ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ

ಬೆಂಗಳೂರು, ಅ.30: ನಗರದ ಮಹಾಲಕ್ಷ್ಮೀ ಲೇಔಟ್‍ನಲ್ಲಿರುವ ನಟ ಮತ್ತು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ 5 ಕೆ.ಜಿ ಚಿನ್ನ ಹಾಗೂ 6 ಲಕ್ಷ ರೂ. ನಗದು ಕಳ್ಳತನ ನಡೆದಿರುವುದು ವರದಿಯಾಗಿದೆ.
ಈ ಸಂಬಂಧ ಭ್ರಮರೇಶ್ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಕಳ್ಳರ ಪತ್ತೆಗೆ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಭ್ರಮರೇಶ್ ಅವರು ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆಂದು ತೆರಳಿದ್ದರು. ಈ ವೇಳೆ ಕಳ್ಳರು ತಮ್ಮ ಕೈಚೆಳಕ ತೋರಿಸಿದ್ದಾರೆ. ಪ್ರವಾಸ ಮುಗಿಸಿಕೊಂಡು ಅ.29ರ ರಾತ್ರಿ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
Next Story





