ರಾಜ್ಯ ಸರಕಾರದ ಅಧಿಕೃತ ವಕ್ತಾರರನ್ನು ನೇಮಿಸಿ ಮುಖ್ಯಮಂತ್ರಿ ಆದೇಶ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು : ಮಾಧ್ಯಮ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಸರಕಾರದ ನಿಲುವನ್ನು ವ್ಯಕ್ತಪಡಿಸುವ ಹಾಗೂ ಸರಕಾರದ ಪರವಾಗಿ ಸ್ಪಷ್ಟೀಕರಣ ನೀಡುವ ಕಾರ್ಯನಿರ್ವಹಿಸಲು ಉಪ ಮುಖ್ಯಮಂತ್ರಿ ಸೇರಿದಂತೆ ಎಂಟು ಮಂದಿ ಸಚಿವರನ್ನು ಅಧಿಕೃತ ವಕ್ತರರನ್ನಾಗಿ ನೇಮಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವದಿಯನ್ನು ಸರಕಾರದ ಅಧಿಕೃತ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಎಲ್ಲ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರು ಈ ಮೇಲ್ಕಂಡ ಸಚಿವರು ಕೋರುವ ಅಗತ್ಯ ಮಾಹಿತಿ, ವಿವರಗಳನ್ನು ತಕ್ಷಣ ಒದಗಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.




