Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಬಜೆಟ್‍ನಿಂದ ಬೆಂಗಳೂರು,...

ಕೇಂದ್ರ ಬಜೆಟ್‍ನಿಂದ ಬೆಂಗಳೂರು, ಕರ್ನಾಟಕಕ್ಕೆ ಗರಿಷ್ಠ ಪ್ರಯೋಜನ : ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ28 July 2024 4:31 PM IST
share
ಕೇಂದ್ರ ಬಜೆಟ್‍ನಿಂದ ಬೆಂಗಳೂರು, ಕರ್ನಾಟಕಕ್ಕೆ ಗರಿಷ್ಠ ಪ್ರಯೋಜನ : ನಿರ್ಮಲಾ ಸೀತಾರಾಮನ್

ಬೆಂಗಳೂರು : ಈ ಬಾರಿಯ ಕೇಂದ್ರ ಬಜೆಟ್‍ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಂಶೋಧನೆ ಮತ್ತು ಅಭಿವೃದ್ಧಿ ನೆರವಿನಿಂದ ಬೆಂಗಳೂರಿಗೆ ಗರಿಷ್ಠ ಪ್ರಯೋಜನ ಸಿಗಲಿದೆ. ಖಾಸಗಿ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಗೂ ಇದರಿಂದ ಪ್ರಯೋಜನ ಲಭಿಸುತ್ತದೆ. ಕೃಷಿ ಕ್ಷೇತ್ರದ ಡಿಜಿಟಲ್ ಪಬ್ಲಿಕ್ ಇನ್‍ಫ್ರಾಸ್ಟ್ರಕ್ಚರ್ (ಡಿಪಿಐ) ಬಳಕೆಗೆ ಬೆಂಗಳೂರು ಗರಿಷ್ಠ ಕೊಡುಗೆ ನೀಡಲಿದೆ" ಎಂದು ವಿವರಿಸಿದರು.

ಬಾಹ್ಯಾಕಾಶ ಕೇಂದ್ರಕ್ಕೆ ದೊಡ್ಡ ಮೊತ್ತದ ನಿಧಿ (ವೆಂಚರ್ ಕ್ಯಾಪಿಟಲ್) ಕೊಟ್ಟಿದ್ದು, ಇಸ್ರೋ ಸಂಬಂಧಿತ ಕೆಲಸಗಳು ಇಲ್ಲಿಯೂ ನಡೆಯುತ್ತಿವೆ. ಇದು ಬೆಂಗಳೂರಿಗೆ ದೊಡ್ಡ ಪ್ರಮಾಣದಲ್ಲಿ ನೆರವು ಕೊಡಲಿದೆ ಎಂದರು. ಸ್ಟಾರ್ಟಪ್‍ಗಳ ಮೇಲಿನ ಏಂಜೆಲ್ ಟ್ಯಾಕ್ಸ್ ರದ್ದು ಮಾಡಿದ್ದು, ಇದು ಗರಿಷ್ಠ ಸ್ಟಾರ್ಟಪ್‍ಗಳನ್ನು ಹೊಂದಿದ ಬೆಂಗಳೂರಿಗೆ ನೆರವು ಕೊಡಲಿದೆ. ಏಂಜೆಲ್ ಟ್ಯಾಕ್ಸ್ ಅನ್ನು ಯುಪಿಎ ಸರಕಾರ 2012ರಲ್ಲಿ ಜಾರಿ ಮಾಡಿತ್ತು. ಇದೀಗ ಅದನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ವಿಚಾರದಲ್ಲಿ ತಪ್ಪು ಮಾಹಿತಿ ಕೊಡಲಾಗುತ್ತಿದೆ. ಕೇಂದ್ರ ಸರಕಾರವು ಕರ್ನಾಟಕಕ್ಕೆ ಅದರ ಭಾಗವನ್ನು ಕೊಡುತ್ತಿಲ್ಲ ಎಂದು ತಿಳಿಸುತ್ತಿದ್ದು, ಇದು ಸಂಪೂರ್ಣ ಸುಳ್ಳು ಎಂದು ಆಕ್ಷೇಪಿಸಿದರು.

ಕರ್ನಾಟಕ ಸರಕಾರವು ಜನರಿಗೆ ಈ ವಿಷಯದಲ್ಲಿ ಸಮರ್ಪಕ ಮಾಹಿತಿ ಕೊಡುತ್ತಿಲ್ಲ ಎಂದ ಅವರು, 2004-14ರ ಯುಪಿಎ ಆಡಳಿತದಲ್ಲಿ ಕರ್ನಾಟಕವು 81,791 ಕೋಟಿ ತೆರಿಗೆ ಹಂಚಿಕೆ ನೆರವು ಪಡೆದಿತ್ತು. ಆದರೆ, ಎನ್‍ಡಿಎ ಆಡಳಿತದ ಅಡಿಯಲ್ಲಿ 2014-24ರಲ್ಲಿ 2,95,818 ಕೋಟಿ ನೆರವು ಗಳಿಸಿದೆ ಎಂದು ಅಂಕಿ ಅಂಶಗಳೊಂದಿಗೆ ಸಮರ್ಥಿಸಿಕೊಂಡರು.

ಯುಪಿಎ 10 ವರ್ಷಗಳ ಅವಧಿಯಲ್ಲಿ ಅನುದಾನ ನೆರವು 60,779 ಕೋಟಿ ಇದ್ದರೆ, ಮೋದಿಯವರ ನಾಯಕತ್ವದ 10 ವರ್ಷಗಳ ಅವಧಿಯಲ್ಲಿ 2,36,955 ಕೋಟಿ ಕರ್ನಾಟಕಕ್ಕೆ ಸಿಕ್ಕಿದೆ. 2024-25ರಲ್ಲಿ ಕರ್ನಾಟಕಕ್ಕೆ 45,485 ಕೋಟಿ ತೆರಿಗೆ ಹಂಚಿಕೆ ಸಿಕ್ಕಿದೆ ಎಂದರು. ಯುಪಿಎ ಅವಧಿಯಲ್ಲಿ ಒಂದು ವರ್ಷಕ್ಕೆ 8,179 ಕೋಟಿ ಸಿಗುತ್ತಿದ್ದುದು, ಈಗ ಮೋದಿಯವರ ಅವಧಿಯಲ್ಲಿ 45,485 ಕೋಟಿಗೆ ಏರಿದೆ. ತಪ್ಪು ಪ್ರಚಾರ ಮಾಡುವವರನ್ನು ಮಾಧ್ಯಮದವರು ಪ್ರಶ್ನಿಸಬೇಕು ಎಂದು ಮನವಿ ಮಾಡಿದರು.

ನಗರಗಳ ಯೋಜಿತ ಅಭಿವೃದ್ಧಿ ವಿಚಾರದಲ್ಲೂ ಬೆಂಗಳೂರಿಗೆ ಪ್ರಯೋಜನ ಸಿಗಲಿದೆ. ನಗರಗಳ ಮನೆ ನಿರ್ಮಾಣದಲ್ಲೂ ಬೆಂಗಳೂರು ವಿಶೇಷ ಲಾಭ ಪಡೆಯಲಿದೆ. ಮಹಿಳಾ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದು, ಕೆಲಸ ಮಾಡುತ್ತಿರುವ ಮಹಿಳೆಯರಿಗಾಗಿ ಮಹಿಳಾ ಹಾಸ್ಟೆಲ್ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.

ಎಂಎಸ್‍ಎಂಇಗಳು ದುಡಿಯುವ ಬಂಡವಾಳಕ್ಕೆ ವಾಣಿಜ್ಯ ಬ್ಯಾಂಕ್‍ಗಳಿಂದ ಸಾಲ ಪಡೆಯುತ್ತಿದ್ದವು. ಬ್ಯಾಂಕ್‍ಗಳು ಇನ್ನು ಮುಂದೆ ಯಂತ್ರೋಪಕರಣ, ಪೂರಕ ಉಪಕರಣ ಖರೀದಿಗೆ ಸಾಲ ಕೊಡಲಿವೆ. ಇದಕ್ಕೆ ಭದ್ರತೆಯ ಅವಶ್ಯಕತೆ ಇರುವುದಿಲ್ಲ. ವಾಣಿಜ್ಯ ಬ್ಯಾಂಕ್‍ಗಳು ಎಂಎಸ್‍ಎಂಇಯ ಕಾಲಕಾಲದ ಹಣದ ಅಗತ್ಯವನ್ನು ಗಮನಿಸುವುದಿಲ್ಲ ಎಂಬ ದೂರುಗಳಿದ್ದು, ಈ ಸಮಸ್ಯೆಯನ್ನು ದೂರ ಮಾಡಲು ಸಿಡ್ಬಿಯು ಪೀಣ್ಯದಂಥ ಕೈಗಾರಿಕಾ ಪ್ರದೇಶದಲ್ಲಿ ಶಾಖೆ ತೆರೆಯುವಂತೆ ಮಾಡುತ್ತೇವೆ ಎಂದು ಹೇಳಿದರು.

ಯುವಜನರಿಗೆ ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ಕೊಡಲಾಗಿದೆ. ಮೊದಲ ಬಾರಿಗೆ ಉದ್ಯೋಗ ಪಡೆಯುವವರಿಗೆ, ಉದ್ಯೋಗದಾತರಿಗೆ ಪ್ರಯೋಜನ, ಈಗಾಗಲೇ ಉದ್ಯೋಗ ಹೊಂದಿದ್ದು, ಬೇರೆಡೆ ಉದ್ಯೋಗ ಪಡೆಯುವವರು, ಉದ್ಯೋಗದಾತರಿಗೆ ಕೊಡುಗೆಗಳನ್ನು ನೀಡಿದ್ದು, ಇವೆಲ್ಲವೂ ಭವಿಷ್ಯನಿಧಿ ಸಂಘಟನೆ (ಇಪಿಎಫ್‍ಒ) ಮೂಲಕ ಜಾರಿ ಆಗಲಿವೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X