Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸದನದಿಂದ ಬಿ.ಕೆ. ಹರಿಪ್ರಸಾದ್ ಅಮಾನತಿಗೆ...

ಸದನದಿಂದ ಬಿ.ಕೆ. ಹರಿಪ್ರಸಾದ್ ಅಮಾನತಿಗೆ ಪ್ರತಿಪಕ್ಷ ಪಟ್ಟು; ಮೇಲ್ಮನೆಯಲ್ಲಿ ಭಾರೀ ಗದ್ದಲ-ಕೋಲಾಹಲ

ವಾರ್ತಾಭಾರತಿವಾರ್ತಾಭಾರತಿ23 Jan 2026 8:08 PM IST
share
ಸದನದಿಂದ ಬಿ.ಕೆ. ಹರಿಪ್ರಸಾದ್ ಅಮಾನತಿಗೆ ಪ್ರತಿಪಕ್ಷ ಪಟ್ಟು; ಮೇಲ್ಮನೆಯಲ್ಲಿ ಭಾರೀ ಗದ್ದಲ-ಕೋಲಾಹಲ

ಬೆಂಗಳೂರು: ಕೇವಲ ಒಂದು ನಿಮಿಷದ ಭಾಷಣ ಮುಗಿಸಿ ವಿಧಾನ ಮಂಡಲದ ಜಂಟಿ ಅಧಿವೇಶನದಿಂದ ನಿರ್ಗಮಿಸುವ ವೇಳೆ ರಾಜ್ಯಪಾಲರನ್ನು ತಡೆದು ಅಗೌರವ ಸೂಚಿಸಿದ ಪರಿಷತ್‍ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಮೇಲ್ಮನೆಯಲ್ಲಿ ಶುಕ್ರವಾರ ಪ್ರತಿಪಕ್ಷ ಬಿಜೆಪಿ ಪಟ್ಟುಹಿಡಿದ ಕಾರಣ ಸದಸ್ಯರ ನಡುವೆ ಭಾರೀ ಗದ್ದಲ-ಕೋಲಾಹಲ ಉಂಟಾಗಿ ಕಲಾಪವನ್ನು ಎರಡು ಬಾರಿ ಮುಂದೂಡಿದ ಪ್ರಸಂಗ ಜರುಗಿತು.

ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ಮೇಲ್ಮನೆಯ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಈ ವಿಷಯ ಪ್ರಸ್ತಾಪಿಸಿದರು. ಉಭಯ ಸದನವನ್ನುದ್ದೇಶಿಸಿ ಚುಟುಕು ಭಾಷಣ ಮುಗಿಸಿ ಹೊರ ಹೋಗುತ್ತಿದ್ದ ರಾಜ್ಯಪಾಲರ ಎದುರು ಗೂಂಡಾಗಳ ರೀತಿ ವರ್ತಿಸಿ, ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ಮೂಲಕ ರಾಜ್ಯಪಾಲರಿಗೆ ಅಗೌರವ ಸೂಚಿಸಿದ್ದಾರೆ. ಹೀಗಾಗಿ, ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಹರಿಪ್ರಸಾದ್ ವಿರುದ್ಧ ಕ್ರಮ ಆಗಬೇಕು ಎನ್ನುತ್ತ ಒಕ್ಕೊರಲಿನಿಂದ ವಿಪಕ್ಷ ಸದಸ್ಯರು ಎದ್ದು ನಿಂತು ಆಗ್ರಹಿಸಿದರು. ಛಲವಾದಿ ನಾರಾಯಣಸ್ವಾಮಿ ಮಾತಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ‘ಶೇಮ್.. ಶೇಮ್ ಎನ್ನುತ್ತಾ, ಗೋಬ್ಯಾಕ್ ಗವರ್ನರ್’ ಎಂದು ಘೋಷಣೆ ಕೂಗುವ ಮೂಲಕ ತಿರುಗೇಟು ನೀಡಿದರು.

ಈ ವೇಳೆ ಕ್ರಿಯಾಲೋಪ ಎತ್ತಿದ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಲು ಆರಂಭಿಸುತ್ತಿದ್ದಂತೆ, ವಿಪಕ್ಷ ಸದಸ್ಯರು ಆಕ್ಷೇಪಿಸಿದರು. ‘ಗೂಂಡಾಗಿರಿ ವರ್ತನೆ ತೋರಿದ ಹರಿಪ್ರಸಾದ್ ಅವರನ್ನು ಕೂಡಲೇ ಅಮಾನತು ಮಾಡಬೇಕು’ ಎಂದು ಪಟ್ಟು ಹಿಡಿದರು. ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ, ಗದ್ದಲ ಉಂಟಾಯಿತು.

ಆಗ ಸಭಾನಾಯಕ ಎನ್.ಎಸ್.ಭೋಸ್‍ರಾಜ್ ಪ್ರತಿಪಕ್ಷದ ಸದಸ್ಯರು ಸದನವನ್ನು ಹಾಳು ಮಾಡಲು ಬಂದಿದ್ದಾರೆ. ಅವರಿಗೆ ಕಲಾಪ ನಡೆಯಬಾರದೆಂಬ ದುರುದ್ದೇಶವಿದೆ. ಹೀಗಾಗಿಯೇ ಬೇಡದ ವಿಷಯಗಳನ್ನು ಪ್ರಸ್ತಾಪಿಸಲು ಮುಂದಾಗುತ್ತಿದ್ದಾರೆ. ಸಂವಿಧಾನ ವಿರೋಧಿ ಯಾರು? ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಪ್ರತಿಕ್ರಿಯಿಸಿ, ಪ್ರತಿಪಕ್ಷದ ನಾಯಕರು ಇನ್ನೂ ಸಂಪೂರ್ಣ ವಿಷಯವನ್ನೇ ಪ್ರಸ್ತಾಪಿಸಿಲ್ಲ. ಅವರು ಏನು ಹೇಳುತ್ತಾರೆ ಎಂಬುದು ಗೊತ್ತಿಲ್ಲ. ಅದಕ್ಕೂ ಮುನ್ನವೇ ಕ್ರಿಯಾಲೋಪ ಎತ್ತಲು ಅವಕಾಶ ನೀಡಿದರೆ ಹೇಗೆ ಎಂದು ಸಭಾಪತಿಯವರನ್ನು ಪ್ರಶ್ನಿಸಿದರು.

ಇದಕ್ಕೆ ದನಿಗೂಡಿಸಿದ ಜೆಡಿಎಸ್ ಸದಸ್ಯ ಭೋಜೇಗೌಡ, ಸಭಾ ನಾಯಕರಿಗೆ ಎಷ್ಟು ಸ್ಥಾನಮಾನ ಇರುತ್ತದೆಯೋ, ಅದೇ ರೀತಿ ಪ್ರತಿಪಕ್ಷದ ನಾಯಕರಿಗೂ ಸರಿಸಮಾನವಾದ ಸ್ಥಾನಮಾನ ಇರುತ್ತದೆ. ನೀವು ವಿಷಯ ಪ್ರಸ್ತಾಪಿಸಲು ಅವಕಾಶ ಕೊಡದಿದ್ದರೆ ಸದಸ್ಯರ ಹಕ್ಕನ್ನು ಮೊಟಕುಗೊಳಿಸಿದಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಪಕ್ಷದ ನಾಯಕರು ಪತ್ರವನ್ನು ಕೊಟ್ಟಾಗ ಅದನ್ನು ಪರಿಶೀಲಿಸಿ ಚರ್ಚೆಗೆ ಅವಕಾಶ ಕೊಡಬೇಕು. ಅದಕ್ಕೂ ಮೊದಲೇ ಕ್ರಿಯಾಲೋಪ ಪ್ರಸ್ತಾಪಿಸಲು ಅವಕಾಶ ನೀಡಿದರೆ ಸದನಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಭೋಜೇಗೌಡ ಹೇಳಿದರು. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ದನಿಗೂಡಿಸಿದರು.

ಆಗ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಮಾತನಾಡಿ, ಸದನದಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡವರು ಯಾರು? ರಾಷ್ಟ್ರಗೀತೆಗೆ ಅಪಮಾನ ಮಾಡಿದವರು ಯಾರು ಎಂದು ಪ್ರಶ್ನಿಸಿದರು.

ಈ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಷ್ಟ್ರಗೀತೆಗೆ ಅವಮಾನ ಮಾಡಿದ ರಾಜ್ಯಪಾಲರಿಗೆ ಏನು ಶಿಕ್ಷೆ ಕೊಡುತ್ತೀರಾ, ಮೊದಲು ಅದು ಹೇಳಿ ಎಂದು ಒತ್ತಾಯಿಸಿದರು.

ಬಳಿಕ ಪ್ರತಿಕ್ರಿಯಿಸಿದ ಛಲವಾದಿ ನಾರಾಯಣಸ್ವಾಮಿ, ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಸಹ ಭಾಷಣ ಮಾಡಿರಲಿಲ್ಲ, ನಾನು ಸರಕಾರದ ಗುಲಾಮನಲ್ಲ ಎಂದು ಹೇಳಿ ಹೋಗಿದ್ದರು. ಕಾನೂನು ಪ್ರಕಾರ ಹೋರಾಟ ಮಾಡಲಿ. ಅದು ಬಿಟ್ಟು ಗೂಂಡಾಗಿರಿ ಮಾಡುವುದು ಸರಿಯೇ? ರಾಜ್ಯಪಾಲರಿಗೆ ಅಪಮಾನವಾಗಿದೆ ಎಂದರು.

ಇದೇ ವೇಳೆ ಬಿ.ಕೆ.ಹರಿಪ್ರಸಾದ್ ಮಾತನಾಡಿ, ರಾಜ್ಯಪಾಲರ ಭಾಷಣದ ಪ್ರಕ್ರಿಯೆ ಬಗ್ಗೆ ನಿಯಮಾವಳಿ ಓದುತ್ತಿದ್ದಂತೆ ಬಿಜೆಪಿ ಸದಸ್ಯರು ಆಕ್ಷೇಪಿಸಿದರು. ಪೋಕ್ಸೋ ಪ್ರಕರಣದ ನಾಯಕರಿಗೆ ಹಾರ ಹಾಕುವ ಪಕ್ಷದವರು ಇವರು, ಇವರಿಂದ ಪಾಠ ಕಲಿಯಬೇಕಾ? ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದರು.

ಈ ಹಂತದಲ್ಲಿ ಮತ್ತೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಭಾರೀ ಗದ್ದಲ, ಕೋಲಾಹಲ ಸೃಷ್ಟಿಯಾಯಿತು. ಆರೋಪ, ಪ್ರತ್ಯಾರೋಪಗಳು ನಡೆದವು. ಹರಿಪ್ರಸಾದ್ ಎತ್ತಿದ್ದ ಕ್ರಿಯಾಲೋಪವನ್ನು ಸಭಾಪತಿ ಹೊರಟ್ಟಿ ಅವರು ತಿರಸ್ಕರಿಸಿ, ಸದನವನ್ನು ಮುಂದೂಡಿದರು. 10 ನಿಮಿಷಗಳ ಬಳಿಕ ಪುನಃ ಕಲಾಪ ಪ್ರಾರಂಭವಾಗುತ್ತಿದ್ದಂತೆ ಸದಸ್ಯರ ಗಲಾಟೆ ಮತ್ತೆ ಜೋರಾಗಿದ್ದರಿಂದ ಸಭಾಪತಿಯವರು ಮತ್ತೊಮ್ಮೆ ಸದನ ಮುಂದೂಡಿದರು.

ಅತ್ಯಾಚಾರಿ ಪಕ್ಷದವರಿಂದ ಪಾಠ ಕಲಿಯಬೇಕಿಲ್ಲ:

‘’ಸದನದಲ್ಲಿ ಬಿಜೆಪಿ ಸದಸ್ಯರು ಅಮಾನತಿಗೆ ಒತ್ತಾಯಿಸುತ್ತಿದ್ದಂತೆ ಎದ್ದು ನಿಂತು ಆಕ್ಷೇಪಿಸಿದ ಕಾಂಗ್ರೆಸ್‍ನ ಬಿ.ಕೆ.ಹರಿಪ್ರಸಾದ್, ‘ನಿಮ್ಮದು ಅತ್ಯಾಚಾರಿಗಳ ಪಕ್ಷ, ಭ್ರಷ್ಟಾಚಾರಿಗಳ ಪಕ್ಷ, ಬಲತ್ಕಾರಿ ಪಾಪಿಗಳಿವರು. ಆರೆಸ್ಸೆಸ್‍ನವರು ಸಂವಿಧಾನದ ಮೌಲ್ಯವನ್ನು ಕೊಲೆಗೈಯುತ್ತಿದ್ದಾರೆ. ಪೋಕ್ಸೋ ಪ್ರಕರಣದ ನಾಯಕರಿಗೆ ಹಾರ ಹಾಕುವ ಪಕ್ಷದವರು ಇವರು, ಇವರಿಂದ ನಾನು ಪಾಠ ಕಲಿಯಬೇಕೆ?’ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

Tags

B.K. HariprasadVidhan Parishad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X