Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಿ ಇಸ್ರೋ ಗೆ ಭೇಟಿ ಕೊಟ್ಟಂತೆ...

ಪ್ರಧಾನಿ ಇಸ್ರೋ ಗೆ ಭೇಟಿ ಕೊಟ್ಟಂತೆ ಮಣಿಪುರಕ್ಕೂ ಭೇಟಿ ಕೊಡಲಿ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ27 Aug 2023 2:08 PM IST
share
ಪ್ರಧಾನಿ ಇಸ್ರೋ ಗೆ ಭೇಟಿ ಕೊಟ್ಟಂತೆ ಮಣಿಪುರಕ್ಕೂ ಭೇಟಿ ಕೊಡಲಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರು ಇಸ್ರೋ ಸಂಸ್ಥೆಗೆ ಭೇಟಿ‌ ನೀಡಿ ವಿಜ್ಞಾನಿಗಳ ಸಾಧನೆಯನ್ನು ಶ್ಲಾಘಿಸಿರುವುದು ಒಳ್ಳೆಯದು. ಜೊತೆಗೆ ಮಣಿಪುರಕ್ಕೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಆಲಿಸಲಿ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೋ ಸಾಧನೆ ಮೆಚ್ಚಲೇಬೇಕಿದೆ. ಆದರೆ ಬೆಂಗಳೂರಿಗೆ ಪ್ರಧಾನಿ ಮೋದಿ ಬಂದಿದ್ದು ಪ್ರಚಾರಕ್ಕೆ. ನಮ್ಮ ಸಿಎಂ ಹಾಗೂ ಡಿಸಿಎಂ ಕೂಡ ಹೋಗಿ ಅಭಿನಂದಿಸಿದ್ದಾರೆ. ಮಣಿಪುರದಲ್ಲಿ ಅಷ್ಟೊಂದು ಜನ ಸಾಯುತ್ತಿರುವಾಗ ಪ್ರಧಾನಿಯವರು ಹೋಗಿಲ್ಲ. ಆದರೆ ರಾಕೆಟ್ ಬಿಟ್ಟ ತಕ್ಷಣ ಹೋಗ್ತಾರೆ, ಅದು ತಪ್ಪು ಅಂತ ಹೇಳಲ್ಲ. ಮಣಿಪುರಕ್ಕೆ ಹೋಗಿದ್ದರೆ ಗಲಾಟೆ ಕಡಿಮೆ ಆಗುತಿತ್ತು ಎಂದರು.

ಮೋದಿ ಸ್ವಾಗತಕ್ಕೆ ಬಿಜೆಪಿ ಮುಖಂಡರಿಗೆ ಬ್ಯಾರಿಕೇಡ್ ನಲ್ಲಿ ನಿಲ್ಲುವಷ್ಟು ಪುಣ್ಯ ಸಿಕ್ಕಿದೆ ಎಂದು ವ್ಯಂಗ್ಯವಾಡಿದರು.

ಮಕ್ಕಳ ಸಂಖ್ಯೆ ತೀರಾ ಕಡಿಮೆ ಇರುವ ಶಾಲೆಗಳನ್ನು ವಿಲೀನಗೊಳಿಸುವಂತೆ ಶಾಸಕರುಗಳಿಂದ ಸಲಹೆಗಳು ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಪಡೆದುಕೊಳ್ಳಲಾಗುವುದು. ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದರೆ ಮಕ್ಕಳ ಸಂಖ್ಯೆ ಕಡಿಮೆ ಇರುವ ಕಡೆ ಶಿಕ್ಷಕರಿಗೆ ಕೆಲಸವೇ ಇಲ್ಲದಂತಾಗಿದೆ. ಮಕ್ಕಳಿಗೂ ಶಾಲಾ ವಾತಾವರಣ ಹಿತಕರವಾಗಿರುವುದಿಲ್ಲ. ಸಾರಿಗೆ ವ್ಯವಸ್ಥೆ ಅನುಕೂಲ ಇರುವ ಕಡೆ ಮಕ್ಕಳ ಸಂಖ್ಯೆ ಇರುವ ಶಾಲೆಗಳನ್ನು ವಿಲೀನ ಮಾಡಿದರೆ ಅನಕೂಲವಾಗುವುದು ಎಂಬ ಮಾತು ಕೇಳಿಬಂದಿವೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯಶಿಕ್ಷಣ ನೀತಿ ಜಾರಿಗೆ ತಯಾರಿಗಳು ನಡೆಯುತ್ತಿದ್ದು, ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಕೆಲಸಗಳು ನಡೆಯುತ್ತಿವೆ. ಎನ್.ಇ.ಪಿ ರದ್ದು ಮಾಡುವುದರಿಂದ ಇಲಾಖೆಗೆ ಕೇಂದ್ರದ ಅನುದಾನ ಕೊರತೆಯಾಗಲಿದೆ. ಈ ಬಗ್ಗೆ ಕೇಂದ್ರಸರಕಾರದ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಲಾಗುವುದು. ರಾಜ್ಯ ಶಿಕ್ಷಣ ನೀತಿಯ ಜಾರಿಯೊಂದಿಗೆ ಶಿಕ್ಷಕರಿಗೆ ತರಬೇತಿ ನೀಡಲು ಆದ್ಯತೆ ನೀಡಲಾಗುವುದು. ಡಯೆಟ್‌ನಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಸಮರ್ಪಕ ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಸರಕಾರಿ ಶಾಲೆಗಳ ಬಲವರ್ದನೆಗೆ ಆದ್ಯತೆ ನೀಡಲಾಗುವುದು. ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಯಾವ ರೀತಿಯ ಶಿಕ್ಷಣ ಬೇಕು ಅದನ್ನು ಕೊಡುವುದು ನಮ್ಮ ಕೆಲಸ. ಯಾವುದೇ ವಿಚಾರಗಳನ್ನು ಹೇರಿಕೆ ಮಾಡುವುದು ಶಿಕ್ಷಣ ಇಲಾಖೆ ಕೆಲಸವಲ್ಲ.ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಇಂಗ್ಲೀಷ್ ಕಲಿಕೆಗೆ ಈಗಾಗಲೇ ಆದ್ಯತೆ ನೀಡಲಾಗಿದೆ. ಪಬ್ಲಿಕ್ ಶಾಲೆಗಳನ್ನು ಹೆಚ್ಚಾಗಿ ಆರಂಭಿಸುವ ದಿಸೆಯಲ್ಲಿ ಸರಕಾರ ಮುಂದಡಿಯಿಟ್ಟಿದೆ. ಪ್ರತಿಜಿಲ್ಲೆಗಳ ಪ್ರವಾಸ ಮಾಡುತಿದ್ದು, ಸರಕಾರಿ ಶಾಲೆಗಳ ಮೂಲಸೌಕರ್ಯದ ಬಗ್ಗೆ ವರದಿ ತರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಲಾಗುವುದು. ಸಿಎಂ ಮತ್ತು ಡಿಸಿಎಂ ಇಬ್ಬರೂ ನನ್ನ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಿ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಲೋಕಸಭೆ ಚುನಾವಣೆ ತಯಾರಿ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿದವರಿಗೆ ಸ್ವಾಗತ. ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪಕ್ಷದ ನಾಯಕರ ತೀರ್ಮಾನಕ್ಕೆ ಬಿಟ್ಟಿದ್ದು, ಪಕ್ಷಕ್ಕೆ ಲಾಭವಾಗುವವರನ್ನು ಮಾತ್ರ ಸೇರ್ಪಡೆಮಾಡಿಕೊಳ್ಳಲಾಗುವುದು. ಅಪಾಯಕಾರಿಗಳನ್ನು ದೂರ ಇಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಪಕ್ಷಕ್ಕೆ ಬರುವ ನಾಯಕರ ಬಗ್ಗೆ ಕಾರ್ಯಕರ್ತರು ಮತ್ತು ಮುಖಂಡರು ಬಹಿರಂಗವಾಗಿ ಹೇಳಿಕೆ ನೀಡಬಾರದು. ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ದರಾಗಿರಬೇಕು. ಆಯನೂರು ಮಂಜುನಾಥ್ ಅವರಂತಹ ಹಿರಿಯ ನಾಯಕರು ಬಂದಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಜಿ.ಡಿ.ಮಂಜುನಾಥ್, ಎಸ್.ಕೆ.ಮರಿಯಪ್ಪ, , ಕಾಶಿ ವಿಶ್ವನಾಥ್ ,ರಮೇಶ್ ಶಂಕರಘಟ್ಟ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X