Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೊಸ ವರ್ಷ ಆಚರಣೆ; ಹೊರಗಿನಿಂದ ಬರುವವರ...

ಹೊಸ ವರ್ಷ ಆಚರಣೆ; ಹೊರಗಿನಿಂದ ಬರುವವರ ಮೇಲೆ ಸೂಕ್ತ ನಿಗಾವಹಿಸಲು ಗೃಹ ಸಚಿವ ಸೂಚನೆ

ಬಂದೋಬಸ್ತ್‌ ಗೆ ಹೆಚ್ಚಿನ ಸಂಖ್ಯೆಯ ಪೊಲೀಸರ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ22 Dec 2023 2:35 PM IST
share
ಹೊಸ ವರ್ಷ ಆಚರಣೆ; ಹೊರಗಿನಿಂದ ಬರುವವರ ಮೇಲೆ ಸೂಕ್ತ ನಿಗಾವಹಿಸಲು ಗೃಹ ಸಚಿವ ಸೂಚನೆ

ಬೆಂಗಳೂರು, ಡಿ.22: ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಗೃಹ ಸಚಿವರು, ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ನಗರಗಳಲ್ಲಿಯೂ ಸಹ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

ಎನ್‌ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ‌ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕ್ರಿಸ್‌ಮಸ್ ಹಬ್ಬ, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹೊರಗಡೆಯಿಂದ ಬರುವವರ ಚಲನವಲನಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು ಎಂದು ಹೇಳಿದರು.

ಹೊಸ ವರ್ಷ ಆಚರಿಸಲು ಜನ ಸೇರುವ ಪ್ರಮುಖ ಸ್ಥಳಗಳನ್ನು ಗುರುತಿಸಿ, ಪೊಲೀಸ್ ಅಧಿಕಾರಿಗಳು ಪರಿಶೀಲಿಸಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್‌ ಗೆ ನಿಯೋಜಿಸಬೇಕು. ಎಸ್‌ ಡಿಆರ್‌ ಎಫ್‌ ತಂಡಗಳು ಇರಬೇಕು. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್‌ ಗಳಲ್ಲಿ ಬಿಬಿಎಂಪಿಯವರು ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು. ನಗರದ ಎಲ್ಲ ವಿಭಾಗದ ಡಿಸಿಪಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಭೇಟಿ ನೀಡಿ, ಡಿಸೆಂಬರ್ 31ರ ತಡರಾತ್ರಿ ತುರ್ತು ಚಿಕಿತ್ಸೆಗಾಗಿ ಅಲರ್ಟ್ ಇರುವಂತೆ ತಿಳಿಸಬೇಕು ಎಂದರು.

ಎಂಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿಗಳಲ್ಲಿ‌ನ ರಸ್ತೆಗಳಲ್ಲಿ ಪಬ್‌ ಮತ್ತು ಬಾರ್, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಿದ್ದಾರೆ. ಇದರಿಂದ ಅವಘಡಗಳಾಗುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ‌ ಸಿಬ್ಬಂದಿಗಳು ಅಲರ್ಟ್ ಆಗಿರಬೇಕು. ಪಬ್ ಮತ್ತು ಬಾರ್‌ ಗಳು ಸುರಕ್ಷತಾ ಕ್ರಮ‌ಕೈಗೊಂಡಿವೆಯೇ ಎಂಬುದನ್ನು ಪರಿಶೀಲಿಸಬೇಕು. ಮೇಲ್ಛಾವಣಿಗಳಲ್ಲಿ ಕಿಚನ್ ತೆರೆಯಲು ಅವಕಾಶ ನೀಡಬಾರದು. ಮದ್ಯದ ಅಂಗಡಿಗಳಿಗೆ ಎಂದಿಗಿಂತ ಹೆಚ್ಚಿನ ಸಮಯಾವಕಾಶ ನೀಡುವುದು ಬೇಡ ಎಂದು‌ ಸೂಚಿಸಿದರು.

ಪೊಲೀಸ್ ಹೆಲ್ಪ್‌ಡೆಸ್ಕ್:

ನ್ಯೂ ಇಯರ್ ಸೆಲೆಬ್ರೇಷನ್‌ ಗಾಗಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ತಾತ್ಕಲಿಕ "ಪೊಲೀಸ್ ಹೆಲ್ಪ್ ಡೆಸ್ಕ್" ತೆರೆಯಬೇಕು. ಈ ಬಗ್ಗೆ ಜನರಿಗೆ ಅನೌನ್ಸ್‌ಮೆಂಟ್ ಮಾಡಬೇಕು. ಮೆಟ್ರೋ ರೈಲುಗಳು ಹೆಚ್ಚಿನ ಅವಧಿಯವರೆಗೆ ಸಂಚರಿಸಲಿ. ಅಲ್ಲದೇ, ಬಿಎಂಟಿಸಿ ವತಿಯಿಂದ ಪ್ರತ್ಯೇಕ ಬಸ್‌ಗಳನ್ನು ಬಿಡಬೇಕು. ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಕಮಾಲ್ ಪಂತ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X