ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಇಲ್ಲ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಅ.28: ಬಿಜೆಪಿ ಜೊತೆ ಜೆಡಿಎಸ್ ಯಾವುದೇ ಕಾರಣಕ್ಕೂ ವಿಲೀನಗೊಳ್ಳುವುದಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಶನಿವಾರ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ʼಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗುವುದಿಲ್ಲ, ಕಾಂಗ್ರೆಸ್ ಪಕ್ಷ 28 ಪಕ್ಷದ ಜೊತೆಯಲ್ಲಿ ಮೈತ್ರಿ ಮಾಡಿಕೊಂಡಿರುವಂತೆ ದೇಶದ ಹಿತ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ ಅಷ್ಟೇʼ ಎಂದು ಹೇಳಿದರು.
ʼನಮ್ಮ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮೈತ್ರಿ ಸಂಬಂಧ ಮಾತುಕತೆ ನಡೆಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ನಂತರ ರಾಜ್ಯದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆʼ ಎಂದು ಹೇಳಿದರು.
Next Story





