Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್‌ ಸರಕಾರದಲ್ಲಿ ಭ್ರಷ್ಟಾಚಾರ...

ಕಾಂಗ್ರೆಸ್‌ ಸರಕಾರದಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಹೇಳಿದರೆ ನನ್ನಂತ ಮೂರ್ಖ ಇನ್ನೊಬ್ಬರಿಲ್ಲ: ಡಿ ಕೆಂಪಣ್ಣ

ವಾರ್ತಾಭಾರತಿವಾರ್ತಾಭಾರತಿ17 Oct 2023 9:41 PM IST
share
ಕಾಂಗ್ರೆಸ್‌ ಸರಕಾರದಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಹೇಳಿದರೆ ನನ್ನಂತ ಮೂರ್ಖ ಇನ್ನೊಬ್ಬರಿಲ್ಲ: ಡಿ ಕೆಂಪಣ್ಣ

ಬೆಂಗಳೂರು, ಅ.17: ಈ ಸರಕಾರದಲ್ಲಿ ಭ್ರಷ್ಟಾಚಾರ ಇದೆ, ಇಲ್ಲ ಎಂದರೆ ನನ್ನಂತಹ ಮೂರ್ಖ ಇನ್ನೊಬ್ಬನಿಲ್ಲ. ಭ್ರಷ್ಟಾಚಾರ ಇಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. ಅದನ್ನು ತಡೆಗಟ್ಟಬೇಕು ಎಂದು ಹೇಳಿದ್ದೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದ್ದಾರೆ.

ಕೆ.ಕೆ.ಗೆಸ್ಟ್ ಹೌಸ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದಲ್ಲಿ ಭ್ರಷ್ಟಾಚಾರ ಇದೆ. ಆದರೆ, ಅದು ಅಷ್ಟಾಗಿ ಕಂಡುಬರುತ್ತಿಲ್ಲ ಎಂದರು.

ಬಿಬಿಎಂಪಿಯ ಬಾಕಿ ಬಿಲ್ ವಿಚಾರ ಮಾತ್ರ ಸದ್ಯಕ್ಕೆ ಮಾತನಾಡಿದ್ದೇವೆ. ಶೇ.75ರಷ್ಟು ಬಿಲ್ ಬಾಕಿ ಬಿಡುಗಡೆ ಮಾಡಲು ಹೇಳಿದ್ದೇವೆ. ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಮಿಷನ್ ವಿಚಾರ ತನಿಖೆ ಮಾಡಿ ಎಂದಿದ್ದೇವೆ. ಶೇ.80ಕ್ಕಿಂತ ಹೆಚ್ಚು ಸಿನಿಯಾರಿಟಿ ಮೇಲೆ ಪೇಮೆಂಟ್ ಮಾಡುವ ಭರವಸೆ ಕೊಟ್ಟಿದ್ದಾರೆ. ಅಧಿಕಾರಿಗಳ ಮೇಲಿನ ಕಮಿಷನ್ ಆರೋಪದ ವಿಚಾರವಾಗಿ ಇವತ್ತಿಗೂ ನಾನು, ಈ ಹಿಂದಿನ ಮಾತಿನ ಮೇಲೆ ನಿಂತಿದ್ದೇನೆ. ದೊಡ್ಡ ಪ್ರಮಾಣದ ಕೆಲಸ ಗುತ್ತಿಗೆ ಪಡೆದಿಲ್ಲ. ಹೀಗಾಗಿ ಭ್ರಷ್ಟಾಚಾರ ಬೆಳಕಿಗೆ ಬರುತ್ತಿಲ್ಲ ಎಂದು ಹೇಳಿದರು.

ಮಾಜಿ ಸಿಎಂ ಸದಾನಂದ ಗೌಡರ ಆರೋಪ ವಿಚಾರವಾಗಿ ಮಾತನಾಡಿದ ಅವರು, ನಾನು ಹಾಗೂ ಅಂಬಿಕಾಪತಿ 45 ವರ್ಷದಿಂದ ಸ್ನೇಹಿತರು. ಅಂಬಿಕಾಪತಿ ಮೇಲಿನ ಆರೋಪ ಸುಳ್ಳು. ಸಿಎಂ ಮನೆಯಿಂದ ನಾನು ನೇರವಾಗಿ ನಮ್ಮ ಮನೆಗೆ ಹೋಗಿದ್ದೇನೆ. ಅಂಬಿಕಾಪತಿ ಮನೆಗೆ ನಾನು ಹೋಗಿಲ್ಲ. ಆರೋಪ ಸಾಬೀತು ಮಾಡಿದರೆ ಅವರ ಕಾಲಡಿ ಇರುತ್ತೇನೆ. ನಾನು ಅಂಬಿಕಾಪತಿ ಪರ ನಿಲ್ಲುತ್ತೇನೆ. ಅಂಬಿಕಾಪತಿ ತಪ್ಪು ಮಾಡಿದ್ದರೇ ಶಿಕ್ಷೆ ಆಗಲಿ ಎಂದು ತಿಳಿಸಿದರು.

ಡಿಸಿಎಂ ಅವರಿಗೂ ಈ ಸರಕಾರದಲ್ಲಿ ಕೂಡ ಭ್ರಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದೇನೆ. ಆದರೆ, ಉನ್ನತ ಅಧಿಕಾರಿಗಳ ವಿರುದ್ಧ ನಾನು ದೂರು ಹೇಳಿಲ್ಲ. ಕೆಲವೊಂದು ಅಧಿಕಾರಿಗಳು ಅಂತ ಮಾತ್ರ ಹೇಳಿದ್ದೇನೆ. ಇವತ್ತು ಕೂಡ ಡಿಕೆಶಿ ಅವರಿಗೆ ಈ ಬಗ್ಗೆ ತಿಳಿಸಿದ್ದೇನೆ. ಸರಕಾರ ಬಂದು ಐದೂವರೆ ತಿಂಗಳುಗಳು ಮಾತ್ರವೇ ಕಳೆದಿವೆ. ಬಿಲ್ ಪೇಮೆಂಟ್‍ನಲ್ಲಿ ಅವ್ಯವಹಾರ ನಡೆಯುತ್ತಿದೆ. ಇದನ್ನು ಗಮನಕ್ಕೆ ತಂದಿದ್ದೇವೆ, ಸರಿ ಮಾಡುವ ಭರವಸೆಯನ್ನು ಉಪಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಹೇಳಿದರು.

ಭ್ರಷ್ಟಾಚಾರವ ಹಿಂದೆಯೂ ಇತ್ತು, ಈಗಲೂ ಇದೆ, ಅದನ್ನು ತಡೆಗಟ್ಟಬೇಕು. ಈ ಸರಕಾರದಲ್ಲೂ ಭ್ರಷ್ಟಾಚಾರ ಇದೆ. ಈಗ ಯಾವುದೇ ಕೆಲಸ ಮಾಡಿಲ್ಲ, ಹೀಗಾಗಿ, ಆರೋಪ ಮಾಡಿಲ್ಲ ಎಂದು ತಿಳಿಸಿದರು.

ತನಿಖೆಯಾಗಲಿ: ಬಿಜೆಪಿ ವಿರುದ್ದ ಶೇ40ರಷ್ಟು ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ಬಿಜೆಪಿಯ ಸರಕಾರವೇ ಇದೆ. ಸಿಬಿಐ, ಈ.ಡಿ ಅವರ ಬಳಿಯೇ ಇದೆ. ಅವರು ತನಿಖೆ ಮಾಡಿಸಲಿ. ನಾಗಮೋಹನ್ ದಾಸ್ ಸಮಿತಿಗೆ ನಮ್ಮಲ್ಲಿರುವ ಸಾಕ್ಷಿಯನ್ನ ಕೊಡುತ್ತೇವೆ. ಶೇ.40ರಷ್ಟು ಆರೋಪಕ್ಕೆ ಸಂಬಂಧಿಸಿದ ಸಾಕ್ಷಿಯನ್ನು ಸಮಿತಿಗೆ ಕೊಡುತ್ತೇವೆ ಎಂದು ತಿಳಿಸಿದರು.

ಎಸ್‍ಐಟಿ ತನಿಖೆಗೆ ನಾವು ಬೇಡ ಅಂದಿಲ್ಲ. ಸಮಸ್ಯೆ ಇರುವ ಬಿಲ್ ಇಟ್ಟುಕೊಳ್ಳಿ, ಬೇರೆ ಬಿಲ್ ಬಿಡುಗಡೆ ಮಾಡಿ. ಶೇ.75ರಷ್ಟು ಹಣ ಸಾಕಾಗಲ್ಲ ಎಂದು ಹೇಳಿದ್ದೇವೆ. ಕಮಿಷನರ್ ಕರೆದು ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ ಎಂದು ಕೆಂಪಣ್ಣ ಡಿಸಿಎಂ ಜೊತೆಗಿನ ಮಾತುಕತೆಯ ವಿವರವನ್ನು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X