Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಐಟಿ-ಬಿಟಿ ಸೇರಿದಂತೆ ಶಾಲಾ,...

ಐಟಿ-ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ : ಡಿ.ಕೆ.ಶಿವಕುಮಾರ್​

ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Oct 2024 1:00 PM IST
share
ಐಟಿ-ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ : ಡಿ.ಕೆ.ಶಿವಕುಮಾರ್​

ಬೆಂಗಳೂರು: "ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲರೂ ನ.1ರಂದು ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವ ತಿಳಿಸಲು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಇದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೆಂಗಳೂರು ನಗರದಲ್ಲಿ ಶೇ.50ರಷ್ಟು ಮಂದಿ ರಾಜ್ಯದ ಹೊರಗಿನವರು. ಅವರುಗಳು ಕನ್ನಡ ಕಲಿಯಲು ಅವಕಾಶ ಕಲ್ಪಿಸಬೇಕಿದೆ. ಈ ದೃಷ್ಟಿಯಿಂದ ವಿಜಯದಶಮಿ ದಿನದಂದು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ" ಎಂದರು.

"ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡದಿದ್ದರೂ, ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು" ಎಂದು ತಿಳಿಸಿದರು.

"ಈ ಬಾರಿ ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡ ಕಲಿಯಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ" ಎಂದು ತಿಳಿಸಿದರು.

ಬೆದರಿಕೆ ಹಾಕಿದರೆ ಕಾನೂನು ಕ್ರಮ:

"ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ಯಾವುದೇ ಕನ್ನಡಪರ ಸಂಘಟನೆ ಅಥವಾ ಇತರರು ಯಾವುದೇ ಸಂಸ್ಥೆಗೆ ಆಚರಣೆ ಬಗ್ಗೆ ಬೆದರಿಕೆ ಹಾಕುವಂತಿಲ್ಲ. ತೊಂದರೆ ನೀಡುವಂತಿಲ್ಲ. ಒಂದು ವೇಳೆ ತೊಂದರೆ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು " ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಜನತೆಗೆ ವಿಜಯದಶಮಿ ಶುಭಾಶಯಗಳು:

"ಕರ್ನಾಟಕ ರಾಜ್ಯದ ಜನತೆಗೆ ವಿಜಯದಶಮಿ ಹಬ್ಬದ ಶುಭಾಶಯಗಳು. ಈ ಬಾರಿ ಮೈಸೂರು ದಸರಾ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಮೈಸೂರು ದಸರಾ ಕಾರ್ಯಕ್ರಮಕ್ಕೆ ಜನ ಸಾಗರವೇ ಹರಿದುಬಂದಿದೆ. ಮೈಸೂರು ದಸರಾ ವೀಕ್ಷಣೆಗೆ ಆಗಮಿಸಿರುವ ಪ್ರತಿಯೊಬ್ಬರಿಗೂ ಅಭಿನಂದನೆಗಳು" ಎಂದು ಶುಭ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X