ಬಿಜೆಪಿಗೆ ಹೋಗುವಷ್ಟು ಮೂರ್ಖರು ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್
"ಕಾಂಗ್ರೆಸ್ ಬಾಗಿಲು ಬಡಿಯುತ್ತಿರುವ ಬಿಜೆಪಿ-ಜೆಡಿಎಸ್ ಕೂಟದ 18-20 ಶಾಸಕರು"

ಎಂ.ಬಿ.ಪಾಟೀಲ್
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ನಾಯಕತ್ವದ ಗೊಂದಲವೇನೂ ಇಲ್ಲ. ಜತೆಗೆ, ಬಿಜೆಪಿ ಹೋಗುವಷ್ಟು ಯಾರೂ ಅಷ್ಟು ಮೂರ್ಖರಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಐವತ್ತು-ಆರವತ್ತು ಶಾಸಕರ ಮೇಲೆ ಕಣ್ಣಿಟ್ಟು, ಏಜೆಂಟರನ್ನು ಕಳಿಸುತ್ತಿದೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ. ಆದರೆ, ನಮ್ಮಲ್ಲಿ 140ಕ್ಕೂ ಹೆಚ್ಚು ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕೆಂದರೆ 80ರಿಂದ 90 ಶಾಸಕರು ಹೋಗಬೇಕು. ಈಗ ಯಾರೂ ಅಷ್ಟು ಮೂರ್ಖರಿಲ್ಲ ಎಂದು ಹೇಳಿದರು.
ಈ ಹಿಂದೆನೂ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲಾ ನಡೆಯುವುದಿಲ್ಲ. ವಾಸ್ತವವಾಗಿ, ಬಿಜೆಪಿ-ಜೆಡಿಎಸ್ ಕೂಟದ 18-20 ಶಾಸಕರೇ ಕಾಂಗ್ರೆಸ್ ಬಾಗಿಲು ಬಡಿಯುತ್ತಿದ್ದಾರೆ ಎಂದು ಅವರು ತಿಳಿಸಿದರು.
Next Story





