ಪಕ್ಷದ ವಿರುದ್ಧ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: 'ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ತೀರ್ಮಾನ ಮಾಡಿದ್ದೇವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 'ಪಕ್ಷಕ್ಕೆ ಮುಜುಗರ ಆಗುವಂಥ ಹೇಳಿಕೆ ನೀಡಿದವರ ಜೊತೆ ವೈಯಕ್ತಿಕ ಮಾತುಕತೆ ಮಾಡುತ್ತೇವೆ.ಮುಂದಿನ ದಿನಗಳಲ್ಲಿ ಇಂಥ ಹೇಳಿಕೆ ಕೊಡದಿರಲು ಸೂಚಿಸಲಾಗಿದೆ. 11 ಜನರಿಗೆ ಈಗಾಗಲೇ ನೋಟಿಸ್ ಕೊಟ್ಟಿದ್ದೇವೆ' ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
''ಕಾಂಗ್ರೆಸ್ ಸರಕಾರ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಬೇಕು''
ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣೆ ಪೂರ್ವದಲ್ಲಿ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಬೇಕು. ಕೇಂದ್ರ ಸರಕಾರ ಕೊಡುವ 5 ಕೆಜಿ ಅಕ್ಕಿಯ ಜೊತೆಗೆ ಕಾಂಗ್ರೆಸ್ ಹೇಳಿದ 10 ಕೆಜಿ ಅಕ್ಕಿ ಕೊಡಬೇಕು ಎಂದು ನಳಿನ್‍ಕುಮಾರ್ ಕಟೀಲ್ ಒತ್ತಾಯಿಸಿದರು.
ಈಗ ಕಾಂಗ್ರೆಸ್ ಪಕ್ಷ 5 ಕೆಜಿ ಅಕ್ಕಿ ಹಾಗೂ 5 ಕೆಜಿಗೆ ಸಂಬಂಧಿಸಿ ಹಣ ಕೊಡುವುದಾಗಿ ಹೇಳಿದೆ. ಕೇಂದ್ರದ 5 ಕೆಜಿ ಹೊರತುಪಡಿಸಿ 10 ಕೆಜಿ ಅಕ್ಕಿಗಾಗಿ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು.
ವಿಪರೀತವಾದ ವಿದ್ಯುತ್ ಬಿಲ್‍ನಿಂದ ಜನರಿಗೆ ಸಮಸ್ಯೆ ಆಗುತ್ತಿದೆ. ಈ ಎಲ್ಲ ವಿಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಾವು ಜುಲೈ 4ರಂದು ವಿಧಾನಸಭೆಯ ಹೊರಗೆ ಮತ್ತು ಒಳಗಡೆ ನಮ್ಮ ಶಾಶಕರ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದರು.







