Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕ್ಲಸ್ಟರ್ ಕಿಚನ್ ಸ್ಥಾಪಿಸುವುದಿಲ್ಲ,...

ಕ್ಲಸ್ಟರ್ ಕಿಚನ್ ಸ್ಥಾಪಿಸುವುದಿಲ್ಲ, ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ

"ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ"

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ23 Nov 2026 1:54 PM IST
share
ಕ್ಲಸ್ಟರ್ ಕಿಚನ್ ಸ್ಥಾಪಿಸುವುದಿಲ್ಲ, ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ 1ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ ಯೋಜನೆಯಡಿ ಯಾವುದೇ ಕಾರಣಕ್ಕೂ ಕ್ಲಸ್ಟರ್ ಕಿಚನ್ ಸೆಂಟರ್‌ಗಳನ್ನು (ಕೇಂದ್ರೀಕೃತ ಅಡುಗೆ ಕೇಂದ್ರ) ಸ್ಥಾಪಿಸುವುದಿಲ್ಲ. ಈ ಬಗ್ಗೆ ಬಿಸಿಯೂಟ ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್.ಬಾಲನ್ ಅವರ ನೇತೃತ್ವದ ನಿಯೋಗವು ಇಂದು ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದ ಸಂದರ್ಭದಲ್ಲಿ ಸಚಿವರು ಈ ಭರವಸೆ ನೀಡಿದರು.

ಕೇರಳದಲ್ಲಿ ಬಿಸಿಯೂಟ ನೌಕರರಿಗೆ 12 ಸಾವಿರ ರೂ. ವೇತನ ನೀಡಲಾಗುತ್ತಿದೆ. ಅಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿದ್ದು, ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರವಿದೆ. ಆದ್ದರಿಂದ ಬಿಸಿಯೂಟ ನೌಕರರ ಬೇಡಿಕೆಗಳನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು ಎಂದು ನಿಯೋಗ ಸಚಿವರಲ್ಲಿ ಮನವಿ ಮಾಡಿತು.

ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು, “ವೇತನ ಹೆಚ್ಚಳದ ನಿರ್ಧಾರ ಕೇವಲ ನನ್ನ ಕೈಯಲ್ಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಖಂಡಿತವಾಗಿಯೂ ಚರ್ಚಿಸುತ್ತೇನೆ. ನಮ್ಮ ಸರ್ಕಾರದಿಂದ ಎಷ್ಟು ಸಾಧ್ಯವೋ ಅಷ್ಟು ವೇತನ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ಹಿಂದೆ ಬಿಸಿಯೂಟ ನೌಕರರ ಇಡುಗಂಟನ್ನು 40 ಸಾವಿರ ರೂ. ಗೆ ಹೆಚ್ಚಿಸಿದ ಹೆಗ್ಗಳಿಕೆ ನಮ್ಮ ಸರ್ಕಾರದ್ದು. ನೀವು ಅತ್ಯಂತ ಶ್ರಮಜೀವಿಗಳು. ನಿಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ” ಎಂದರು.

ಬಿಸಿಯೂಟ ಯೋಜನೆ ಕೇವಲ ರಾಜ್ಯ ಸರ್ಕಾರದ ಯೋಜನೆಯಲ್ಲ. ಕೇಂದ್ರ ಸರ್ಕಾರವೂ ಇದಕ್ಕೆ ಅನುದಾನ ನೀಡುತ್ತದೆ. ಹೀಗಾಗಿ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆಯೂ ಒತ್ತಡ ಹೇರಬೇಕು ಎಂದು ಸಲಹೆ ನೀಡಿದರು.

ಕೆಲವು ಕಡೆ ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತಿದೆ ಎಂದು ನಿಯೋಗ ಸಚಿವರ ಗಮನಕ್ಕೆ ತಂದಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯ ಪೂರೈಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಎಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದರ ಬಗ್ಗೆ ನಿಖರ ಮಾಹಿತಿ ನೀಡಿ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಶಾಲೆಯ ಮುಖ್ಯಶಿಕ್ಷಕರು ಮತ್ತು ಮುಖ್ಯ ಅಡುಗೆ ಸಿಬ್ಬಂದಿಯ ಜಂಟಿ ಬ್ಯಾಂಕ್ ಖಾತೆ, ಕನಿಷ್ಠ 1 ಲಕ್ಷ ರೂ. ಇಡುಗಂಟು, ಮಾಸಿಕ 5 ಸಾವಿರ ರೂ. ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಿಯೋಗ ಸಚಿವರಿಗೆ ಮನವಿ ಸಲ್ಲಿಸಿತು.

ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಚಿವರು, “ಪ್ರತಿಭಟನೆ ನಿಮ್ಮ ಹಕ್ಕು. ಆದರೆ ದಯವಿಟ್ಟು ಬಿಸಿಯೂಟ ನೌಕರರು ಈಗ ಪ್ರತಿಭಟನೆ ಕೈಬಿಡಬೇಕು. ನಿಮ್ಮ ಜೊತೆ ನಾವು ಇದ್ದೇವೆ. ನಮ್ಮ ಸರ್ಕಾರದ ವ್ಯಾಪ್ತಿಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಯೋಗದಲ್ಲಿ ರಾಜ್ಯ ಸಮಿತಿ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಪ್ರಧಾನ ಕಾರ್ಯದರ್ಶಿ ಕಲ್ಪನಾ ವಿ.ಜಿ., ಖಜಾಂಚಿ ಪುಷ್ಪಲತಾ ಸೇರಿದಂತೆ ಯೂನಿಯನ್‌ನ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Cluster KitchenMid-Day Meal WorkersMadhu Bangarappa
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X