Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ಪೇಸ್ ಪಾರ್ಕ್ ಸಹಿತ ಹಲವು ಯೋಜನೆಗಳಿಗೆ...

ಸ್ಪೇಸ್ ಪಾರ್ಕ್ ಸಹಿತ ಹಲವು ಯೋಜನೆಗಳಿಗೆ ಪ್ರೋತ್ಸಾಹ ನೀತಿ; ವಾರದಲ್ಲಿ ಸಿಎಂ ಜತೆ ಚರ್ಚೆ

ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಸಚಿವರ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ30 July 2025 6:34 PM IST
share
ಸ್ಪೇಸ್ ಪಾರ್ಕ್ ಸಹಿತ ಹಲವು ಯೋಜನೆಗಳಿಗೆ ಪ್ರೋತ್ಸಾಹ ನೀತಿ; ವಾರದಲ್ಲಿ ಸಿಎಂ ಜತೆ ಚರ್ಚೆ

ಬೆಂಗಳೂರು : ಬಾಹ್ಯಾಕಾಶ ಮತ್ತು ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಸರಕಾರ ನೀಡುವ ರಿಯಾಯಿತಿಗಳ ಕುರಿತ ನೀತಿಯನ್ನು ರೂಪಿಸಲಾಗುತ್ತಿದೆ. ಈ ಸಂಬಂಧ ವಾರದಲ್ಲಿ ಕೈಗಾರಿಕಾ ಮತ್ತು ಐಟಿ-ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ವಿಸ್ತೃತ ಹೂಡಿಕೆ-ಪ್ರೋತ್ಸಾಹಕ ನೀತಿಗೆ ಸಂಬಂಧಿಸಿದ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ಬಳಿಕ ಸಿಎಂ ಭೇಟಿ ಮಾಡಿ ವಿಸ್ತೃತವಾಗಿ ಚರ್ಚಿಸಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತೀರ್ಮಾನಿಸಿದ್ದಾರೆ.

ಬುಧವಾರ ಖನಿಜ ಭವನದಲ್ಲಿ ಉಭಯ ಇಲಾಖೆಗಳ ಸಚಿವರು ಒಗ್ಗೂಡಿ ಜಾರಿಗೊಳಿಸಬೇಕಾದ ಯೋಜನೆಗಳು ಮತ್ತು ರೂಪಿಸಬೇಕಾದ ಉಪಕ್ರಮಗಳ ಕುರಿತು ಮಹತ್ತ್ವದ ಸಭೆ ನಡೆಸಿದರು. ಐಟಿ ಇಲಾಖೆಯು ಇಎಸ್‍ಡಿಎಂ ವಲಯಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕ ಕ್ರಮಗಳ ನೀತಿಯನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗಿ ಕೈಗಾರಿಕಾ ಇಲಾಖೆ ವಿದ್ಯುನ್ಮಾನ ತಯಾರಿಕೆ ವಲಯದಲ್ಲಿ ಹೂಡಿಕೆ ಆಕರ್ಷಣೆಗೆ ಕಾರ್ಯತಂತ್ರ ರೂಪಿಸಬೇಕಾದ ಅಗತ್ಯವಿದೆ. ಕೆಲವೆಡೆಗಳಲ್ಲಿ ಒಂದೇ ಯೋಜನೆಗೆ ಐಟಿ ಮತ್ತು ಕೈಗಾರಿಕೆ ಇಲಾಖೆಗಳೆರಡೂ ರಿಯಾಯಿತಿಗಳನ್ನು ಕೊಡುತ್ತಿದ್ದು, ಇದನ್ನು ಸರಿ ಮಾಡಬೇಕಾಗಿದೆ ಎನ್ನುವ ಅಭಿಪಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಸದ್ಯಕ್ಕೆ ನಮ್ಮಲ್ಲಿ ತಯಾರಾಗುತ್ತಿರುವ ಸ್ಮಾರ್ಟ್‍ಫೋನ್‍ಗಳಲ್ಲಿ ಶೇ.44ರಷ್ಟು ಅಮೆರಿಕಕ್ಕೆ ರಫ್ತಾಗುತ್ತಿದೆ. ಇದರಲ್ಲಿ ಮೊದಲು ಶೇ.61ರಷ್ಟು ಪಾಲು ಹೊಂದಿದ್ದ ಚೀನಾದ ಪ್ರಮಾಣ ಈಗ ಶೇ.25ಕ್ಕೆ ಕುಸಿದಿದೆ. ಆದರೆ, ವಿಯಟ್ನಾಂನ ಪಾಲು ಮಾತ್ರ ಶೇ.50ರಷ್ಟಿದೆ. ಈ ಸ್ಪರ್ಧೆಯನ್ನು ಪರಿಗಣಿಸಿ ಬಂಡವಾಳವನ್ನು ಸೆಳೆಯಬೇಕಾಗಿದೆ. ಜೊತೆಗೆ ಸ್ಮಾರ್ಟ್‍ಫೋನ್ ಉತ್ಪಾದನಾ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಇದಕ್ಕೆ ಪೂರಕವಾಗಿ ಈ ಕ್ಷೇತ್ರಕ್ಕೆ ಹಲವು ರಿಯಾಯಿತಿಗಳನ್ನು ಘೋಷಿಸಬೇಕಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಸ್ಪೇಸ್ ಪಾರ್ಕ್ ಭೂಮಿ: ಈ ಸಂದರ್ಭದಲ್ಲಿ ಮಾತನಾಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ತಮ್ಮ ಇಲಾಖೆಯು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್ ಪಾರ್ಕ್, ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್ ಸಕ್ರ್ಯೂಟ್ ಬೋರ್ಡ್(ಪಿಸಿಬಿ) ಪಾರ್ಕ್, ಕ್ವಿನ್‍ಸಿಟಿ/ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆಗಳಲ್ಲಿ ತಲಾ 100 ಎಕರೆಯಲ್ಲಿ ಗ್ಲೋಬಲ್ ಇನ್ನೋವೇಶನ್ ಸಿಟಿ, ಅಡಕನಹಳ್ಳಿ/ ಕೋಚನಹಳ್ಳಿಯಲ್ಲಿ 100 ಎಕರೆಯಲ್ಲಿ ಕಿಯೋನಿಕ್ಸ್ ಪ್ಲಗ್ ಪ್ಲೇ ಸೌಲಭ್ಯ ಕೇಂದ್ರದ ಅಭಿವೃದ್ಧಿ ಮೂಲಕ ‘ಗ್ಲೋಬಲ್ ಕೇಪಬಿಲಿಟಿ ಸೆಂಟರ್’ಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ.

ಡ್ರೋನ್ ಪರೀಕ್ಷಾ ಕೇಂದ್ರವು ನಿರ್ಜನ ಪ್ರದೇಶದಲ್ಲಿ ಇರಬೇಕು ಎನ್ನುವ ನಿಯಮವಿದೆ. ಆದ್ದರಿಂದ ಬೆಂಗಳೂರಿನ ಭಾಗವೇ ಆಗಿರುವ ಹೆಸರಘಟ್ಟದಲ್ಲಿ ಈ ಯೋಜನೆ ಬರುವುದು ಕಷ್ಟವಾಗಬಹುದು. ಆದ್ದರಿಂದ ಇದಕ್ಕೆ ಸೂಕ್ತ ಜಾಗ ಹುಡುಕುವುದು ಸೂಕ್ತ ಎಂದು ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ನೀರು ಪೂರೈಕೆ: ಡೇಟಾ ಸೈನ್ಸ್, ತಯಾರಿಕಾ ಸ್ಥಾವರಗಳು ಸೇರಿದಂತೆ ಕೈಗಾರಿಕೆಗಳು ಬೆಳೆಯಬೇಕೆಂದರೆ ವಿದ್ಯುತ್ ಮತ್ತು ನೀರಿನ ಭಾರೀ ಅಗತ್ಯವಿದೆ. ಹೀಗಾಗಿ ರಾಜ್ಯದಲ್ಲಿ ‘ಕೈಗಾರಿಕಾ ನೀರು ಭದ್ರತಾ ಕಾಯ್ದೆ’ಯನ್ನು (ಇಂಡಸ್ಟ್ರಿಯಲ್ ವಾಟರ್ ಸೆಕ್ಯುರಿಟಿ ಪಾಲಿಸಿ) ರೂಪಿಸುವ ಮತ್ತು ಕೈಗಾರಿಕಾ ಮರುಬಳಕೆ ವಿದ್ಯುತ್ ಉತ್ಪಾದನಾ ಪಾರ್ಕ್ ಸ್ಥಾಪಿಸುವ ಅಗತ್ಯ ಇದೆ. ನೈಸರ್ಗಿಕ ಅನಿಲದಿಂದ ವಿದ್ಯುತ್ ತಯಾರಿಸುವ ನಿಟ್ಟಿನಲ್ಲಿ ಗಂಭೀರ ಚರ್ಚೆ ಅಗತ್ಯ ಇದೆ ಎಂದರು.

ನೀರು ಪೂರೈಕೆ ಯೋಜನೆಯಡಿಯಲ್ಲಿ ಉದ್ಯಮಗಳಿಗೆ ಶೇ.50ರಷ್ಟು ನೀರನ್ನು ನಾವು ಪೂರೈಸುತ್ತೇವೆ. ಉಳಿದ ಶೇ.50ರಷ್ಟನ್ನು ಕೈಗಾರಿಕೆಗಳೇ ಸಂಸ್ಕರಿಸಿ, ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಿಗೆ ನೀರು ಪೂರೈಸಲು ಈಗಾಗಲೇ 2500ಕೋಟಿ ರೂ.ವೆಚ್ಚದ ಯೋಜನೆ ರೂಪಿಸಲಾಗಿದೆ. ಅಂತಹ ಮಾದರಿಯ ಸಾಧ್ಯತೆಗಳ ಬಗ್ಗೆ ಗಂಭೀರ ಆಲೋಚನೆ ನಡೆದಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ವೇಳೆ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಏಕ್‍ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ, ಐಟಿ ಇಲಾಖೆ ನಿರ್ದೇಶಕ ರಾಹುಲ್ ಸಂಕನೂರು ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X