ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಿ.ಕೆ. ಶಿವಕುಮಾರ್

ಬೆಳಗಾವಿ: ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಂಗಳವಾರ ಇಲ್ಲಿನ ಸರ್ಕಿಟ್ ಹೌಸ್ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಲ್ಲಿ ಈ ಹಿಂದೆಯೂ ಗೊಂದಲವಿರಲಿಲ್ಲ, ಈಗಲೂ ಇಲ್ಲ, ಮುಂದೆಯೂ ಇರಲ್ಲ ಅವರು ತಿಳಿಸಿದರು.
ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ:
ಬಿಜೆಪಿಯ ಯಾವೊಬ್ಬ ಸಂಸದರು ಕೇಂದ್ರ ಸರಕಾರದ ಜೊತೆ ಈ ವಿಚಾರವಾಗಿ ಮಾತನಾಡಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಸರ್ವಪಕ್ಷ ನಿಯೋಗ ಕೊಂಡೊಯ್ಯುವ ವಿಚಾರವಾಗಿ ಡಿ.8ರಂದು ಸಭೆ ಮಾಡಲು ನಾವು ನಿರ್ಧರಿಸಿದ್ದೆವು. ಆದರೆ ಅವರು ಸಮಯದ ಇಕ್ಕಟ್ಟಿದೆ ಎಂದು ನಮಗೆ ಪತ್ರ ಬರೆದರು. ಹೀಗಾಗಿ ಅವರು ನಾವು ಅವರಿಗೆ ಸಮಯ ನಿಗದಿ ಮಾಡಲು ಹೇಳಿದ್ದು, ಅವರು ಹೇಳಿದ ದಿನ ಸಭೆ ಮಾಡಲು ಸಿದ್ಧವಿದ್ದೇವೆ ಎಂದು ಸ್ಪಷ್ಟಪಡಿಸಿದರು.
Next Story





