Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರವೇ ಬೆಳಗಾವಿಯಲ್ಲಿ ಇದ್ದರೂ...

ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ ಬರಲಿಲ್ಲವೇಕೆ?: ಬಿಜೆಪಿ ಸತ್ಯಶೋಧನಾ ಸಮಿತಿ

ವಾರ್ತಾಭಾರತಿವಾರ್ತಾಭಾರತಿ16 Dec 2023 2:58 PM IST
share
ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ ಬರಲಿಲ್ಲವೇಕೆ?: ಬಿಜೆಪಿ ಸತ್ಯಶೋಧನಾ ಸಮಿತಿ

ಬೆಂಗಳೂರು:ಮುಖ್ಯಮಂತ್ರಿ ಸಹಿತ ರಾಜ್ಯ ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳ, ಸಂತ್ರಸ್ತೆಯನ್ನು ಭೇಟಿ ಮಾಡಿಲ್ಲವೇಕೆ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಂಸದರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರ ನಿಯೋಗವು ಇಂದು ಬೆಳಗಾವಿಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದ ಸ್ಥಳ ಹಾಗೂ ಸಂತ್ರಸ್ತೆಯನ್ನು ಭೇಟಿ ಮಾಡಿ ಘಟನೆಯ ಮಾಹಿತಿ ಸಂಗ್ರಹಿಸಿತು.


ಅಪರಾಜಿತಾ ಸಾರಂಗಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ರಾಷ್ಟ್ರವೇ ತಲೆತಗ್ಗಿಸುವ ಘಟನೆ ಇದಾಗಿದೆ. ಸರಕಾರದ ಪ್ರಮುಖರು ಸಂತ್ರಸ್ತೆಯನ್ನು ಯಾಕೆ ಭೇಟಿ ಮಾಡಿಲ್ಲ. ಇಂಥ ಘಟನೆ ಯಾಕೆ ಆಗಿದೆ? ಘಟನೆ ನಡೆದ ಮೇಲೆ ಕೂಡ ರಾಜ್ಯ ಸರಕಾರ ವಿಳಂಬವಾಗಿ ಸ್ಪಂದಿಸುತ್ತಿದೆ ಎಂದು ಪ್ರಶ್ನಿಸಿದರು.

ಘಟನೆ ನಡೆದು 2 ಗಂಟೆವರೆಗೂ ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಠಾಣಾಧಿಕಾರಿಗೆ ಸ್ಥಳಕ್ಕೆ ಹೋಗಬೇಕಾದಷ್ಟು ಮಹತ್ವದ ಪ್ರಕರಣ ಎಂದು ಅನಿಸಲಿಲ್ಲವೇ? ಮಹಿಳೆ, ಅದೂ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಇದಾಗಿದ್ದರೂ ಅವರು ಕೂಡಲೇ ಸ್ಥಳಕ್ಕೆ ತೆರಳಲಿಲ್ಲವೇಕೆ ಎಂದು ಕೇಳಿದರು. ರಾಜ್ಯದ ಮಹಿಳೆಯರ ಸುರಕ್ಷತೆ ರಾಜ್ಯ ಸರಕಾರದ ಪ್ರಥಮ ಆದ್ಯತೆ ಆಗಬೇಕು. ಇದು ಮಹಿಳೆಯರ ಘನತೆಯ ಪ್ರಶ್ನೆ ಎಂದು ಅಭಿಪ್ರಾಯಪಟ್ಟರು.

ಶ್ರೀಮತಿ ಆಶಾ ಲಾಕ್ರಾ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ವಸ್ತುಸ್ಥಿತಿ ತಿಳಿಯಲು ಇಲ್ಲಿ ಬಂದಿದ್ದೇವೆ.ಮಧ್ಯರಾತ್ರಿ ಅಸಹಾಯಕ ಮಹಿಳೆಯ ಮೇಲೆ ಆಕ್ರಮಣ ನಡೆಸಲಾಗಿದೆ. ಮಹಿಳೆಯನ್ನು ಪರೇಡ್ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ತಡವಾಗಿ ಪೊಲೀಸರು ಆಗಮಿಸಿದ್ದಾರೆ. ಠಾಣೆ ಬಹಳ ದೂರದಲ್ಲಿ ಇಲ್ಲ; ಆದರೂ ಪೊಲೀಸರು ಸ್ಪಂದಿಸಿಲ್ಲವೇಕೆ? ಎಂದು ಪ್ರಶ್ನಿಸಿದರು.

ಘಟನೆ ನಡೆದ ಗ್ರಾಮವು ಪೊಲೀಸ್ ಠಾಣೆಯಿಂದ 10-11 ಕಿಮೀ ದೂರದಲ್ಲಿದೆ. ತುರ್ತು ಸ್ಪಂದನಾ ವ್ಯವಸ್ಥೆ ಠಾಣೆಯಲ್ಲಿ ಇದ್ದರೆ ಕೇವಲ 10-15 ನಿಮಿಷದಲ್ಲಿ ಅಲ್ಲಿಗೆ ಧಾವಿಸಬೇಕಿತ್ತು. ಆದರೆ, ಕೂಡಲೇ ಬಂದಿಲ್ಲ. ಠಾಣಾಧಿಕಾರಿ ಎನಿಸಿದ ಇನ್‍ಸ್ಪೆಕ್ಟರ್ ಇದನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಇದನ್ನು ಸಣ್ಣ ಘಟನೆ ಎಂದು ಭಾವಿಸಿದ್ದರು. ಕಿರಿಯ ಅಧಿಕಾರಿಗಳನ್ನು ಕಳಿಸಿದ್ದು, ಬೆಳಿಗ್ಗೆ ಅಲ್ಲಿಗೆ ಬಂದಿದ್ದಾರೆ ಎಂದು ಆಕ್ಷೇಪಿಸಿದರು.

ಠಾಣಾಧಿಕಾರಿ ಇಷ್ಟು ನಿರ್ಲಕ್ಷ್ಯ ವಹಿಸಲು ಹೇಗೆ ಸಾಧ್ಯ? ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ನಮಗೆ ಅನಿಸುತ್ತಿದೆ. ಠಾಣಾಧಿಕಾರಿಯ ನಿರ್ಲಕ್ಷ್ಯವು ಕಾಂಗ್ರೆಸ್ ಸರಕಾರದ ಮಾನಸಿಕತೆಯ ಪ್ರತೀಕ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 43 ಸಾವಿರ ಕ್ರಿಮಿನಲ್ ಕೇಸುಗಳು ದಾಖಲಾಗಿವೆ ಎಂದು ಟೀಕಿಸಿದರು.

ತಂಡದ ಇತರ ಸದಸ್ಯರು ಹಾಗೂ ಬಿಜೆಪಿಯ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಇದ್ದರು.

ಬಿಜೆಪಿಯ ಸತ್ಯಶೋಧನಾ ತಂಡವು ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೆರ್ಲಿ, ಬೆಳಗಾವಿ ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಶ್ಮಾ ಪಾಟೀಲ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ಮಾಜಿ ಎಂ.ಎಲ್.ಸಿ ಮಹಾಂತೇಶ ಕವಟಗಿಮಠ, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ಮುಖಂಡರಾದ ಬಸವರಾಜ ಹುಂದ್ರಿ ಹಾಗೂ ಪವನ ಕತ್ತಿ ಅವರ ಜೊತೆ ಮಾತನಾಡಿ, ಈ ಅಮಾನವೀಯ ಕೃತ್ಯದ ಕುರಿತ ಮಾಹಿತಿಗಳನ್ನು ಪಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X