Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಪ್ರತಿಪಕ್ಷಗಳ ಸಭೆ’ ವಿಧಾನಸಭೆಯಲ್ಲಿ...

‘ಪ್ರತಿಪಕ್ಷಗಳ ಸಭೆ’ ವಿಧಾನಸಭೆಯಲ್ಲಿ ಪ್ರತಿಧ್ವನಿ; ಕಲಾಪವನ್ನು ಪಂಚತಾರಾ ಹೊಟೇಲ್‍ಗೆ ಶಿಫ್ಟ್ ಮಾಡಿ ಎಂದ ಬಿಜೆಪಿ ಶಾಸಕ

ವಾರ್ತಾಭಾರತಿವಾರ್ತಾಭಾರತಿ18 July 2023 6:12 PM IST
share
‘ಪ್ರತಿಪಕ್ಷಗಳ ಸಭೆ’ ವಿಧಾನಸಭೆಯಲ್ಲಿ ಪ್ರತಿಧ್ವನಿ; ಕಲಾಪವನ್ನು ಪಂಚತಾರಾ ಹೊಟೇಲ್‍ಗೆ ಶಿಫ್ಟ್ ಮಾಡಿ ಎಂದ ಬಿಜೆಪಿ ಶಾಸಕ

ಬೆಂಗಳೂರು, ಜು. 18: ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆಯುತ್ತಿರುವ ‘ವಿರೋಧ ಪಕ್ಷಗಳ ಮುಖಂಡರ ಸಭೆ’ ವಿಚಾರ ವಿಧಾನಸಭೆಯಲ್ಲಿಯೂ ಪ್ರತಿಧ್ವನಿಸಿತು.

ಮಂಗಳವಾರ ಬೆಳಗ್ಗೆ ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಎದ್ದು ನಿಂತ ಬಿಜೆಪಿ ಸದಸ್ಯ ಆರಗ ಜ್ಞಾನೇಂದ್ರ, ‘ಸ್ಪೀಕರ್ ಅವರೇ ಯಾವುದೇ ಪಕ್ಷಕ್ಕೆ ಸೀಮಿತರಾಗಿಲ್ಲದ ತಾವು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಹೋಗಿದ್ದು ನಿಜವೇ? ಈ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದೆ. ಇದು ಮಾಧ್ಯಮಗಳ ಸೃಷ್ಟಿಯೇ?, ಹೇಗೇ? ನೀವೇ ಸ್ಪಷ್ಟನೆ ಕೊಡಬೇಕು’ ಎಂದು ಆಗ್ರಹಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸ್ಪೀಕರ್ ಯು.ಟಿ.ಖಾದರ್, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಔತಣಕೂಟಕ್ಕೆ ಆಹ್ವಾನಿಸಿದ್ದರು. ಹೀಗಾಗಿ ನಾನು ಅಲ್ಲಿಗೆ ಹೋಗಿದ್ದೆ. ಔತಣಕೂಟಕ್ಕೆ ಹೋಗುವುದು ತಪ್ಪಲ್ಲವಲ್ಲ. ನಾಳೆ ನೀವು(ವಿಪಕ್ಷ) ಕರೆದರೂ ಔತಣಕೂಟಕ್ಕೆ ಬರುತ್ತೇನೆ. ಸ್ಪೀಕರ್ ಅವರೂ ಮನುಷ್ಯನೇ ಅಲ್ಲವೇ?’ ಎಂದು ಸ್ಪಷ್ಟಣೆ ನೀಡಿದರು.

ಆಗ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಸುರೇಶ್ ಕುಮಾರ್, ‘ಆಡಳಿತ ಪಕ್ಷದ ಮೊದಲ ಸಾಲಿನಲ್ಲಿ ಒಂಭತ್ತು ಮಂದಿ ಸಚಿವರೂ ಇಲ್ಲ. ಎಲ್ಲರೂ ಪಂಚತಾರಾ ಹೋಟೆಲ್‍ನಲ್ಲಿ ಇದ್ದಂತೆ ಕಾಣುತ್ತದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗಾದರೂ ವಿಧಾನಸಭೆ ಅಧಿವೇಶನ ಕಲಾಪವನ್ನು ಆ ಹೋಟೆಲ್‍ಗೆ ಸ್ಥಳಾಂತರಿಸಿ ಬಿಡಿ’ ಎಂದು ಹಾಸ್ಯದ ದಾಟಿಯಲ್ಲೇ ತಿರುಗೇಟು ನೀಡಿದರು.

ಇದಕ್ಕೆ ಉತ್ತರಿಸಿದ ಸ್ಪೀಕರ್ ಖಾದರ್ ಅವರು, ‘ನೀವು ಒಂದು ಸಲಹೆ ನೀಡಿದ್ದೀರಿ. ಆದರೆ, ಸದನದ ನಿಯಮಾವಳಿಯಲ್ಲಿ ಹಾಗೇ ಮಾಡಲು ಅವಕಾಶವಿಲ್ಲ’ ಎಂದು ಸ್ಪಷ್ಟಣೆ ನೀಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ‘ಮೊದಲ ಸಾಲಿನ ಆಸನದಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸುವ 9 ಸಚಿವರು ಗೈರು ಹಾಜರಾಗಿದ್ದಾರೆ. ಸದನದ ಕಲಾಪಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಆಕ್ಷೇಪಿಸಿದರು.

ಬಳಿಕ ಸರಕಾರದ ಪರವಾಗಿ ಎದ್ದುನಿಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ನಾನು ಸೇರಿದಂತೆ ಮೂರ್ನಾಲ್ಕು ಮಂದಿ ಸಚಿವರು ಸದನದಲ್ಲಿದ್ದೇವೆ. ನೀವು(ಪ್ರತಿಪಕ್ಷಗಳು) ಹೇಳುವ ವಿಚಾರವನ್ನು ನಾವು ದಾಖಲಿಸಿಕೊಂಡು ಸಂಬಂಧಪಟ್ಟ ಸಚಿವರ ಗಮನಕ್ಕೆ ತರುತ್ತೇವೆ’ ಎಂದು ಸಮಜಾಯಿಷಿ ನೀಡಿದರು. ಆ ಬಳಿಕ ಸ್ಪೀಕರ್ ಖಾದರ್ ಅವರು ಆಯವ್ಯಯದ ಮೇಲಿನ ಚರ್ಚೆಗೆ ಅವಕಾಶ ಕಲ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X