Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರದ ಮಲತಾಯಿ ಧೋರಣೆ ಬಗ್ಗೆ...

ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಬಿಜೆಪಿಗರು ದಿಲ್ಲಿಗೆ ಹೋಗಲಿ: ಎನ್.ಎಸ್.ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ8 Oct 2025 8:30 PM IST
share
ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಬಿಜೆಪಿಗರು ದಿಲ್ಲಿಗೆ ಹೋಗಲಿ: ಎನ್.ಎಸ್.ಭೋಸರಾಜು

ಬೆಂಗಳೂರು, ಅ.8 : ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದಿದ್ದು, ಕೇಂದ್ರ ಸರಕಾರ ಪರಿಹಾರ ಕೊಡದೆ ಮಲತಾಯಿ ಧೋರಣೆ ಮಾಡುತ್ತಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ದಿಲ್ಲಿಗೆ ಹೋಗಿ ಮಾತನಾಡಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ವಿಕಾಸಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಹ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ಮಾಡಿದರೂ ಬಿಜೆಪಿಯವರು ವಿರೋಧ ಮಾಡುತ್ತಾರೆ. ಪ್ರವಾಹ ಬಂದಾಗ ರಸ್ತೆ ಮೂಲಕ ಸಮೀಕ್ಷೆ ಮಾಡಲು ಆಗುತ್ತದೆಯೇ? ಮೋದಿ ಏನು ರಸ್ತೆ ಮೂಲಕ ನೆರೆ ಸಮೀಕ್ಷೆ ಮಾಡುತ್ತಾನಾ? ಎಂದು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು.

ರಾಜ್ಯಕ್ಕೆ ಪರಿಹಾರ ಕೊಡದೆ ಮಲತಾಯಿ ಧೋರಣೆ ಮಾಡುತ್ತಿರುವ ಕೇಂದ್ರ ಸರಕಾರದ ವಿರುದ್ಧ ಬಿಜೆಪಿ ನಾಯಕರು ಬಾಯಿ ಬಿಡುತ್ತಿಲ್ಲ. ಇವರಿಗೆ ಏನಾದರೂ ನೀತಿ ನಿಯಮ ಇದೆಯೇ? ಬಿಜೆಪಿಗರು ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಾ ರಾಜ್ಯದಲ್ಲಿ ಬೊಗಳುವುದನ್ನು ಬಿಟ್ಟು ದಿಲ್ಲಿಗೆ ಹೋಗಿ ಬೊಗಳಲಿ ಎಂದು ಭೋಸರಾಜು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಬಿಜೆಪಿಯವರು ಪೈಪೋಟಿಯ ಮೇಲೆ ಟೀಕೆ ಮಾಡುತ್ತಿದ್ದರೂ ಸಹ ಜನರು ಸಂತೋಷದಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಿಜೆಪಿಯವರದ್ದು ರಾಜಕೀಯ ಟೀಕೆ ಎಂಬುದು ಜನರಿಗೆ ತಿಳಿದಿದೆ ಎಂದು ಭೋಸರಾಜು ತಿಳಿಸಿದರು.

ಕಾಂಗ್ರೆಸ್‍ನಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಭೋಸರಾಜು, ಸರಕಾರದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲ ಸೃಷ್ಟಿ ಮಾಡುವವರು ಬಿಜೆಪಿಯವರು. ಸತೀಶ್ ಜಾರಕಿಹೊಳಿಯವರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ. ನಮ್ಮಲ್ಲಿ ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಆಗುತ್ತದೆ. ಸಿಎಂ, ಡಿಸಿಎಂ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಎಂದು ನೂರು ಸಾರಿ ಬಿಜೆಪಿಯವರು ಹೇಳುತ್ತಾರೆ. ಅವರಿಗೆ ನೀತಿ-ನಿಯಮವಿಲ್ಲ ಎಂದು ಕಿಡಿಕಾರಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X