಾರೆಂದು ಹೇಳಲಾಗಿದೆ. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು, ನೂತನ ಸಂಪುಟದಲ್ಲಿ ಸೇರ್ಪಡೆಯಾಗಲು ದಿಲ್ಲಿ ಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದಾರೆ.

ಹೊಸ ಸರಕಾರದಲ್ಲಿ ಎಷ್ಟು ಮಂದಿ ಉಪಮುಖ್ಯಮಂತ್ರಿಗಳಿರಬೇಕು, ಯಾವ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕು, ನೂತನ ಸಚಿವ ಸಂಪುಟದಲ್ಲಿ ಸಮುದಾಯ, ಪ್ರಾದೇಶಿಕವಾರು ಆದ್ಯತೆ ನೀಡುವ ಸಂಬಂಧ ಡಿ.ಕೆ.ಶಿವಕುಮಾರ್ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಿದ ಹಿರಿಯರಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡಿ 10ರಿಂದ 15 ಮಂದಿ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಮೂಲಕ ಹೊಸ ರೀತಿಯ ಆಡಳಿತಕ್ಕೆ ಅಣಿಗೊಳಿಸಲಾಗುತ್ತಿದೆ. ಹೀಗಾಗಿ ಇನ್ನೂ ಎರಡು-ಮೂರು ದಿನಗಳಲ್ಲಿ ನೂತನ ಸಚಿವರ ಹೆಸರುಗಳು ಅಂತಿಮವಾಗಲಿವೆ ಎಂದು ಗೊತ್ತಾಗಿದೆ.

ಜೂನ್ 5ಕ್ಕೆ ಪ್ರಮಾಣ?: ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ, ಸಮಯ ನೀಡುವಂತೆ ಗುರು ದ್ವಾರಕನಾಥ್ ಗುರೂಜಿಗೆ ಮನವಿ ಮಾಡಿದ್ದು, ಇದೀಗ ಅದರಂತೆ ದ್ವಾರಕನಾಥ್ ಗುರೂಜಿ, ‘ಜೂನ್ 5, 6 ಅಥವಾ 7ರಂದು ಪ್ರಮಾಣ ವಚನಕ್ಕೆ ಶುಭ ದಿನ’ ಎಂದು ಶಿವಕುಮಾರ್ ಅವರಿಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ ಖಾಸಗಿ ಸುದ್ದಿವಾಹಿನಿಗೆ ಪ್ರತಿಕ್ರಿಯೆ ನೀಡಿರುವ ದ್ವಾರಕನಾಥ್ ಗುರೂಜಿ, ‘ಈಗಾಗಲೇ ಮುಹೂರ್ತ ನಿಗದಿ ಮಾಡಲಾಗಿದೆ. ನಾಳೆಯ ಶಾಸಕಾಂಗ ಪಕ್ಷದ ಸಭೆಗೆ ನಾನೇ ಮುಹೂರ್ತ ನೀಡಿದ್ದೆ. ಇದೀಗ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರಕ್ಕೆ ಜೂನ್ 5, 6 ಅಥವಾ 7ರಂದು ದಿನ ಚೆನ್ನಾಗಿದೆ. ದೇವರ ಅನುಗೃಹದಿಂದ ಶಿವಕುಮಾರ್ ಅವರಿಗೆ ಸಿಎಂ ಪದವಿ ಸಿಕ್ಕಿದೆ’ ಎಂದು ಹೇಳಿದ್ದಾರೆ.

ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರದ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಆಗಬೇಕಿದೆ. ಬಳಿಕ ಈ ಕುರಿತು ತೀರ್ಮಾನ ಆಗಲಿದೆ.

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

Tags

new cabinet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X