ನೂತನ ವಿಧಾನಸಭಾ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಮೇ 14 : ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಉಮೇಶ್ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಈ ಸಂದರ್ಭದಲ್ಲಿ, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Next Story




