Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ;...

ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ; ದೇಶದ ಜನರ ಬದುಕು ಬದಲಾವಣೆ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Sept 2023 2:53 PM IST
share
ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ; ದೇಶದ ಜನರ ಬದುಕು ಬದಲಾವಣೆ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರು, ʼದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆʼ ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ʼʼಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್ಪೋರ್ಟ್‌ ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕುʼʼ ಎಂದು ಅವರು ಹೇಳಿದರು.

ʼʼಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿಹಕ್ಕು, ಆರ್ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು, ಇಂತಹ ಯೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ?” ಎಂದು ಪ್ರಶ್ನಿಸಿದರು.

ಗೃಹ ಸಚಿವರಾದ ಪರಮೇಶ್ವರ್ ಅವರು ಹಿಂದೂ ಧರ್ಮಕ್ಕೆ ಅಪ್ಪ- ಅಮ್ಮ ಯಾರು ಇಲ್ಲ ಎಂದು ಹೇಳಿದ್ದಾರೆ ಎನ್ನುವ ಪ್ರಶ್ನೆಗೆ “ನಾನು ಭಾರತೀಯ ಹಾಗೂ ಹಿಂದೂವಾಗಿರುವುದ್ದಕ್ಕೆ ಹೆಮ್ಮೆ ಪಡುತ್ತೇನೆ” ಎಂದು ತಿಳಿಸಿದರು.

ಇನ್ನು ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿರುವ ಬಗ್ಗೆ ಕೇಳಿದಾಗ, “ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಜೂಮ್ ಲಿಂಕ್ ಅನ್ನು ನನಗೆ ಕಳುಹಿಸಿದ್ದರು. ನಾನು ವಿಚಾರಣೆಯನ್ನು ನೋಡಲು ಕಾಯುತ್ತಿದೆ. ಆದರೆ ವಿಚಾರಣೆಯನ್ನು ಸುಪ್ರೀಂಕೋರ್ಟಿನವರು ಮುಂದಕ್ಕೆ ಹಾಕಿದ್ದಾರೆ. ಕಳೆದೆರಡು ದಿನಗಳಲ್ಲಿ ಮಳೆ ಬರುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು, ಮಳೆಯಾಗಿಲ್ಲ. ಹೀಗಾಗಿ ನಾವು ಮತ್ತೆ ಕಾಯಬೇಕು” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X