Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಹಾರಕ್ಕೆ ಕೇಂದ್ರದಿಂದ ಸ್ಪಂದನೆ...

ಬರ ಪರಿಹಾರಕ್ಕೆ ಕೇಂದ್ರದಿಂದ ಸ್ಪಂದನೆ ಇಲ್ಲ; ಮುಂದಿನ ಕ್ರಮದ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ : ಡಾ.ಜಿ.ಪರಮೇಶ್ವರ್‌

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ23 Nov 2026 1:34 PM IST
share
ಬರ ಪರಿಹಾರಕ್ಕೆ ಕೇಂದ್ರದಿಂದ ಸ್ಪಂದನೆ ಇಲ್ಲ; ಮುಂದಿನ ಕ್ರಮದ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ : ಡಾ.ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಸಲ್ಲಿಸಿದ್ದರೂ, ಕಳೆದ ಎರಡು ತಿಂಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯಕ್ಕೆ ಬರ ಪರಿಹಾರವಾಗಿ ಒಟ್ಟು 22 ಸಾವಿರ ಕೋಟಿ ರೂ. ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನೂ ಸಲ್ಲಿಸಿವೆ. ಆದರೂ ಪರಿಹಾರ ಬಿಡುಗಡೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಇನ್ನೂ ಸ್ವಲ್ಪ ಕಾಲ ಕಾಯಲಿದ್ದು, ಆನಂತರ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಸದಾಶಿವನಗರದಲ್ಲಿರುವ ತಮ್ಮ ಗೃಹ ಕಚೇರಿ ಬಳಿ ವಿವಿಧ ವಿಚಾರಗಳ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಬರ ಯಾರನ್ನೂ ಕೇಳಿ ಬರುವುದಿಲ್ಲ. ರೈತರು ಸಂಕಷ್ಟದಲ್ಲಿರುವಾಗ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಒಬ್ಬರ ಮೇಲೊಬ್ಬರು ಆರೋಪ ಮಾಡುವುದಕ್ಕಿಂತ ರೈತರ ನೆರವಿಗೆ ನಿಲ್ಲುವುದು ಮುಖ್ಯ. ಬರದ ವಿಚಾರದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ ಎಂಬುದನ್ನು ರೈತರು ಪ್ರಶ್ನಿಸುತ್ತಾರೆ. ರಾಜಕೀಯ ಮಾಡಲು ಬೇರೆ ವಿಚಾರಗಳಿವೆ. ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡಬಾರದು ಎಂದರು.

ಕೇಂದ್ರ ಗೃಹ ಸಚಿವರು, ಕೃಷಿ ಸಚಿವರು ಹಾಗೂ ಪ್ರಧಾನಮಂತ್ರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಕೇಂದ್ರ ಸಚಿವರನ್ನು ಭೇಟಿಯಾಗಲು ಸಮಯ ಕೋರಿ ಪತ್ರ ಬರೆಯುವುದು ಸಾಮಾನ್ಯ ಪ್ರಕ್ರಿಯೆ. ರಾಜ್ಯದ ಸಮಸ್ಯೆಗಳನ್ನು ನೇರವಾಗಿ ವಿವರಿಸಲು ಅವಕಾಶ ನೀಡಬೇಕು. ಜವಾಬ್ದಾರಿಯುತ ರಾಜ್ಯ ಸರ್ಕಾರವೊಂದು ಕೇಂದ್ರದ ಸಂಬಂಧಪಟ್ಟ ಸಚಿವಾಲಯಕ್ಕೆ ಪತ್ರ ಬರೆದಾಗ ಅದಕ್ಕೆ ಸೂಕ್ತವಾಗಿ ಸ್ಪಂದಿಸುವ ಜವಾಬ್ದಾರಿ ಕೇಂದ್ರ ಸರ್ಕಾರಕ್ಕಿದೆ ಎಂದು ಹೇಳಿದರು.

ಕೇಂದ್ರದಿಂದ ಪರಿಹಾರ ದೊರೆಯದಿದ್ದರೆ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಹಿಂದೆಯೂ ಕೇಂದ್ರದಿಂದ ಪರಿಹಾರ ದೊರೆಯದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರೂ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸುಮಾರು 3,500 ಕೋಟಿ ರೂ. ಪರಿಹಾರ ದೊರೆತಿತ್ತು. ಈ ಬಾರಿಯೂ ಅಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾವಿಸಿಲ್ಲ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಪರಿಹಾರ ಬಿಡುಗಡೆ ಮಾಡಬಹುದು ಎಂಬ ನಿರೀಕ್ಷೆಯಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಅರ್ಹ ರೈತರಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ಈಗಾಗಲೇ ವಿತರಣೆ ಆರಂಭಿಸಿದೆ. ಬಹುತೇಕ ಎಲ್ಲ ಜಿಲ್ಲೆಗಳಿಗೂ ಪರಿಹಾರ ತಲುಪಿಸುವ ಕಾರ್ಯ ನಡೆಯುತ್ತಿದೆ. ಅಧಿವೇಶನ ಆರಂಭವಾಗುವ ಮುನ್ನವೇ ರೈತರಿಗೆ ಘೋಷಿಸಿರುವ ಹಣ ತಲುಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಸಂಬಂಧ ಈಗಾಗಲೇ ಸಭೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ ಎಂದರು.

ಪುಸ್ತಕ ಮುಟ್ಟುಗೋಲು: ಪರಿಶೀಲನೆ ನಡೆಸಿಯೇ ಸರ್ಕಾರದ ತೀರ್ಮಾನ

ರವಿ ಹಂಜ್ ಅವರು ಸರ್ಕಾರಕ್ಕೆ ಸವಾಲು ಹಾಕಿರುವುದು ಹಾಗೂ ಪುಸ್ತಕ ಮುಟ್ಟುಗೋಲು ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪುಸ್ತಕದಲ್ಲಿ ಯಾವುದೇ ಆಕ್ಷೇಪಾರ್ಹ ಪದಗಳನ್ನು ಬಳಸಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಆದರೆ, ಪುಸ್ತಕದಲ್ಲಿರುವ ಹೇಳಿಕೆಗಳನ್ನು ಆಧರಿಸಿ ಸರ್ಕಾರದ ವಿರುದ್ಧ ಸವಾಲು ಹಾಕುತ್ತಿದ್ದಾರೆ. ಮೇಲ್ನೋಟಕ್ಕೆ ರಾಜ್ಯದ ಹಲವು ಸಮುದಾಯಗಳು ಈ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಚರ್ಚೆ ನಡೆದಿದೆ ಎಂದರು.

ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚಿಸಲಾಗಿದೆ. ಪುಸ್ತಕದಲ್ಲಿರುವ ಅಂಶಗಳನ್ನು ಪರಿಶೀಲಿಸಿಯೇ ಸರ್ಕಾರ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವ ನಿರ್ಧಾರ ಕೈಗೊಂಡಿದೆ. ಈಗ ಅವರು ಸರ್ಕಾರಕ್ಕೆ ಸವಾಲು ಹಾಕುವುದಾದರೆ, ಈ ದೇಶದಲ್ಲಿ ಕಾನೂನು ಇದೆ ಎಂಬುದನ್ನು ನೆನಪಿಸಬೇಕಾಗುತ್ತದೆ. ಅವರು ಹಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿರುವುದರಿಂದ ಇಲ್ಲಿನ ಕಾನೂನುಗಳನ್ನು ಮರೆತಿರಬಹುದು. ಈ ದೇಶದ ಕಾನೂನುಗಳನ್ನು ಮತ್ತೊಮ್ಮೆ ಅವರಿಗೆ ನೆನಪಿಸಬೇಕಿದೆ ಎಂದು ಹೇಳಿದರು.

ಬಂಧನದ ಸಂದರ್ಭದಲ್ಲಿ ಅಮೆರಿಕ ರಾಯಭಾರ ಕಚೇರಿಯ ನೆರವು ಕೋರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಅಮೆರಿಕದ ಗ್ರೀನ್ ಕಾರ್ಡ್ ಅಥವಾ ಪೌರತ್ವ ಹೊಂದಿದ್ದರೆ, ಅಲ್ಲಿನ ರಾಯಭಾರ ಕಚೇರಿಗೆ ತಮ್ಮ ಸಮಸ್ಯೆಯನ್ನು ತಿಳಿಸುವುದು ಸಹಜ. ತಮಗೆ ಇಲ್ಲಿ ತೊಂದರೆಯಾಗುತ್ತಿದೆ, ರಕ್ಷಣೆ ನೀಡುವಂತೆ ಅವರು ಮನವಿ ಮಾಡಿರಬಹುದು ಎಂದು ತಿಳಿಸಿದರು.

Tags

CentreDrought ReliefDr.G.Parameshwara
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X