Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಎಲ್ಲ ಕಾರಾಗೃಹಗಳ ವ್ಯವಸ್ಥೆಯ...

ರಾಜ್ಯದ ಎಲ್ಲ ಕಾರಾಗೃಹಗಳ ವ್ಯವಸ್ಥೆಯ ಕುರಿತು ವರದಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ

ವಾರ್ತಾಭಾರತಿವಾರ್ತಾಭಾರತಿ27 Aug 2024 1:14 PM IST
share
ರಾಜ್ಯದ ಎಲ್ಲ ಕಾರಾಗೃಹಗಳ ವ್ಯವಸ್ಥೆಯ ಕುರಿತು ವರದಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ

ಬೆಂಗಳೂರು, ಆ.27: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದ ಘಟನೆಯನ್ನು ಮಾತ್ರ ತನಿಖೆ ನಡೆಸುತ್ತಿಲ್ಲ. ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಏನೆಲ್ಲ ನಡೆಯುತ್ತಿದೆ. ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಸದಾಶಿವ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತರಿಸಿಕೊಳ್ಳಲಾಗುವುದು. ಹಿಂಡಲಗಾ ಜೈಲಿಗೆ ಭೇಟಿ ನೀಡಿದಾಗ ಕೆಲವು ಲೋಪದೋಷಗಳು ಕಂಡುಬಂದಿತ್ತು. ಕ್ರಮ ಕೈಗೊಳ್ಳಲಾಗಿತ್ತು. ಶಿವಮೊಗ್ಗ, ಮಂಗಳೂರು ಕಾರಾಗೃಹ ಎಲ್ಲವನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ವಿಚಾರವನ್ನು ಸರಕಾರ ತೀರ್ಮಾನ ಮಾಡುವುದಿಲ್ಲ ಎಂದು ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಬಂದೀಖಾನೆ ಪ್ರಾಧಿಕಾರವು ಕೋರ್ಟ್ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಸ್ಥಳಾಂತರ ಮಾಡಲಿದೆ. ವಿಚಾರಣಾದೀನ ಕೈದಿಯಾಗಿರುವುದರಿಂದ ಕೆಲವು ನಿಯಮಗಳ ಪ್ರಕಾರವೇ ಸ್ಥಳಾಂತರ ಮಾಡಬೇಕಾಗುತ್ತದೆ. ಮುಂದಿನ ಎರಡು ದಿನಗಳಲ್ಲಿ ಸ್ಥಳಾಂತರ ಆಗಬಹುದು ಎಂದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಬದಲಾವಣೆ ಮಾಡಬಹುದು. ಆದರೆ, ಮೂರು ಭಾಗ ಮಾಡಲು ಆಗುವುದಿಲ್ಲ. ಬ್ಲಾಕ್ 1, ಬ್ಲಾಕ್ 2 ಬ್ಲಾಕ್ 3 ಇವೆ. ಅದರ ಜೊತೆಗೆ ಬೇರೆ ಬ್ಯಾರಕ್ಗಳಿವೆ. ಇದರಲ್ಲಿ ಕೈದಿಗಳನ್ನು ಇರಿಸಲು ಮಾರ್ಪಾಡು ತರಬಹುದು, ಭಾಗ ಮಾಡುವುದಿಲ್ಲ ಎಂದು ತಿಳಿಸಿದರು.

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಎಂಬವನಿಗೆ ಒಂದು ಬ್ಯಾರಕ್ ನಿಂದ ಮತ್ತೊಂದು ಬ್ಯಾರಕ್ಗೆ ಹೋಗಲು ಅವಕಾಶ ಕೊಟ್ಟಿದ್ದಾರೆ ಎಂಬುದು ನಿನ್ನೆ ಭೇಟಿ ನೀಡಿದ ವೇಳೆ ಗೊತ್ತಾಗಿದೆ. ಈ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ನಾವು ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ. ಈಗಾಗಲೇ 9 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಜೈಲಿನ ಮುಖ್ಯ ಅಧೀಕ್ಷಕ, ಅಧೀಕ್ಷಕನನ್ನು ಅಮಾನತು ಮಾಡಿದ್ದೇವೆ. ಈ ಸ್ಥಳಗಳಿಗೆ ಬೇರೆ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದರು.

ಕಾರಾಗೃಹದಲ್ಲಿ ದರ್ಶನ್ಗೆ ಯಾರೆಲ್ಲ ಸಹಕಾರ ಕೊಟ್ಟಿದ್ದಾರೋ ಅವರನ್ನು ಅಮಾನತು ಮಾಡಲಾಗಿದೆ. ತನಿಖೆ ಇನ್ನೂ ಮುಂದುವರಿದಿದೆ. ಹೆಚ್ಚಿನ ತನಿಖೆಗಾಗಿ ಒಬ್ಬರು ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡುತ್ತೇವೆ. ಇವರು ಕೊಡುವ ವರದಿ ಆಧರಿಸಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ಹಿಂದೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯ ಅಧ್ಯಕ್ಷರಾಗಿದ್ದ ವೇಳೆ 2020ರಲ್ಲಿ ಜೈಲು ಸುಧಾರಣೆಗೆ, ವರದಿ ನೀಡಿರುವುದು ನಿನ್ನೆ ಗಮನಕ್ಕೆ ಬಂದಿದೆ. ಅದನ್ನು ತರಿಸಿಕೊಂಡು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಡಾ.ಮನಮೋಹನ ಸಿಂಗ್ ಪ್ರಧಾನಿಯಾಗಿದ್ದ ವೇಳೆ ರಾಷ್ಟ್ರಮಟ್ಟದಲ್ಲಿ ಪೊಲೀಸ್ ಸುಧಾರಣೆ, ಕಾರಾಗೃಹ ಸುಧಾರಣೆಗೆ ವರದಿ ನೀಡಲಾಗಿತ್ತು. ಆ ವರದಿಯನ್ನು ತರಿಸಿಕೊಳ್ಳಲಾಗುವುದು. ಈಗಿನ ವ್ಯವಸ್ಥೆಯನ್ನು ಸುಧಾರಣೆ ಮಾಡಲಾಗುವುದು ಎಂದು ಹೇಳಿದರು.

ಸಾಕ್ಷಿಗಳನ್ನು ಹೆದರಿಸುವ ನಿಟ್ಟಿನಲ್ಲಿ ಫೋಟೋಗಳನ್ನು ವೈರಲ್ ಮಾಡಲಾಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಾಕ್ಷಿಗಳನ್ನು ಹೆದರಿಸುವ ಅಗತ್ಯ ನಮಗಿಲ್ಲ. ನ್ಯಾಯಯುತವಾಗಿ ಯಾರಿಗೆ ಏನು ಶಿಕ್ಷೆ ಆಗಬೇಕು. ಯಾರಿಗೆ ನ್ಯಾಯ ಸಿಗಬೇಕು. ನ್ಯಾಯಯುತವಾಗಿ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ಇದರಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X