Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನ.19ರಿಂದ ನ.21ರವರೆಗೆ ʼಟೆಕ್ ಸಮ್ಮಿಟ್ʼ...

ನ.19ರಿಂದ ನ.21ರವರೆಗೆ ʼಟೆಕ್ ಸಮ್ಮಿಟ್ʼ ಆಯೋಜನೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ11 Sept 2024 8:20 PM IST
share
ನ.19ರಿಂದ ನ.21ರವರೆಗೆ ʼಟೆಕ್ ಸಮ್ಮಿಟ್ʼ ಆಯೋಜನೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೆಂಗಳೂರು ಟೆಕ್ ಸಮ್ಮಿಟ್(ಬಿಟಿಎಸ್-2024) ನ.19ರಿಂದ ನ.21ರವರೆಗೆ ನಗರದಲ್ಲಿ ನಡೆಯಲಿದ್ದು, ಇದು ಜಾಗತಿಕ ಮಟ್ಟದಲ್ಲಿ ನಾವೀನ್ಯತೆ, ಸಂಶೋಧನೆ ಮತ್ತು ತಂತ್ರಜ್ಞಾನ-ಚಾಲಿತ ಬೆಳವಣಿಗೆಯ ಕೇಂದ್ರವಾಗಲಿದೆ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಆಯೋಜಿಸಿದ್ದ ಬಿಟಿಎಸ್ 2024ರ ಜಾಗತಿಕ ಪಾಲುದಾರರ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮಿಟ್‍ನಲ್ಲಿ ಅಂತಾರಾಷ್ಟ್ರೀಯ ಪಾಲುದಾರರು ತಮ್ಮ ತಾಂತ್ರಿಕ ಸಾಮರರ್ಥ್ಯಗಳನ್ನು ಪ್ರದರ್ಶಿಸಲು ಪೆವಿಲಿಯನ್ ಸ್ಥಾಪನೆಗೆ ಅಂತಾರಾಷ್ಟ್ರೀಯ ಪಾಲುದಾರರನ್ನು ಆಹ್ವಾನಿಸಲಾಗಿದೆ. ಬಿಟಿಎಸ್ ಹೊಸ ಹೊಸ ಆಲೋಚನೆಗಳ ವಿನಿಮಯ ಮಾಡಿಕೊಳ್ಳಲು ಮತ್ತು ಹೊಸತನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಪ್ರಕಾಶಮಾನವಾದ ಮನಸ್ಸುಗಳನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಒಂದು ವೇಗವರ್ಧಕ ಶಕ್ತಿಯಾಗಿದೆ ಎಂದರು.

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಮಾತನಾಡಿ, ಗ್ಲೋಬಲ್ ಇನ್ನೋವೇಶನ್ ಅಲಾಯನ್ಸ್ ಮಾರ್ಕೆಟ್ ಅಕ್ಸೆಸ್ ಪ್ರೊಗ್ರಾಂ(ಜಿಐಎ) ವಿಶ್ವದಾದ್ಯಂತ 30 ದೇಶಗಳೊಂದಿಗೆ ಪಾಲುದಾರಿಕೆಯನ್ನು ಹೊಂದಿದ್ದು, ಜಾಗತಿಕ ಮಟ್ಟದಲ್ಲಿ ರಾಜ್ಯದ ಮಹತ್ವವನ್ನು ಸಾರಲಿದೆ. ಈ ಪಾಲುದಾರಿಕೆಗಳ ಮೂಲಕ ಕರ್ನಾಟಕವು ತನ್ನನ್ನು ತಾನು ತಂತ್ರಜ್ಞಾನ ಮತ್ತು ನಾವೀನ್ಯತೆಯ ರೋಮಾಂಚಕ ಕೇಂದ್ರವಾಗಿ ಯಶಸ್ವಿಯಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದರು.

ಸ್ಟಾರ್ಟಪ್‍ಗಳು, ಉದ್ಯಮಿಗಳು ಮತ್ತು ಜಾಗತಿಕ ಸಂಸ್ಥೆಗಳ ಸ್ಥಾಪನೆಗೆ ಜಿಐಎ ಅನುಕೂಲಕರವಾದ ವಾತಾವರಣವನ್ನು ಸೃಷ್ಟಿಸಿದೆ. ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಬಾಗವಹಿಸುವ ನಿಟ್ಟಿನಲ್ಲಿ ಜಾಗತಿಕ ಪ್ರಭಾವದ ಪ್ರಯತ್ನಗಳ ಆರಂಭಕ್ಕೆ ಈ ಜಿಐಎ ಒಂದು ಉತ್ತಮ ವೇದಿಕೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಆಸ್ಟ್ರೇಲಿಯಾ, ಡೆನ್ಮಾರ್ಕ್, ಇಸ್ರೇಲ್, ಜಪಾನ್, ಸ್ವಿಟ್ಜರ್‍ಲ್ಯಾಂಡ್, ಯುಎಸ್‍ಎ, ಯುಕೆ, ಪೋಲಂಡ್, ಫಿನ್‍ಲ್ಯಾಂಡ್, ಫ್ರಾನ್ಸ್, ಜರ್ಮನಿ, ನೆದರ್‍ಲ್ಯಾಂಡ್ಸ್, ಇಟಲಿ ಮತ್ತು ಇನ್ನೂ ಅನೇಕ ದೇಶಗಳ ಪ್ರತಿನಿಧಿಗಳು ಸೇರಿದಂತೆ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X