Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫೆ.26-27 ರಂದು ಬೆಂಗಳೂರು ಅರಮನೆ...

ಫೆ.26-27 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ʼಬೃಹತ್ ಉದ್ಯೋಗ ಮೇಳʼ : ಸಚಿವ ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ21 Feb 2024 3:32 PM IST
share
ಫೆ.26-27 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ʼಬೃಹತ್ ಉದ್ಯೋಗ ಮೇಳʼ : ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ʼಬೃಹತ್ ಯುವ ಸಮೃದ್ಧಿ ಸಮ್ಮೇಳʼ ಇದೇ ತಿಂಗಳ ಫೆ.26 ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ʼಯುವ ಸಮೃದ್ಧಿ ಸಮ್ಮೇಳʼನದ ಉದ್ಯೋಗ ಮೇಳ ಕುರಿತು ಬುಧವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, "ಇದೇ ತಿಂಗಳ ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆಯಲ್ಲಿ ʼಯುವ ಸಮೃದ್ಧಿ ಸಮ್ಮೇಳನʼ ಎಂಬ ಹೆಸರಿನಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ" ಎಂದು ಹೇಳಿದರು.

"ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ರಿಜಿಸ್ಟರ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವ ಸಾಧ್ಯತೆ ಇದೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಉದ್ಯೋಗ ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಹೆಸರಾಂತ 500ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಅಂದಾಜು ಒಂದು ಲಕ್ಷ ಹುದ್ದೆಗಳು ನಮ್ಮ ಬಳಿ ಲಭ್ಯವಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ಒದಗಿಸಿಕೊಡಲು ಇದು ವೇದಿಕೆಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು.

ಉದ್ಯೋಗ ಮೇಳದಲ್ಲಿ ಅನುಕೂಲ ಕಲ್ಪಿಸುವ ಸದುದ್ದೇಶದಿಂದ 600ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಹಾಕಲಾಗಿದೆ. ಅಭ್ಯರ್ಥಿಗಳು ಪ್ರತಿಯೊಂದು ಸ್ಟಾಲಿಗೂ ಭೇಟಿ ನೀಡಿ, ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಎಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಕುರಿತು ಮಾಹಿತಿ ಪಡೆಯಬಹುದು. ಇದಕ್ಕಾಗಿ ಆಯಾ ಕಂಪನಿಗಳ ನುರಿತ ತಜ್ಞರು, ಪರಿಣಿತರು ಇರುತ್ತಾರೆ. ಉದ್ಯೋಗವನ್ನರಸಿ ಬರುವವರಿಗೆ ಸಂಪೂರ್ಣವಾದ ಮಾಹಿತಿ ಲಭ್ಯವಿರಲಿದೆ ಎಂದು ಮಾಹಿತಿ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಧಿಕಾರ ಅವಧಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ನಡೆಸಲಾಗಿತ್ತು. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಯುವ ಜನತೆಗೆ ಉದ್ಯೋಗ ಒದಗಿಸಿಕೊಡಲು ಉದ್ಯೋಗ ಮೇಳ ಆರಂಭಿಸಬೇಕೆಂದು ಸೂಚನೆ ಕೊಟ್ಟಿದ್ದರು. ಇದು ಬೃಹತ್ ಮೇಳವಾಗಲಿದ್ದು, ಬೇರೆ ಯಾವುದೇ ರಾಜ್ಯದಲ್ಲೂ ಇಂಥ ಮೇಳ ನಡೆಯುವುದಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಯೋಗ ಮೇಳದಲ್ಲಿ ಯಾರಿಗೆ ಕೆಲಸ ಸಿಗುವುದಿಲ್ಲವೋ ಅಂಥವರಿಗೆ ತರಬೇತಿ ನೀಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ. ತರಬೇತಿ ಪಡೆದವರು ಮುಂದಿನ ದಿನಗಳಲ್ಲಿ ಉದ್ಯೋಗಗಿಟ್ಟಿಸಿಕೊಳ್ಳಬಹುದು. ಈ ತರಬೇತಿ ನೀಡಲು ನುರಿತ ತಜ್ಞರು ಮುಂದೆ ಬಂದಿದ್ದಾರೆ ಎಂದರು.

ಉದ್ಯೋಗ ಮೇಳದಲ್ಲಿ ಹೆಸರು ನೋಂದಣಿ ಮಾಡಿಕೊಂಡವರು ಇಂತಿಂತಹ ಸ್ಟಾಲ್‍ಗಳಿಗೆ ಹೋಗಲು ಅವರಿಗೆ ಪ್ರತ್ಯೇಕ ಮೆಸೇಜ್ ಕಳಿಸಲಾಗುವುದು. ಯಾರೂ ಕೂಡ ತೊಂದರೆ ಅನುಭವಿಸಬಾರದು ಎಂಬ ಕಾರಣಕ್ಕಾಗಿ ನಮ್ಮ ಇಲಾಖೆ ವತಿಯಿಂದಲೇ ಇದನ್ನು ನಿರ್ವಹಣೆ ಮಾಡುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉದ್ಯೋಗ ಪಡೆದುಕೊಂಡರೆ ಸಾರ್ಥಕವಾಗುತ್ತದೆ ಎಂದು ಪಾಟೀಲ್ ಸಲಹೆ ಮಾಡಿದರು.

ಉದ್ಯೋಗ ಕೊಡಿಸುವ ಪ್ರಯತ್ನ ಮಾಡುತ್ತೇವೆ

ನಾವು ಕೇವಲ ಉದ್ಯೋಗ ಮಾತ್ರ ಕೊಡುತ್ತಿಲ್ಲ. ಅವರ ಸ್ಕಿಲ್ ಗ್ಯಾಪ್‍ಗಳನ್ನು ಸರಿಮಾಡಲು ನಾವು ಸೆಂಟರ್‌ ಗಳನ್ನು ಮಾಡಿಕೊಂಡಿದ್ದೇವೆ. ಇಲ್ಲಿ ನೋಂದಣಿ ಮಾಡಿಕೊಂಡವರನ್ನು ಟ್ರ್ಯಾಕ್ ಮಾಡಿ ಉದ್ಯೋಗ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದ್ದು, ಪ್ರಧಾನಿ ಮಂತ್ರಿಗಳು 20 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. ಯಾವ ಉದ್ಯೋಗವನ್ನೂ ನೀಡಿಲ್ಲ. ಸುಮಾರು 40 ಸಾವಿರ ಉದ್ಯೋಗಗಳನ್ನು ನಾವು ಕಳೆದುಕೊಂಡಿದ್ದೇವೆ. ಎನ್‍ಎಸ್ ಓ ಸರ್ವೆ ಗಳಿಂದ ಬಂದಿರುವ ಮಾಹಿತಿ ಇದು. ಈ ವರದಿ ಬಂದ ಮೇಲೆ ಎನ್‍ಎಸ್‍ಓ ಸರ್ವೆಗಳು ನಿಲ್ಲಿಸಿಬಿಟ್ಟರು. ಯುಪಿಎ ಸರಕಾರ 10 ಸಾವಿರ ಐಟಿಗಳನ್ನು ಸ್ಥಾಪನೆ ಮಾಡಿತ್ತು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಯುವ ಸಮೃದ್ದಿ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸಮ್ಮೇಳನಕ್ಕೆ ಬರುವವರಿಗೆ ಉಚಿತ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಉಚಿತ ಬಸ್ ವ್ಯವಸ್ಥೆ

ಉದ್ಯೋಗ ಮೇಳಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಬರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಮೆಜೆಸ್ಟಿಕ್ ರೈಲ್ವೆ ಹಾಗೂ ಬಸ್ ನಿಲ್ದಾಣಗಳಿಂದ ಮತ್ತು ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವ್ಯವಸ್ಥಾಪಕ ನಿದೇರ್ಶಕಿ ಎಂ.ಕನಗವಳ್ಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X