Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರಕಾರದಲ್ಲಿ ಹೊಸದಾಗಿ ʼಪ್ರಜಾ...

ರಾಜ್ಯ ಸರಕಾರದಲ್ಲಿ ಹೊಸದಾಗಿ ʼಪ್ರಜಾ ಸೇವೆʼ ಇಲಾಖೆ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Jun 2026 4:21 PM IST
share
ರಾಜ್ಯ ಸರಕಾರದಲ್ಲಿ ಹೊಸದಾಗಿ ʼಪ್ರಜಾ ಸೇವೆʼ ಇಲಾಖೆ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಾರ್ವಜನಿಕ ಅಹವಾಲುಗಳು, ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಲ್ಲಿ ಹೊಸದಾಗಿ ಪ್ರಜಾ ಸೇವೆ ಇಲಾಖೆಯನ್ನು ಆರಂಭಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶನಿವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರು, ಸಂಘ ಸಂಸ್ಥೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ, ಸತ್ಯಾಗ್ರಹಗಳನ್ನು ನಡೆಸಿ ತಮ್ಮ ಭಾವನೆಗಳನ್ನು, ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಗಮನ ಸೆಳೆಯುತ್ತಾರೆ ಎಂದರು.

ಸಾಮಾನ್ಯ ಕಾನೂನು ರೀತಿ ಬಗೆಹರಿಸಬಹುದಾದ ಸಮಸ್ಯೆಗಳು ಇದ್ದಲ್ಲಿ ನಾವು ಅವರಿಗೆ ನ್ಯಾಯ ಕೊಡಿಸಲು ಸಾಧ್ಯವೇ? ಎಂದು ಪರಿಶೀಲಿಸಬಹುದು. ನಮ್ಮಿಂದ ಅಥವಾ ಅಧಿಕಾರಿಗಳಿಂದ ಏನಾದರೂ ತಪ್ಪು ಆಗಿದ್ದರೆ ಅದನ್ನು ಸರಿಪಡಿಸುವುದು ಮುಖ್ಯವಾದ ವಿಚಾರ ಎಂದು ಮುಖ್ಯಮಂತ್ರಿ ಹೇಳಿದರು.

ಪ್ರತ್ಯೇಕವಾದ ಪ್ರಜಾ ಸೇವೆ ಇಲಾಖೆಯನ್ನು ಸೃಷ್ಟಿಸಿ, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡಲಾಗುವುದು. ಹಿರಿಯ ಐಎಎಸ್ ಅಧಿಕಾರಿಯನ್ನು ಈ ಇಲಾಖೆಗೆ ನಿಯೋಜನೆ ಮಾಡುತ್ತೇವೆ. ಅಹವಾಲುಗಳನ್ನು ಪಡೆದು ಪರಿಶೀಲಿಸಿ, ಸಂಬಂಧಪಟ್ಟವರಿಗೆ ಮಾಹಿತಿ ಕೊಟ್ಟು, ಸಾರ್ವಜನಿಕರಿಗೆ ಎಷ್ಟು ನ್ಯಾಯ ಒದಗಿಸಲು ಸಾಧ್ಯವೋ ಅದನ್ನು ನಾವು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರ, ತಾಲೂಕಿಗೆ ಭೇಟಿ ನೀಡಿ ಸ್ಥಳೀಯ ಶಾಸಕರನ್ನು ಜೊತೆಯಲ್ಲಿರಿಸಿಕೊಂಡು ಜನಸಂಪರ್ಕ, ಜನಸ್ಪಂದನ ಸಭೆಗಳನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಆ ಸಭೆಯಲ್ಲಿ ಸಲ್ಲಿಕೆಯಾಗುವ ಅಹವಾಲುಗಳು, ಸಮಸ್ಯೆಗಳ ಮಾಹಿತಿಯನ್ನು ಈ ನೂತನ ಇಲಾಖೆಯ ಗಮನಕ್ಕೆ ತರಬೇಕು. ಶಾಸಕರಿಗೆ ಈ ನಿಟ್ಟಿನಲ್ಲಿ ಏನೆಲ್ಲ ಕೆಲಸ ಮಾಡಬೇಕು ಎಂಬುದರ ಕುರಿತು ಶೀಘ್ರವೆ ಮಾಹಿತಿಗಳನ್ನು ನೀಡುತ್ತೇವೆ ಎಂದು ಸಿಎಂ ಹೇಳಿದರು.

Tags

D.K. ShivakumarPraja SeveKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X