ಲಗೇಜ್, ಸರಕು ಸಾಗಿಸಲು ದರ ಪರಿಷ್ಕರಣೆ ಮಾಡಿಲ್ಲ: ಕೆಎಸ್ಸಾರ್ಟಿಸಿ ಸ್ಪಷ್ಟನೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಲಗೇಜ್, ಸರಕುಗಳನ್ನು ಸಾಗಿಸಲು ಹಿಂದಿನಿಂದಲೂ ವ್ಯವಸ್ಥೆ ಜಾರಿಯಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೂತನ ಲಗೇಜ್ ನಿಯಮ ಜಾರಿ ಎಂದು ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.
ಮಂಗಳವಾರ ನಿಗಮವು ಪ್ರಕಟನೆ ಹೊರಡಿಸಿದ್ದು, ಬಸ್ಸಿನಲ್ಲಿರುವ ಸ್ಥಳಾವಕಾಶಕ್ಕೆ ಅನುಗುಣವಾಗಿ ವಾಷಿಂಗ್ ಮಷಿನ್, ಫ್ರಿಡ್ಜ್, ಟ್ರಕ್ ಟಯರ್, ಅಲ್ಯೂಮಿನಿಯಂ ಪೈಪ್, ಕಬ್ಬಿಣದ ಪೈಪ್, ಪಾತ್ರೆ, ಬೆಕ್ಕು, ನಾಯಿ, ಮೊಲಗಳನ್ನು ಸಾಗಿಸಲು 1999ರಿಂದಲೇ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ನಿಗಮದ ಬಸ್ಗಳಲ್ಲಿ 30 ಕೆ.ಜಿ.ವರೆಗೆ ಲಗೇಜ್ ಕೊಂಡೊಯ್ಯಲು ಉಚಿತ ಅವಕಾಶ ಕಲ್ಪಿಸಲಾಗಿದೆ. 2022ರ ಅ.28ರನಂತರ ಯಾವುದೇ ಹೊಸ ಲಗೇಜ್ ನಿಯಮ, ಸುತ್ತೋಲೆಯನ್ನು ಜಾರಿಗೆ ತಂದಿಲ್ಲ. ಹೀಗಾಗಿ ಬಸ್ಸುಗಳಲ್ಲಿ ಲಗೇಜ್, ಸರಕುಗಳನ್ನು ಸಾಗಿಸಲು ದರ ಪರಿಷ್ಕರಣೆ ಮಾಡಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಪಷ್ಟಪಡಿಸಿದೆ.
Next Story





