Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ...

ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ: ಸಚಿವ ಶಿವಾನಂದ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ25 Dec 2023 6:45 PM IST
share
ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ರೈತರಿಗೆ ಅವಮಾನವಾಗುವಂತಹ ಯಾವುದೇ ವಿವಾದಾತ್ಮಕ ಹೇಳಿಕೆಯನ್ನು ತಾನು ನೀಡಿಲ್ಲ. ನಾನೇನು ರೈತ ವಿರೋಧಿಯಲ್ಲ. ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಸ್ಪಷ್ಟಣೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼ ಮೂರು ವರ್ಷಕ್ಕೊಮ್ಮೆ ರೈತರು ಬೆಳೆಯುವಂತಹ ಬೆಳೆಗಳಿಗೆ ಬೆಲೆ ಸಿಗುತ್ತದೆ. ಉಳಿದ ಎರಡು ವರ್ಷ ಅವರ ಬೆಳೆಗಳಿಗೆ ನಿರ್ದಿಷ್ಟ ಪ್ರಮಾಣದ ಬೆಲೆ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ಆದುದರಿಂದ, ತಮ್ಮ ಸಾಲಮನ್ನಾ ಆಗಲಿ ಎಂದು ಬಯಸುತ್ತಾರೆ ಎಂದು ಹೇಳಿದ್ದೆ. ಆದರೆ, ತಾನು ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಯನ್ನು ತಿರುಚಲಾಗಿದೆ ಎಂದರು.

ನನಗೆ ಅಧಿಕಾರದ ಮದ ಏರಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ರೈತರ ಮೇಲೆ ಅಷ್ಟೊಂದು ಕರುಣೆ ಇದ್ದರೆ ರೈತರಿಗೆ ಮುಳುವಾಗಿರುವ ಕೇಂದ್ರ ಸರಕಾರದ ನೀತಿಗಳನ್ನು ಬದಲಾಯಿಸುವಂತೆ ಪ್ರಧಾನಿ ಮೋದಿಯ ಗಮನ ಸೆಳೆಯಲಿ. ಅದನ್ನು ಬಿಟ್ಟು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂತಹ ಕುತಂತ್ರ ಮಾಡಬಾರದು ಎಂದು ಶಿವಾನಂದ ಪಾಟೀಲ್ ಹೇಳಿದರು.

ಶಿವಾನಂದ ಪಾಟೀಲ್ ಹೇಳಿದ್ದೇನು?: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶಿವಾನಂದ ಪಾಟೀಲ್, ರೈತರಿಗೆ ಕೃಷ್ಣಾ ನದಿ ನೀರು, ವಿದ್ಯುತ್ ಉಚಿತವಾಗಿ ಸಿಗುತ್ತಿದೆ. ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜ, ಗೊಬ್ಬರ ಕೊಟ್ಟರು. ಇನ್ನೂ ಅವರಿಗೆ ಇರುವ ಆಸೆ ಏನೆಂದರೆ ಮೇಲೆ ಮೇಲೆ ಬರಗಾಲ ಬಂದರೆ ನಮ್ಮ ಸಾಲ ಮನ್ನಾ ಆಗುತ್ತೆ ಅನ್ನೋದು. ಯಾರು ಈ ರೀತಿ ಬಯಸಬಾರದು ಎಂದಿದ್ದರು.

ಶಿವಾನಂದ ಪಾಟೀಲ್ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಬಿಜೆಪಿ, ಜೆಡಿಎಸ್ ಹಾಗೂ ರೈತ ಪರ ನಾಯಕರು ಶಿವಾನಂದ ಪಾಟೀಲ್ ಕ್ಷಮೆಯಾಚನೆಗೆ ಆಗ್ರಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X