Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ...

ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ 'ಜನತಾ ದರ್ಶನ'ಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Sept 2023 11:25 PM IST
share
ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನಕ್ಕೆ ಸೂಚನೆ

ಬೆಂಗಳೂರು, ಸೆ.16: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೆ.25ರಂದು ಏಕಕಾಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳು, ಸಿಇಒಗಳು, ಜಿಲ್ಲಾ ಪೊಲೀಸ್ ವರಿಷ್ಠರಿಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಶನಿವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಶ್ರೀಸಾಮಾನ್ಯರು ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿರುವುದು ಸಾಮಾನ್ಯ. ಆದರೆ ಇದನ್ನು ತಪ್ಪಿಸಿ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ನಡೆಸಲು ಸರಕಾರ ಚಿಂತಿಸಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಸೆ.25ರಂದು ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಆಯಾ ಜಿಲ್ಲೆಯ ಜನರಿಗೆ ಜಿಲ್ಲಾಡಳಿತವು ಜನತಾ ದರ್ಶನ ನಡೆಯುವ ಸ್ಥಳ, ಸಮಯ ಇತ್ಯಾದಿಗಳನ್ನು ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ಹೇಳಿದ್ದಾರೆ.

ಜನತಾ ದರ್ಶನದಂದು ಜಿಲ್ಲಾ ಮಟ್ಟದ ಎಲ್ಲ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು, ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ತಂತ್ರಾಂಶದಲ್ಲಿ ದಾಖಲಿಸಬೇಕು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸಬೇಕು. ಸಂಬಂಧಿಸಿದ ಅರ್ಜಿಗಳನ್ನು ಜಾಗ್ರತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ಆದೇಶದಲ್ಲಿ ಡಾ.ರಜನೀಶ್ ಗೋಯೆಲ್ ತಿಳಿಸಿದ್ದಾರೆ.

ತಾಲೂಕು ಮಟ್ಟದಲ್ಲಿ ಡಿಸಿ ಜನತಾದರ್ಶನ

ಪ್ರತಿ ತಿಂಗಳು ಜನತಾ ದರ್ಶನವನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಬೇಕು ಎಂದು ಡಾ.ರಜನೀಶ್ ಗೋಯೆಲ್ ಆದೇಶದಲ್ಲಿ ಸೂಚಿಸಿದ್ದಾರೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X