ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
"ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆ"
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿರುವ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶಾಸಕರ ಮತ್ತೊಂದು ತಂಡ ಹೈಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷದ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದು ತಿಳಿಸಿದರು.
ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಹೇಳಿದರು.
Next Story





