Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಉದ್ಯೋಗ ಖಾತ್ರಿ’ ಹಣ ಪಾವತಿ ವಿಳಂಬ...

‘ಉದ್ಯೋಗ ಖಾತ್ರಿ’ ಹಣ ಪಾವತಿ ವಿಳಂಬ ಹಿನ್ನೆಲೆ; 308 ಪಿಡಿಓ ಸೇರಿ 394 ಅಧಿಕಾರಿಗಳಿಗೆ ನೋಟಿಸ್ ಜಾರಿ : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ12 Oct 2026 7:02 PM IST
share
‘ಉದ್ಯೋಗ ಖಾತ್ರಿ’ ಹಣ ಪಾವತಿ ವಿಳಂಬ ಹಿನ್ನೆಲೆ; 308 ಪಿಡಿಓ ಸೇರಿ 394 ಅಧಿಕಾರಿಗಳಿಗೆ ನೋಟಿಸ್ ಜಾರಿ : ಈಶ್ವರ್ ಖಂಡ್ರೆ

ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ-ವಿಬಿಜಿ ರಾಮ್ ಜಿಯಡಿ ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ 308 ಪಿಡಿಓ ಸೇರಿದಂತೆ 12 ಉಪ ಕಾರ್ಯದರ್ಶಿ ಮತ್ತು 74 ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಇಲಾಖೆಯ ಕಾರ್ಯದರ್ಶಿ ಮತ್ತು 12 ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ವಿಬಿಜಿ ರಾಮ್ ಜಿ ಅಡಿ ಕೆಲಸ ಮಾಡುವ ಫಲಾನುಭವಿಗಳಿಗೆ 15 ದಿನಗಳ ಒಳಗಾಗಿ ಕೂಲಿ ಹಣ ಪಾವತಿ ಮಾಡದಿದ್ದರೆ ಸಂಬಂಧಿತ ಪಿಡಿಓಗಳನ್ನೇ ಹೊಣೆ ಮಾಡಲಾಗುವುದು ಎಂಬ ಸ್ಪಷ್ಟ ಸೂಚನೆ ನೀಡಿದ್ದರೂ 12 ಜಿಲ್ಲೆಗಳ 311 ಗ್ರಾಮ ಪಂಚಾಯತಿಗಳಲ್ಲಿ ವಿಳಂಬ ಆಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತಿಗಳಿಗೆ ವಿಬಿಜಿ ರಾಮ್ ಜಿ ಕೂಲಿ ಹಣ ಬಿಡುಗಡೆ ಆಗಿದ್ದರೂ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಹಣ ಪಾವತಿಸದಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಅಧಿಕಾರಿಗಳ ಇಂತಹ ನಿರ್ಲಕ್ಷ್ಯದಿಂದಾಗಿ, ಬರ ಪರಿಸ್ಥಿತಿಯಲ್ಲೂ ಜನ ವಿಬಿಜಿ ರಾಮ್ ಜಿ ಕೆಲಸಕ್ಕೆ ಬರಲು ಹಿಂದೇಟು ಹಾಕಿ, ಗುಳೆ ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ 23, ಬೆಳಗಾವಿಯಲ್ಲಿ 52, ಚಾಮರಾಜನಗರದಲ್ಲಿ 13, ಚಿಕ್ಕಮಗಳೂರು ಜಿಲ್ಲೆಯಲ್ಲಿ 14, ದಕ್ಷಿಣ ಕನ್ನಡದಲ್ಲಿ 15, ಹಾಸನ ಜಿಲ್ಲೆಯಲ್ಲಿ 47, ಕೊಡಗು ಜಿಲ್ಲೆ 25, ಮಂಡ್ಯ ಜಿಲ್ಲೆ 13, ಮೈಸೂರು ಜಿಲ್ಲೆಯಲ್ಲಿ 53, ಶಿವಮೊಗ್ಗ ಜಿಲ್ಲೆ 14, ಉಡುಪಿ ಜಿಲ್ಲೆಯಲ್ಲಿ 23, ವಿಜಯಪುರ ಜಿಲ್ಲೆಯಲ್ಲಿ 16 ಸೇರಿ ಒಟ್ಟು 311 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಹಣ ಪಾವತಿ ಮಾಡುವಲ್ಲಿ ವಿಳಂಬ ಆಗಿರುವ ಹಿನ್ನೆಲೆಯಲ್ಲಿ ಈ ಎಲ್ಲ ಗ್ರಾ.ಪಂ ಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಣೆ ಮಾಡಬೇಕಾದ ಜವಾಬ್ದಾರಿ ಹೊತ್ತ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ಹಾಗೂ 12 ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ, ಸಮಜಾಯಿಷಿ ಪಡೆಯುವಂತೆ ಸೂಚಿಸಿದ್ದಾರೆ.

ಮುಂದೆ ಈ ರೀತಿ ಯಾವುದೇ ಪಂಚಾಯತಿಯಲ್ಲಿ ಕೂಲಿ ಹಣ ಪಾವತಿಯಲ್ಲಿ ವಿಳಂಬ ಆಗದಂತೆ ಕ್ರಮ ವಹಿಸಲು ಇಲಾಖೆಯ ಕಾರ್ಯದರ್ಶಿ ಮತ್ತು 12 ಜಿಲ್ಲೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಕೇಂದ್ರ ಸರಕಾರ ಮನ್ರೇಗಾದಲ್ಲಿದ್ದ 90:10ರ ಅನುಪಾತವನ್ನು ವಿಬಿಜಿ ರಾಮ್ ಜಿಯಲ್ಲಿ 60:40ಕ್ಕೆ ಬದಲಾಯಿಸಿದ ಪರಿಣಾಮ ರಾಜ್ಯ ಸರಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾದರೂ, ಗ್ರಾಮೀಣ ಬಡವರು, ಹಿಂದುಳಿದವರು, ಪರಿಶಿಷ್ಟ ಜಾತಿ ಪಂಗಡದ ಬಡವರು, ಭೂರಹಿತ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿ ಅವರು ಗುಳೆ ಹೋಗಬಾರದು ಹಾಗೂ ಗ್ರಾಮೀಣ ಬಡವರಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ರಾಜ್ಯ ಸರಕಾರ ಜುಲೈ 1ರಿಂದ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆಯಿಂದ ಯೋಜನೆಯ ಉದ್ದೇಶವೇ ನಾಶವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Tags

PDOEshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X