Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಧಿವೇಶನ | ಅಕ್ರಮ ಮದ್ಯ ಮಾರಾಟ ತಡೆಗೆ...

ಅಧಿವೇಶನ | ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ : ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ4 March 2025 6:56 PM IST
share
ಅಧಿವೇಶನ | ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ : ಎಚ್.ಕೆ.ಪಾಟೀಲ್

ಬೆಂಗಳೂರು: ರಾಜ್ಯವ್ಯಾಪಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಿಶೇಷ ಗಸ್ತು ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಕೌಜಲಗಿ ಮಹಾಂತೇಶ್ ಶಿವಾನಂದ್ ಪ್ರಶ್ನೆಗೆ ಉತ್ತರಿಸಿದ ಅವರು, ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್‍ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ, ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಲಾಗುವುದು ಎಂದರು.

ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ವಹಿಸಲಾಗುತ್ತಿದೆ. ಎಲ್ಲ ಮದ್ಯ ಮಾರಾಟ ಸನ್ನದುಗಳನ್ನು ನಿಯಮಿತವಾಗಿ ಮಾಸಿಕವಾಗಿ ಪರಿಶೀಲಿಸಲಾಗುತ್ತಿದ್ದು ಕಾಯ್ದೆ,ನಿಯಮ ಷರತ್ತು ಉಲ್ಲಂಘನೆಯಾದಲ್ಲಿ ಅಂತಹ ಸನ್ನದುದಾರರ ವಿರುದ್ಧ ಅಬಕಾರಿ ಕಾಯ್ದೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಅತ್ತಿಕ್ಕಲು ಕ್ರಮ ವಹಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಸಂರಕ್ಷಣಾಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದೂ ಉಲ್ಲೇಖಿಸಿದರು.

ಗ್ರಾಮ ಸಭೆಗಳಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಶಾಲಾ,ಕಾಲೇಜುಗಳಲ್ಲಿ ಮದ್ಯ ವ್ಯಸನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. 2024-25ನೆ ಸಾಲಿನ ಜನವರಿ ಅಂತ್ಯದವರೆಗೆ 17,390 ಮೊಕದ್ದಮೆಗಳನ್ನು ದಾಖಲಿಸಿ ಅದೇ ಅವಧಿಯಲ್ಲಿ 18,253 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X