Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಹಯೋಗ್ ಪೋರ್ಟಲ್‌ಗೆ ಆಕ್ಷೇಪ; ಎಕ್ಸ್...

ಸಹಯೋಗ್ ಪೋರ್ಟಲ್‌ಗೆ ಆಕ್ಷೇಪ; ಎಕ್ಸ್ ಕಾರ್ಪ್‌ ಮೇಲ್ಮನವಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ10 March 2026 7:15 PM IST
share
ಸಹಯೋಗ್ ಪೋರ್ಟಲ್‌ಗೆ ಆಕ್ಷೇಪ; ಎಕ್ಸ್ ಕಾರ್ಪ್‌ ಮೇಲ್ಮನವಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕಾನೂನುಬಾಹಿರ ಆನ್‌ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ 'ಸಹಯೋಗ್' ಪೋರ್ಟಲ್‌ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಎಕ್ಸ್‌ ಕಾರ್ಪ್‌ (ಟ್ವಿಟರ್) ಸಲ್ಲಿಸಿರುವ ಮೇಲ್ಮನವಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79(3)(ಬಿ) ವ್ಯಾಪ್ತಿಯನ್ನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿ ಸೆಪ್ಟೆಂಬರ್ 24ರಂದು ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ರದ್ದುಕೋರಿ ಎಕ್ಸ್ ಕಾರ್ಪ್ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಮೇಲ್ಮನವಿದಾರರ ಪರ ಹಿರಿಯ ವಕೀಲ ಕೆ.ಜಿ. ರಾಘವನ್‌ ವಾದ ಮಂಡಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳಾದ 69ಎ ಮತ್ತು 79 ಅನ್ನು ಪ್ರಶ್ನಿಸಲಾಗಿದೆ. ಸೆಕ್ಷನ್‌ 79 ಅಧಿಕಾರದ ಮೂಲವಲ್ಲ. 69ಎ ಮತ್ತು 79 ಎರಡನ್ನೂ ಒಟ್ಟಿಗೆ ಓದಬೇಕು. ಸೆಕ್ಷನ್‌ 79 ಅಧಿಕಾರ ಹೊಂದಿರುವ ನಿಬಂಧನೆಯಲ್ಲ ಎಂದರು.

ವಾದ ಆಲಿಸಿದ ನ್ಯಾಯಪೀಠ, ಈ ವಿಚಾರವನ್ನು ಪರಿಶೀಲಿಸಬೇಕಿದ್ದು, ಎಷ್ಟು ಸಮಯಬೇಕಾಗುತ್ತದೆ. ಈ ಪ್ರಕರಣಕ್ಕೆ ಎಷ್ಟು ಸಮಯ ನಿಗದಿಪಡಿಸಬೇಕು? ಎಂದು ಕೇಂದ್ರ ಸರಕಾರದ ಪರ ವಕೀಲರನ್ನು ಪ್ರಶ್ನಿಸಿತು. ಅದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ. ಅರವಿಂದ್‌ ಕಾಮತ್‌, ಒಂದು ತಿಂಗಳು ಸಮಯಬೇಕು. ಈ ಪ್ರಕರಣದಲ್ಲಿ ಸಾಲಿಸಿಟರ್‌ ಜನರಲ್‌ ವಾದ ಮಂಡಿಸಲಿದ್ದಾರೆ ಎಂದು‌ ತಿಳಿಸಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಮೇಲ್ಮನವಿಯಲ್ಲಿ ಪ್ರತಿವಾದಿಗಳಾದ ಕಾನೂನು ಮತ್ತು ನ್ಯಾಯ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಹಣಕಾಸು ಸಚಿವಾಲಯ, ರಕ್ಷಣಾ ಸಚಿವಾಲಯ, ರೈಲ್ವೇ ಸಚಿವಾಲಯ, ಭಾರಿ ಕೈಗಾರಿಕಾ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್‌ 11ಕ್ಕೆ ಮುಂದೂಡಿತು.

Tags

High CourtCentral Government
share
ವಾರ್ತಾಭಾರತಿ
ವಾರ್ತಾಭಾರತಿ
Next Story
X