Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ವಿಚಾರದಲ್ಲಿ ಒಗ್ಗಟ್ಟು,...

ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Sept 2023 1:27 PM IST
share
ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ, ಸೆ.19: "ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟ್ಟಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ,ಕೆ,ಶಿವಕುಮಾರ್ ತಿಳಿಸಿದ್ದಾರೆ.

ಹೊಸದಿಲ್ಲಿಯ ತಾಜ್ ಹೋಟೆಲ್ ನಲ್ಲಿಂದು ಬೆಳಗ್ಗೆ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು “ಕಾವೇರಿ ವಿಚಾರವಾಗಿ ಸಂಸತ್ ಅಧಿವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ” ಎಂದರು.

“ಮಂಗಳವಾರ ತಡ ರಾತ್ರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಮುಖ್ಯಮಂತ್ರಿ ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಪರಿಸ್ಥಿತಿ ವಿವರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಮಳೆ ಕಡಿಮೆ ಬಿದ್ದಾಗ ನೀರನ್ನು ಎಷ್ಟು ಹಂಚಿಕೆ ಮಾಡಬೇಕು ಎನ್ನುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸರಿಯಾದ ಸೂತ್ರ ಹಂಚಿಕೆ ಮಾಡಿಲ್ಲ. 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಹೇಳಿರುವುದು ಅವೈಜ್ಞಾನಿಕ ಎಂದು ಹೇಳಿದರು.

ಸುಪ್ರೀಂ ಕೋರ್ಟಿನಲ್ಲಿ ನ್ಯಾಯ ಸಿಗುವ ಭರವಸೆ

“ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಅತ್ಯಂತ ಕಡಿಮೆ ಇದ್ದು, ಇದನ್ನು ಸುಪ್ರೀಂ ಕೋರ್ಟಿಗೆ ಮನವರಿಕೆ ಮಾಡುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವಸೆಯಿದೆ. ಕಳೆದ 120 ವರ್ಷಗಳಲ್ಲೇ ಅತ್ಯಂತ ಕಷ್ಟದ ಸಂದರ್ಭವನ್ನು ಕರ್ನಾಟಕ ಎದುರಿಸುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಗೆ ಆದೇಶ ನೀಡಿದ್ದು ಇಷ್ಟೆಲ್ಲಾ ಸಂಕಷ್ಟಗಳಿಗೆ ದಾರಿ ಮಾಡಿಕೊಟ್ಟಿದೆ" ಎಂದರು.

"ರಾಜ್ಯದ ನೆಲ- ಜಲದ ಸಂರಕ್ಷಣೆ ಸದಾ ಬೆನ್ನೆಲುಬಾಗಿ ನಾವು ನಿಲ್ಲುತ್ತೇವೆ ಎಂದು ಸಭೆಗೆ ಬಂದಿದ್ದಂತಹ ಬಿಜೆಪಿ, ಕಾಂಗ್ರೆಸ್, ಜನತದಳದ ಮತ್ತು ಪಕ್ಷೇತರ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ಕರ್ನಾಟಕ ಸರ್ಕಾರ ಅಭಾರಿಯಾಗಿರುತ್ತದೆ" ಎಂದು ಹೇಳಿದರು.

ಕಾಂಗ್ರೆಸ್ ಕಂಡ ಕನಸು ನನಸಾಗಿದೆ

ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, "ಮಹಿಳಾ ಮೀಸಲಾತಿ ಮಸೂದೆ ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ರಾಜೀವ್ ಗಾಂಧಿ 73 ಮತ್ತು 74 ನೇ ತಿದ್ದುಪಡಿ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಗೆ ಮುನ್ನುಡಿ ಬರೆದಿದ್ದರು, ಯುಪಿಎ ಎರಡನೇ ಅವಧಿಯಲ್ಲಿ ಸೋನಿಯಾ ಗಾಂಧಿ ಮುಂದಾಳತ್ವದಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು, ಆದರೆ ಲೋಕಸಭೆಯಲ್ಲಿ ಬಹುಮತ ದೊರೆತಿರಲಿಲ್ಲ. ಮಸೂದೆಗೆ ಈಗ ಒಪ್ಪಿಗೆ ದೊರೆತಿರುವುದನ್ನು ನಾವು ಸ್ವಾಗತಿಸುತ್ತೇವೆ, ಇದೊಂದು ಐತಿಹಾಸಿಕ ನಿರ್ಧಾರ" ಎಂದು ಬಣ್ಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X