Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದು ದೇಶ-ಒಂದು ಚುನಾವಣೆ ಅಸಾಧ್ಯ:...

ಒಂದು ದೇಶ-ಒಂದು ಚುನಾವಣೆ ಅಸಾಧ್ಯ: ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ

ವಾರ್ತಾಭಾರತಿವಾರ್ತಾಭಾರತಿ4 Sept 2023 3:51 PM IST
share
ಒಂದು ದೇಶ-ಒಂದು ಚುನಾವಣೆ ಅಸಾಧ್ಯ: ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ

ವಿಜಯಪುರ : ಒಂದುದೇಶ-ಒಂದು ಚುನಾವಣೆ ಎಂಬುದು ಅಸಾಧ್ಯದ ಮಾತು, ಈ ಕಾರಣಕ್ಕಾಗಿ ಸಂವಿಧಾನ ತಿದ್ದುಪಡಿ ತರಲು ಹೊರಟಿರುವುದು ಸರಿಯಲ್ಲ, ಆಯಾ ರಾಜ್ಯದ ವಿಧಾನಸಭೆ ಅತಂತ್ರವಾದಾಗ, ರಾಜಕೀಯ ಕ್ಷೀಪ್ರ ಕ್ರಾಂತಿ ಸಂಭವಿಸಿದಾಗ ಅಲ್ಲಿ ಚುನಾವಣೆ ನಡೆಸುವುದು ಹೇಗೆ? ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ, ಈ ಎಲ್ಲ ಬೆಳವಣಿಗೆಗಳ ಮೂಲಕ ಸಂವಿಧಾನ ಶಕ್ತಿಯನ್ನು ಅಡಗಿಸುವ ಏಕೈಕ ಪ್ರಯತ್ನ ಇದಾಗಿದೆ ಎಂದು ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಮಗ್ಗರಿಸುವುದು ಖಚಿತ ಈ ಕಾರಣಕ್ಕಾಗಿಯೇ ಲೋಕಸಭೆ ಚುನಾವಣೆಯನ್ನು ಮುಂದೂಡವ ಏಕೈಕ ಕುತಂತ್ರದಿಂದಾಗಿ ಈ ರೀತಿ ಬಿಜೆಪಿ ಸರ್ವಾಧಿಕಾರಿ ಧೋರಣೆ ಅನುಸರಿಸಿ ಒಂದು ದೇಶ-ಒಂದು ಚುನಾವಣೆ ಬೆಳವಣಿಗೆ ಆರಂಭಿಸಿದೆ, ಬಿಜೆಪಿಗೆ ಎನ್‌ಡಿಎ ಮತ್ತೆ ನೆನಪಾಗಿದೆ, ಕೇವಲ ಮೋದಿ ಹೆಸರು ಮಾತ್ರ ಚುನಾವಣೆಗೆ ಸಾಕಾಗುವುದಿಲ್ಲ ಎಂದು ಆರ್‌ಎಸ್‌ಎಸ್ ಮುಖವಾಣಿಯೇ ಹೇಳಿದೆ ಎಂದರು.

ರಾಷ್ಟ್ರಪತಿಯಂತಹ ಶ್ರೇಷ್ಠ ಹುದ್ದೆ ಅಲಂಕರಿಸಿದ ರಮಾನಾಥ್ ಕೋವಿಂದ ಅವರ ನೇತೃತ್ವದಲ್ಲಿ ವರದಿ ತಯಾರಿಸಲು ಹೇಳಿದೆ. ಅಂತಹ ದೊಡ್ಡ ಹುದ್ದೆ ನಿಭಾಯಿಸಿದ ವ್ಯಕ್ತಿಯನ್ನು ಈ ರೀತಿ ವರದಿ ಒಪ್ಪಿಸುವ ಕೆಲಸಕ್ಕೆ ನೇಮಿಸಿರುವ ಬಿಜೆಪಿ ಕೋವಿಂದ್ ಅವರು ದಲಿತರು ಎನ್ನುವ ಕಾರಣಕ್ಕೆ ಈ ರೀತಿ ಅವಮಾನ ಮಾಡಿದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಎರಡೂವರೆ ವರ್ಷಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದ ಗೋವಿಂದ ಕಾರಜೋಳರು ಯುಕೆಪಿ ಯೋಜನೆಗೆ ಯಾವ ಆದ್ಯತೆಯೂ ನೀಡಿಲ್ಲ, ಹೀಗಾಗಿ ಯುಕೆಪಿ ಯೋಜನೆ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕು ಗೋವಿಂದ ಕಾರಜೋಳ ಅವರಿಗೆ ಇಲ್ಲ ಎಂದರು.

ಮುಖ್ಯಮಂತ್ರಿಗಳ ಎಡಬಲದಲ್ಲಿಯೇ ಇದ್ದು, ಪ್ರಭಾವಿಯಾಗಿದ್ದರೂ ಸಹ ಜಲಸಂಪನ್ಮೂಲ ಇಲಾಖೆಯಿಂದ ಅವಳಿ ಜಿಲ್ಲೆಗೆ ಯಾವ ಕೊಡುಗೆಯನ್ನು ಕಾರಜೋಳರು ಕೊಟ್ಟಿಲ್ಲ, ಅವರು ಯುಕೆಪಿ ಯೋಜನೆಗಳಿಗೆ ನೀಡಿದ ಕೊಡುಗೆಯನ್ನು ಕೂಡಲೇ ಬಹಿರಂಗಪಡಿಸಬೇಕು, ಈ ಹಿಂದೆ ಸಿದ್ಧರಾಮಯ್ಯ ಸರ್ಕಾರದ ಅವಧಿಯಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ. ಪಾಟೀಲ ನೀರಾವರಿ ಕ್ರಾಂತಿಯನ್ನೇ ಮಾಡಿ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ. ಈ ರೀತಿಯಾಗಿ ಯಾವ ಕೆಲಸವನ್ನೂ ಕಾರಜೋಳರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಗೋವಿಂದ ಕಾರಜೋಳರು ಮೊದಲು ಸುಂಸ್ಕೃತ, ಸಭ್ಯ ರಾಜಕಾರಣಿಯಾಗಿದ್ದರು, ಬುದ್ಧ-ಬಸವ-ಡಾ.ಅಂಬೇಡ್ಕರ ಅನುಯಾಯಿಯಾಗಿದ್ದ ಅವರು ಅಧಿಕಾರ ಲಾಲಸೆಗಾಗಿ ಬಿಜೆಪಿಗೆ ಹೋಗಿ, ಸಂಘ ಪರಿವಾರವನ್ನು ಒಲಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಎಲ್ಲ ಯೋಜನೆ ಅನುಷ್ಠಾನಗೊಳಿಸಲಿದೆ, ಆದರೆ ಸ್ವಲ್ಪವೂ ಬಿಜೆಪಿಗರಿಗೆ ಸಮಾಧಾನವಿಲ್ಲ, ಅಧಿಕಾರ ಕಳೆದುಕೊಂಡ ಈ ಎಲ್ಲ ನಾಯಕರಿಗೆ ಮೀನು ನೀರಿನಿಂಧ ಹೊರಬಂದು ಯಾವ ರೀತಿ ಒದ್ದಾಡುತ್ತದೆಯೋ ಆ ರೀತಿ ಎಲ್ಲ ಬಿಜೆಪಿಗರು ಚಡಪಡಿಸುತ್ತಿದ್ದಾರೆ ಎಂದರು.

ಎಸ್.ಸಿ.-ಎಸ್.ಟಿ. ಅನುದಾನವನ್ನು ಗ್ಯಾರಂಟಿ ಯೋಜನೆಗೆ ಡೈವರ್ಟ್ ಮಾಡಲಾಗುತ್ತಿದೆ ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ, ಬ್ಯಾಕ್‌ಲಾಗ್ ಹುದ್ದೆ ಭರ್ತಿ, ಎಸ್.ಸಿ.-ಎಸ್‌ಟಿ ಕಲ್ಯಾಣಕ್ಕಾಗಿ ಸಾವಿರಾರು ಕೋಟಿ ರೂ. ಅನುದಾನ, ಸರ್ಕಾರಿ ಗುತ್ತಿಗೆಯಲ್ಲಿ ೧ ಕೋಟಿ ರೂ. ಎಸ್.ಸಿ-.ಎಸ್.ಟಿ. ಸಮುದಾಯಕ್ಕೆ ಮೀಸಲು ಹೀಗೆ ದೊಡ್ಡಮಟ್ಟದ ಕೊಡುಗೆಯನ್ನು ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಮಾಡಿದೆ, ದಲಿತರ ಕಲ್ಯಾಣವೇ ಕಾಂಗ್ರೆಸ್ ಸರ್ಕಾರದ ಧ್ಯೇಯ ಎಂದರು.

ಈ ಹಿಂದೆಯೂ ಬಿಜೆಪಿ ಸರ್ಕಾರ ಕಾವೇರಿ ನೀರು ಹರಿಸಿದೆ, ಸುಪ್ರೀಂಕೋರ್ಟ್ ಆದೇಶದನ್ವಯ ನೀರು ಹರಿಸಲಾಗಿದೆ, ಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಿದೆ ಹೊರತು `ಇಂಡಿಯಾ' ಒಕ್ಕೂಟದ ಗೆಳೆತನಕ್ಕಾಗಿ ಅಲ್ಲ ಎಂದು ಘಂಟಾಘೋಷವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಹೇಳಿದ್ದಾರೆ, ಆದರೂ ಸಹ ಕಾರಜೋಳರು ಹಾಗೂ ಬಿಜೆಪಿಗರು ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳ ಯಶಸ್ವಿ ಬಗ್ಗೆ ನಡೆದ ಸಮೀಕ್ಷೆಯಲ್ಲಿ ಶೇ.೭೨ ರಷ್ಟು ಜನರು ಈ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ, ಬಹುಸಂಖ್ಯಾತ ಪ್ರಜೆಗಳಿಗೆ ಈ ಯೋಜನೆಗಳ ಲಾಭ ತಟ್ಟಿದೆ, ಶೇ.೨೬ ರಷ್ಟು ಜನರು ಇದನ್ನು ವಿರೋಧಿಸಿದರೂ ಸಹ ಆ ಯೋಜನೆಗಳ ಫಲಾನುಭವ ಸಹ ಅವರು ಪಡೆಯುತ್ತಿದ್ದಾರೆ,

ಕಾಂಗ್ರೆಸ್ ಯುವ ಮುಖಂಡರಾದ ಫಯಾಜ್ ಕಲಾದಗಿ, ನಾಗರಾಜ ಲಂಬು, ವಸಂತ ಹೊನಮೋಡೆ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X