Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ...

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ ಚಂದ್ರೇಗೌಡ ನಿಧನ

ವಾರ್ತಾಭಾರತಿವಾರ್ತಾಭಾರತಿ7 Nov 2023 8:09 AM IST
share
ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ ಚಂದ್ರೇಗೌಡ ನಿಧನ

ಚಿಕ್ಕಮಗಳೂರು: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ(87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

1936 ಆಗಸ್ಟ್ 26 ರಂದು ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ದಂಪತಿಯ ಪುತ್ರನಾಗಿ ಜನಿಸಿದ್ದ ಚಂದ್ರೇಗೌಡ ಆಪ್ತ ವಲಯದಲ್ಲಿ ಡಿಬಿಸಿ ಎಂದೇ ಜನಾನುರಾಗಿಯಾಗಿದ್ದರು.

1971ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಅವರು, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರಾಗುವ ಮೂಲಕ ನಾಲ್ಕೂ ಸದನಗಳಲ್ಲಿ ಸದಸ್ಯರಾಗಿದ್ದರು.

2014ರ ಬಳಿಕ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ಅವರು, ದಾರದಹಳ್ಳಿಯ ತಮ್ಮ ‘ಪೂರ್ಣಚಂದ್ರ’ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

ಮೃತ ಚಂದ್ರೇಗೌಡ ಅವರು ಪತ್ನಿ ಪೂರ್ಣಿಮಾ ಹಾಗೂ ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹಿರಿಯ ರಾಜಕೀಯ ನಾಯಕನ ಅಗಲಿಕೆಗೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ‌ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು.

ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು… pic.twitter.com/vkW0lPkVFj

— Basavaraj S Bommai (@BSBommai) November 7, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X