Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೋದಿಕರಣದ ರಾಜಕೀಯವನ್ನು ಕೊನೆಗಾಣಿಸುವುದು...

ಮೋದಿಕರಣದ ರಾಜಕೀಯವನ್ನು ಕೊನೆಗಾಣಿಸುವುದು ಅನಿವಾರ್ಯ: ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ1 Feb 2024 10:09 PM IST
share
ಮೋದಿಕರಣದ ರಾಜಕೀಯವನ್ನು ಕೊನೆಗಾಣಿಸುವುದು ಅನಿವಾರ್ಯ: ಶಿವಸುಂದರ್

ಬೆಂಗಳೂರು: ‘ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿರುವ ನಾವು ಮೋದಿಕರಣದ ರಾಜಕೀಯವನ್ನು ಕೊನೆಗಾಣಿಸುವುದು ಅನಿವಾರ್ಯ. ದೇಶದ ಆರ್ಥಿಕತೆಯಲ್ಲಿ ಅದಾನೀಕರಣ, ನ್ಯಾಯಾಂಗದಲ್ಲಿ ಅಯೋಧ್ಯೀಕರಣವನ್ನು ತಡೆಯದಿದ್ದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದು ಕಷ್ಟ’ ಎಂದು ಅಂಕಣಕಾರ ಶಿವಸುಂದರ್ ಆತಂಕ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದ ಜೈಭೀಮ್ ಭವನದಲ್ಲಿ ‘ಬಹುತ್ವ ಕರ್ನಾಟಕ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್(ಪಿಯುಸಿಎಲ್), ಎಐಎಲ್‍ಎಜೆ’ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಬಾಬರಿ ನಂತರದ ಕಾಲಘಟ್ಟ: ಮುಂದಿರುವ ಸಾಂಸ್ಕೃತಿಕ ಹಾಗೂ ಸಾಂವಿಧಾನಿಕ ಮಾರ್ಗಗಳು’ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಮ ಮಂದಿರದ 400 ವರ್ಷಗಳ ಇತಿಹಾಸದಲ್ಲಿ ಏನಾದರೂ ಆಗಿರಬಹುದು. ಅಯೋಧ್ಯೆಯಲ್ಲಿ ಮಂದಿರ ಕೆಡವಿ ಮಸೀದಿ ಕಟ್ಟಿರುವ ಯಾವ ಪುರಾವೆಯೂ ಇಲ್ಲ. ಬಲವಿದ್ದವರ ಭಕ್ತಿಗೆ ಪುರಾವೆಗಳನ್ನು ಕೇಳಲಾಗುವುದಿಲ್ಲ ಎನ್ನುವುದು ಸಾಬೀತಾಗಿದೆ. ಪ್ರಧಾನಿ ಮೋದಿ ಹೇಳುತ್ತಾರೆ, ‘ರಾಮನೆಂದರೆ ರಾಷ್ಟ್ರವೆಂದು’. ಇದು ಮೋದಿಯಿಂದ ಪ್ರಾರಂಭವಾಗಿದ್ದಲ್ಲ, ಸಾವರ್ಕರ್, ‘ಶ್ರೀರಾಮ ಹಿಂದುತ್ವದ ಸಾಮ್ರಾಟ’ ಎಂದು ಹೇಳಿದ್ದರು. ಅಲ್ಲಿಂದ ಬ್ರಾಹ್ಮಣ್ಯದ ರಾಜಕಾರಣಕ್ಕೆ ಶ್ರೀರಾಮ ಏಜೆಂಟ್ ಆಗಿಬಿಟ್ಟರು. ಇದನ್ನು ದೇಶದ ಜನರ ತಲೆಯಿಂದ ತೆಗೆದಾಗ ಮೋದಿಯನ್ನು ಸಂಸತ್‍ನಿಂತ ಹೊರಗೆ ಕಳಿಸಬಹುದು ಎಂದು ಶಿವಸುಂದರ್ ಹೇಳಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಆರ್.ಮೋಹನ್‍ರಾಜ್ ಮಾತನಾಡಿ, ಒಂಭತ್ತು ವರ್ಷದಲ್ಲಿ ಪ್ರಧಾನಿ ಮೋದಿ ಎಲ್ಲ ಸಾರ್ವಜನಿಕ ಸಸ್ಥೆಗಳನ್ನು ಮಾರಾಟ ಮಾಡಿದ್ದಾರೆ. ಹೀಗಾದರೆ ಮೀಸಲಾತಿಗೆ ಹೇಗೆ ಪ್ರಾಮುಖ್ಯತೆ ಬರುತ್ತೆ. ಇಂದು ಎಸ್‍ಸಿ, ಎಸ್‍ಟಿ ಮೀಸಲು ಕ್ಷೇತ್ರಗಳು ಬಿಜೆಪಿಯ ಪಾಲಾಗಿದ್ದು, ರಾಜ್ಯದ ಯುವಜನರು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು.

‘ನಮ್ಮನ್ನು ದೇವರು, ಧರ್ಮಗಳು ಸಂಕೋಲೆಗಳಿಂದ ಬಿಡುಗಡೆ ಮಾಡಿಲ್ಲ. ಬಿಡುಗಡೆ ಸಾಧ್ಯವಾಗಿದ್ದು ಸಂವಿಧಾನದಿಂದ. ಶ್ರೀರಾಮಯೆಂದರೆ ಮನುಧರ್ಮ ಇದ್ದಂತೆ. ಅದು ಮತ್ತೆ ವರ್ಣಾಶ್ರಮದ ಕಡೆಗೆ ಕೊಂಡೊಯ್ಯುತ್ತದೆ. ಪ್ರಧಾನಿ ಮೋದಿ ಹಲವು ಬಾರಿ ಸುಳ್ಳುಗಳನ್ನು ಹೇಳಿ ಜನರನ್ನು ನಂಬಿಸುತ್ತಾರೆ. ನಾವು ಸತ್ಯವನ್ನು ಹೇಳಿ ಜನರನ್ನು ಜಾಗೃತಗೊಳಿಸಬೇಕು ಎಂದು ಅವರು ಸಲಹೆ ನೀಡಿದರು. ಸಂವಾದದಲ್ಲಿ ವಕೀಲೆ ಮೈತ್ರೇಯಿ ಕೃಷ್ಣನ್ ಮಾತನಾಡಿದರು. ವಿವಿಧ ಸಂಘಟನೆಗಳ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X