Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಲ್ಲ ರಾಜ್ಯಗಳ ವಿಧಾನ ಮಂಡಲಗಳ ಡೇಟಾ ಬೇಸ್...

ಎಲ್ಲ ರಾಜ್ಯಗಳ ವಿಧಾನ ಮಂಡಲಗಳ ಡೇಟಾ ಬೇಸ್ ಸಿದ್ಧಗೊಳಿಸಲು ನಿರ್ಧಾರ : ಓಂ ಬಿರ್ಲಾ

ವಾರ್ತಾಭಾರತಿವಾರ್ತಾಭಾರತಿ13 Sept 2025 7:59 PM IST
share
ಎಲ್ಲ ರಾಜ್ಯಗಳ ವಿಧಾನ ಮಂಡಲಗಳ ಡೇಟಾ ಬೇಸ್ ಸಿದ್ಧಗೊಳಿಸಲು ನಿರ್ಧಾರ : ಓಂ ಬಿರ್ಲಾ
‘ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಿಭಾಗದ 11ನೆ ಸಮ್ಮೇಳನ’

ಬೆಂಗಳೂರು, ಸೆ.13 : ಶಾಸನ ಸಭೆಗಳಲ್ಲಿ ನಡೆದಿರುವ ಹಳೆಯ ಚರ್ಚೆಗಳು, ಮಹತ್ವದ ವಿಷಯಗಳ ಕುರಿತು ಡೇಟಾ ಬೇಸ್ ಸಿದ್ಧ ಮಾಡುತ್ತಿದ್ದೇವೆ. ಬಹುತೇಕ ರಾಜ್ಯಗಳ ವಿಧಾನಸಭೆಗಳು ಇದರಡಿಯಲ್ಲಿ ಬಂದಿವೆ. ಒಂದು ವರ್ಷದಲ್ಲಿ ಎಲ್ಲ ರಾಜ್ಯಗಳ ಡೇಟಾ ಬೇಸ್ ಸಿದ್ಧಗೊಳಿಸಿ ಒಂದೇ ವೇದಿಕೆಯಡಿ ತರಲಾಗುವುದು ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಹೇಳಿದರು.

ಶನಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಕಾಮನ್‍ವೆಲ್ತ್ ಸಂಸದೀಯ ಸಂಘ(ಸಿಪಿಎ) ಭಾರತ ವಿಭಾಗದ 11ನೆ ಸಮ್ಮೇಳನದ ಸಮಾರೋಪದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಡೇಟಾ ಬೇಸ್‍ನಿಂದಾಗಿ ಸದಸ್ಯರಿಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಹಾಗೂ ಗುಣಮಟ್ಟದ ಚರ್ಚೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ವಿಧೇಯಕಗಳು ಸದನದಲ್ಲಿ ಮಂಡನೆ ಮಾಡುವ ಮುನ್ನ ಆ ವಿಧೇಯಕಗಳ ಉದ್ದೇಶ, ಕಾರಣಗಳ ಕುರಿತು ಸದಸ್ಯರಿಗೆ ತಿಳಿಸಲು ವಿಷಯ ತಜ್ಷರ ಜೊತೆ ಸೇರಿ ಕಾರ್ಯಯೋಜನೆ ರೂಪಿಸಬೇಕು. ಇದರಿಂದಾಗಿ, ವಿಧೇಯಕ ಕುರಿತು ಚರ್ಚೆ ನಡೆಸಲು ಸಾಧ್ಯವಾಗುತ್ತದೆ. ಡಿಜಿಟಲ್ ತಂತ್ರಜ್ಞಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು, ಸದನಗಳ ಕಾರ್ಯನಿರ್ವಹಣೆಯನ್ನು ಉತ್ತಮಗೊಳಿಸಬೇಕಿದೆ ಎಂದು ಓಂ ಬಿರ್ಲಾ ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ವಿಶ್ವಾಸವನ್ನು ಮತ್ತಷ್ಟು ಬಲಗೊಳಿಸಲು ಪ್ರಯತ್ನ ಮಾಡಬೇಕಿದೆ. ದೇಶದ ಜನಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಯುವಕರಿದ್ದಾರೆ. ಶಾಸನ ಸಭೆಗಳಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡಬೇಕಿದೆ ಎಂದು ಅವರು ಹೇಳಿದರು.

ವಿಧಾನಮಂಡಲಗಳು, ಸಂಸತ್ತು ಚರ್ಚೆ ಹಾಗೂ ಸಂವಾದದ ಕೇಂದ್ರಗಳಾಗಬೇಕು. ಅಲ್ಲಿ, ಪರಿಣಾಮಕಾರಿಯಾದ ಚರ್ಚೆಗಳು ನಡೆಯಬೇಕು. ವಿಚಾರಧಾರೆಗಳು ಬೇರೆ ಬೇರೆ ಇದ್ದರೂ ಲೋಕತಂತ್ರ ವ್ಯವಸ್ಥೆಯನ್ನು ಬಲಪಡಿಸುವ ಕೆಲಸ ನಾವು ಮಾಡಬೇಕಿದೆ. ಸದನದ ಸಮಯ ಸದ್ಬಳಕೆಯಾಗಬೇಕು. ಎಲ್ಲ ಪೀಠಾಸೀನ ಅಧಿಕಾರಿಗಳು, ಸದಸ್ಯರು, ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ಮಾಡಿ ಸದನದಲ್ಲಿ ಎದುರಾಗುವ ಪ್ರತಿರೋಧವನ್ನು ಕಡಿಮೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಸಂಸತ್ತು ಮತ್ತು ರಾಜ್ಯ ಶಾಸನಸಭೆಗಳಲ್ಲಿ ಅರ್ಥಪೂರ್ಣ ಸಂವಾದ ಮತ್ತು ಆರೋಗ್ಯಕರ ಚರ್ಚೆಗಳು ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆಯನ್ನು ಬಲಪಡಿಸುತ್ತವೆ. ಎಲ್ಲ ಚುನಾಯಿತ ಪ್ರತಿನಿಧಿಗಳು ಸದನದ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು. ಕಲಾಪಕ್ಕೆ ಅಡ್ಡಿ, ಅಡಚಣೆ ಮತ್ತು ಆಗಾಗ್ಗೆ ಮುಂದೂಡಿಕೆಗಳು ಪ್ರಜಾಪ್ರಭುತ್ವಕ್ಕೆ ಹಾನಿ ಮಾಡುತ್ತವೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುತ್ತವೆ ಎಂದು ಓಂ ಬಿರ್ಲಾ ಹೇಳಿದರು.

ಆದುದರಿಂದ, ಒಳ್ಳೆಯ ಸಂಪ್ರದಾಯಕ್ಕೆ ನಾಂದಿ ಹಾಡಲು ನಾವೆಲ್ಲರೂ ಸಾಮೂಹಿಕ ಪ್ರಯತ್ನ ಮಾಡಬೇಕಿದೆ. ಸಂಸದೀಯ ಸಮಿತಿಗಳನ್ನು ಮತ್ತಷ್ಟು ಪ್ರಭಾವಶಾಲಿಯನ್ನಾಗಿ ಮಾಡಲು ನಿರ್ಧರಿಸಲಾಗಿದೆ. ನೀತಿ, ಯೋಜನೆಗಳನ್ನು, ವಿಧೇಯಕಗಳನ್ನು ರಚನೆ ಮಾಡುವಾಗ ಸಂಸದೀಯ ಸಮಿತಿಗಳ ಸಲಹೆಗಳು ತುಂಬಾ ಉಪಯುಕ್ತವಾಗಿರುತ್ತವೆ ಎಂದು ಓಂ ಬಿರ್ಲಾ ಹೇಳಿದರು.

26 ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಸಿಪಿಎ ಕಾಲಕಾಲಕ್ಕೆ ಶಾಸನ ಸಭೆಗಳ ನಡುವೆ ಚರ್ಚೆ, ಸಂವಾದ, ಮಹತ್ವದ ವಿಷಯಗಳು, ಪ್ರಸಕ್ತ ವಿದ್ಯಾಮಾನಗಳು, ಭವಿಷ್ಯದ ಸವಾಲುಗಳ ಬಗ್ಗೆ ಚರ್ಚೆ ನಡೆಸುತ್ತಿರುತ್ತದೆ. ಜೊತೆಗೆ, ಶಾಸನ ಸಭೆಗಳ ಹೊಸ ಅನುಭವಗಳು, ಆವಿಷ್ಕಾರಗಳ ಬಗ್ಗೆಯೂ ಚರ್ಚೆ ನಡೆಸುತ್ತದೆ. ಇದರ ಉದ್ದೇಶ, ಪ್ರತಿಯೊಂದು ವಿಧಾನಮಂಡಲವು ಶ್ರೇಷ್ಠ ಕಾರ್ಯ ಮಾಡುವಂತಾಗಬೇಕು ಎಂಬುದು ಎಂದು ಅವರು ತಿಳಿಸಿದರು.

‘ಶಾಸನ ಸಭೆಗಳಲ್ಲಿ ಚರ್ಚೆಗಳು ಮತ್ತು ಸಂವಾದಗಳು: ಜನರ ವಿಶ್ವಾಸವನ್ನು ಬೆಳೆಸುವುದು, ಜನರ ಆಕಾಂಕ್ಷೆಗಳನ್ನು ಪೂರೈಸುವುದು’ ಈ ವಿಷಯದ ಕುರಿತು ಚರ್ಚೆಗಳನ್ನು ನಡೆಸಲಾಗಿದೆ. ಮೂರು ದಿನಗಳ ಕಾಲ ವ್ಯಾಪಕವಾಗಿ ಈ ಕುರಿತು ಚರ್ಚೆಗಳು ನಡೆದಿದ್ದು, ಎಲ್ಲ ಪೀಠಾಸೀನ ಅಧಿಕಾರಿಗಳು ತಮ್ಮ ವಿಚಾರ, ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ಓಂ ಬಿರ್ಲಾ ಹೇಳಿದರು.

ವಿಧಾನಸಭೆಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತಾಗಲು ಮಾನದಂಡಗಳನ್ನು ರಚನೆ ಮಾಡಲು ನಿರ್ಧರಿಸಿದ್ದೇವೆ. ಮುಂದಿನ ಸಾಲಿನ ಜನವರಿಯಲ್ಲಿ ಉತ್ತರಪ್ರದೇಶದಲ್ಲಿ ನಡೆಯಲಿರುವ ಪೀಠಾಸೀನ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸಮಾಲೋಚನೆಗಳನ್ನು ನಡೆಸಿ ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಲೋಕಸಭೆಯ ಮಹಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಉಪಸ್ಥಿತರಿದ್ದರು.

ಸಿಪಿಎ ಸಮ್ಮೇಳನದಲ್ಲಿ ಅಂಗೀಕರಿಸಲಾದ ನಿರ್ಣಯಗಳು :

1. ಪ್ರಜಾಸತ್ತಾತ್ಮಕ ಸಂಸ್ಥೆಗಳಲ್ಲಿ ಜನರ ನಂಬಿಕೆಯನ್ನು ಹೆಚ್ಚಿಸಲು, ಸದನಗಳಲ್ಲಿನ ಅಸ್ತವ್ಯಸ್ತತೆ ಮತ್ತು ಅಡಚಣೆಯನ್ನು ನಿವಾರಿಸಬೇಕು, ಇದರಿಂದಾಗಿ ಶಾಸಕಾಂಗಗಳು ಸಾರ್ವಜನಿಕ ಕಲ್ಯಾಣದ ವಿಷಯಗಳನ್ನು ಚರ್ಚಿಸಲು ಹೆಚ್ಚಿನ ಸಮಯವನ್ನು ವಿನಿಯೋಗಿಸಬಹುದು.

2. ಭಾರತದ ಸಂಸತ್ತಿನ ಅಗತ್ಯ ಬೆಂಬಲದೊಂದಿಗೆ, ರಾಜ್ಯ ಶಾಸಕಾಂಗಗಳ ಸಂಶೋಧನೆ ಮತ್ತು ಇತರೆ ಸಂಬಂಧಿತ ಶಾಖೆಗಳನ್ನು ಬಲಪಡಿಸಬೇಕು ಮತ್ತು ನಮ್ಮ ಶಾಸಕಾಂಗ ಸಂಸ್ಥೆಗಳಲ್ಲಿ ಇನ್ನೂ ಉತ್ತಮ ಗುಣಮಟ್ಟದ ಚರ್ಚೆ ಮತ್ತು ವಿಷಯಗಳನ್ನು ಖಚಿತಪಡಿಸಿಕೊಳ್ಳಲು ನಮ್ಮ ಶಾಸಕಾಂಗಗಳಲ್ಲಿನ ಎಲ್ಲ ಪ್ರಮುಖ ವಿಷಯಗಳ ಕುರಿತು ಸಮಗ್ರ ಡೇಟಾಬೇಸ್ ಅನ್ನು ಸಿದ್ಧಪಡಿಸಬೇಕು.

3. ನಮ್ಮ ಶಾಸಕಾಂಗಗಳಲ್ಲಿ ಸಾಧ್ಯವಾದಷ್ಟು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಇದರಿಂದ ಪ್ರಜಾಪ್ರಭುತ್ವ ಸಂಸ್ಥೆಗಳ ಕಾರ್ಯವೈಖರಿಯನ್ನು ಜನರಿಗೆ ಸರಿಯಾಗಿ ತಿಳಿಸಬಹುದು ಮತ್ತು ಶಾಸಕಾಂಗ ಸಂಸ್ಥೆಗಳ ದಕ್ಷತೆಯನ್ನು ಇನ್ನಷ್ಟು ಸುಧಾರಿಸಬಹುದು, ಇದು ನಮ್ಮ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಜನರ ನಂಬಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ.

4. ನಮ್ಮ ದೇಶದ ಜನಸಂಖ್ಯೆಯ ಹೆಚ್ಚಿನ ಭಾಗವು ಯುವಕರು ಮತ್ತು ಮಹಿಳೆಯರಿಂದ ಕೂಡಿದೆ ಎಂಬುದನ್ನು ಒಪ್ಪಿಕೊಂಡು, ನಮ್ಮ ಶಾಸಕಾಂಗಗಳು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಅವರ ಹೆಚ್ಚಿನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಪ್ರಯತ್ನಗಳನ್ನು ಮಾಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X