Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ...

ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಸಿಎಂ ಸಿದ್ದರಾಮಯ್ಯ

ʼʼಇನ್ನು ನಿಮ್ಮ ಆಟಗಳು ನಡೆಯವುದಿಲ್ಲ ಮೋದಿಯವರೇ..ʼʼ

ವಾರ್ತಾಭಾರತಿವಾರ್ತಾಭಾರತಿ2 Sept 2023 9:56 PM IST
share
ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. 2: ‘ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಹತ್ವದ ಮೂರನೆಯ ಸಭೆಯು ಮೋದಿ ನೇತೃತ್ವದ ಕೇಂದ್ರ ಸರಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯಲು ಕ್ರಮವಹಿಸಿರುವುದು ಸ್ವಾಗತಾರ್ಹ. ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿ ಪಕ್ಷದಲ್ಲಿ ನಡುಕು ಶುರುವಾಗಿದೆ’ ಎಂದು ಅವರು ಟೀಕಿಸಿದ್ದಾರೆ.

‘ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ 9 ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯವುದಿಲ್ಲ ಮಿಸ್ಟರ್ ಮೋದಿಯವರೇ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ ಮೋದಿ ಇನ್ನು ‘ಮನ್ ಕೀ ಬಾತ್’ ಸಾಕು ಮಾಡಿ, ‘ಕಾಮ್ ಕೀ ಬಾತ್’ ಹೇಳಿ. 9 ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು? ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ. ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ-ಯಾವುದು ನಿಮ್ಮ ಸಾಧನೆ? ಹೇಳಿ’ ಎಂದು ಆಗ್ರಹಿಸಿದ್ದಾರೆ.

‘ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ಮೋದಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ ಕೂಡಾ ಆಗಿದೆ. ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು. ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ ಆಂಡ್ ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ಮೋದಿ ಅವರು ಜಾಣಕಿವುಡಾಗಿದ್ದಾರೆ. ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ. ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ ಆಂಡ್ ಕಂಪೆನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ. ಅವಸರದಲ್ಲಿ ಕರೆಯಲಾದ ಸಂಸತ್‍ನ ವಿಶೇಷ ಅಧಿವೇಶನ, ‘ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ಮೋದಿ ಮುಂದಾಗಿದ್ದಾರೆ’ ಎಂದು ಸಿದ್ದರಾಮಯ್ಯ ದೂರಿದ್ದಾರೆ.

‘ನಮ್ಮ ನೆಚ್ಚಿನ ನಾಯಕರಾದ ರಾಹುಲ್ ಗಾಂಧಿ ಅವರ ಕ್ರಿಯಾತ್ಮಕ ಸಲಹೆಗಳು ವಿರೋಧ ಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟ. ಕೇಂದ್ರದ ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ಮೋದಿ ಅವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X