Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ಸರಕಾರ ನನ್ನನ್ನು ಜೈಲಿಗೆ ಹಾಕಿ...

ನನ್ನ ಸರಕಾರ ನನ್ನನ್ನು ಜೈಲಿಗೆ ಹಾಕಿ ದೊಡ್ಡ ಪುರಸ್ಕಾರ ನೀಡಿದೆ: ಪ್ರೊ.ಆನಂದ್ ತೇಲ್ತುಂಬ್ಡೆ

ವಾರ್ತಾಭಾರತಿವಾರ್ತಾಭಾರತಿ1 Feb 2024 9:58 PM IST
share
ನನ್ನ ಸರಕಾರ ನನ್ನನ್ನು ಜೈಲಿಗೆ ಹಾಕಿ ದೊಡ್ಡ ಪುರಸ್ಕಾರ ನೀಡಿದೆ: ಪ್ರೊ.ಆನಂದ್ ತೇಲ್ತುಂಬ್ಡೆ

ಬೆಂಗಳೂರು: ನಿಮ್ಮ ಮಹಾರಾಷ್ಟ್ರ ಸರಕಾರ ನಿಮ್ಮನ್ನು ಪುರಸ್ಕರಿಸುವ ಮೊದಲೇ ನಮ್ಮ ಕರ್ನಾಟಕ ಸರಕಾರ ನಿಮ್ಮನ್ನು ಪುರಸ್ಕರಿಸಿದೆ ಎಂದು ಕೆಲವರು ನನಗೆ ಹೇಳುತ್ತಿದ್ದಾರೆ. ಆದರೆ ನನ್ನ ರಾಜ್ಯ ಸರಕಾರ ನನ್ನನ್ನು ಜೈಲಿಗೆ ಹಾಕಿ ಈಗಾಗಲೇ ಬಹಳ ದೊಡ್ಡ ಪುರಸ್ಕಾರ ನೀಡಿ ಬಿಟ್ಟಿದೆ ಎಂದು ಹೋರಾಟಗಾರ ಪ್ರೊ. ಆನಂದ್ ತೇಲ್ತುಂಬ್ಡೆ ಬೇಸರ ವ್ಯಕ್ತಪಡಿಸಿದ್ದಾರೆ.

ಬುಧವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ನೀಡುವ ಪ್ರತಿಷ್ಠಿತ ‘ಬಸವ ಪ್ರಶಸ್ತಿ’ಯನ್ನು ಸ್ವೀಕಕರಿಸಿ ಮಾತನಾಡಿದ ಅವರು, ‘ಕರ್ನಾಟಕ ಸರಕಾರ ನೀಡಿರುವ ಬಸವ ಪುರಸ್ಕಾರ ನನಗೆ ವೈಯಕ್ತಿಕವಾಗಿ ನೀಡಿದ ಪ್ರಶಸ್ತಿಯಲ್ಲ. ಈ ಜಗತ್ತನ್ನು ಜನರಿಗೆ ಸ್ವಲ್ಪ ಉತ್ತಮವಾಗಿಸಲು ಬಿಡುವಿಲ್ಲದೆ ದುಡಿಯುತ್ತಿರುವ ಅಸಂಖ್ಯಾತ ಹೋರಾಟಗಾರರಿಗೆ ಈ ಗೌರವ ಸಲ್ಲುತ್ತದೆ ಎಂದು ಬಣ್ಣಿಸಿದರು.

ನಾನು ನಿಮೆಗೆಲ್ಲರಿಗೂ ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರು ಮತ್ತು ನಾಡಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜನರಿದ್ದರೆ ಸರಕಾರ ಇರಲು ಸಾಧ್ಯ. ಈ ರೀತಿಯ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ನಾನು ಇದುವರೆಗೂ ಭಾಗಿಯಾಗಿರಲಿಲ್ಲ ಎಂದು ಅವರು ತಿಳಿಸಿದರು.

ಬಸವಣ್ಣ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನಾನು ಪಡೆಯುತ್ತಿರುವುದಂತೂ ನನಗೆ ಇನ್ನೂ ಸಂತೋಷವುಂಟು ಮಾಡಿದೆ. ನಾನು ಸುಮಾರು 20 ವರ್ಷಗಳ ಹಿಂದೆ ಬಸವಣ್ಣನವರ ವಚನಗಳನ್ನು ಓದಿದ್ದೆ. ಇದರ ಜೊತೆ ಬಸವಣ್ಣ ಕುರಿತ ಕೆಲ ಸಾಹಿತ್ಯವನ್ನೂ ಓದಿದ್ದೆ. ಹನ್ನೆರಡೆ ಶತಮಾನದಿಂದ ಇದುವರೆಗೂ ಬಸವಾದಿ ಶರಣರ ಚಿಂತನೆ ಹರಿದು ಬಂದಿದೆ ಎಂದು ಅವರು ನುಡಿದರು.

ನನಗೆ ತಿಳಿದ ಮಟ್ಟಿಗೆ, ಬಸವಾದಿ ಶರಣರು ಲೋಕಾಯತ, ಬುದ್ಧರ ಚಿಂತನಾ ಕ್ರಮವನ್ನೇ ಮುಂದುವರೆಸಿಕೊಂಡು ಬಂದಿದ್ದಾರೆ. ಮಾತ್ರವಲ್ಲದೆ ಅಂದು ಚಾಲ್ತಿಯಲ್ಲಿದ್ದಂತ ಎಲ್ಲ ಗೊಡ್ಡು ಸಂಪ್ರದಾಯಗಳನ್ನು ಅವರು ತಿರಸ್ಕರಿಸಿದರು. ಸಾಮಾಜಿಕ ತಾರತಮ್ಯವನ್ನು ತಿರಸ್ಕರಿಸಿದರು. ದೇವರನ್ನೂ ನಿರಾಕರಿಸಿದರು. ಅವರ ಕಲ್ಪನೆಯ ದೇವರು ಭಿನ್ನವಾದುದು ಮತ್ತು ಸಂಕೀರ್ಣವಾದುದು. ದಯೆಯನ್ನು ಅವರು ಉತ್ತೇಜಿಸಿದ್ದಾರೆ. ಇಂತಹವರ ಹೆಸರಿನಲ್ಲಿ ನಾನು ಪ್ರಶಸ್ತಿ ಪಡೆದಿರುವುದಕ್ಕೆ ನನಗೆ ಅಪಾರ ಸಂತೋಷವಿದೆ ಎಂದು ಪ್ರೊ.ಆನಂದ್ ತೇಲ್ತುಂಬ್ಡೆ ಬಾವುಕರಾದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ನನಗೆ ಒಂದು ತರದ ವಿಚಿತ್ರ ಭಾವನೆ ಉಂಟಾಗಿದೆ. ಅದೇನೆಂದರೆ ಇವರು ಪ್ರಾಯಶಃ ಬಸವಣ್ಣ ಅವರ ಪರಂಪರೆಯನ್ನೇ ಮುಂದುವರೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರಂತೆ ಸಾಮಾಜಿಕ ನ್ಯಾಯದ ಕುರಿತು ಕಾಳಜಿ ಉಳ್ಳವರು, ಜನರ ಬಗ್ಗೆ ಕಾಳಜಿ ಉಳ್ಳವರು ಇಂದು ವಿರಳವಾಗಿದ್ದಾರೆ. ಕರ್ನಾಟಕದ ಜನರೊಂದಿಗೆ ನನಗೆ ಒಂದು ವಿಶೇಷ ಸಂಬಂಧವಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X