Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ...

ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Jan 2024 4:41 PM IST
share
ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ "ಅನ್ನಭಾಗ್ಯ"ವೇ ಮಂತ್ರಾಕ್ಷತೆ, ನಿರುದ್ಯೋಗಕ್ಕೆ "ಯುವನಿಧಿ"ಯೇ ಮಂತ್ರಾಕ್ಷತೆ, ಮಹಿಳೆಯರ ಕಷ್ಟಕ್ಕೆ "ಗೃಹಲಕ್ಷ್ಮಿ"ಯೇ ಮಂತ್ರಾಕ್ಷತೆ, ಮಹಿಳೆಯರ ಪ್ರಯಾಣಕ್ಕೆ "ಶಕ್ತಿ"ಯೇ ಮಂತ್ರಾಕ್ಷತೆ, ಮನೆಯ ಬೆಳಕಿಗೆ "ಗೃಹಜ್ಯೋತಿ"ಯೇ ಮಂತ್ರಾಕ್ಷತೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ ಬುಧವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿವಕುಮಾರ್ ಅವರು ,"ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಮೂಲಕ ಫಲಾನುಭವಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿವೆ. ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಿಗುತ್ತಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರಿಗೆ ಹಣ ತಲುಪಿಲ್ಲ. ಆ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಶೀಘ್ರವಾಗಿ ಅವರಿಗೂ ಹಣ ನೀಡಲಾಗುವುದು. ಇಲ್ಲಿರುವ ಕೌಂಟರ್ ಗಳಲ್ಲಿ ಈ ಯೋಜನೆ ಸಿಗದವರು ಕೂಡ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಂಡು ಫಲಾನುಭವಿಯಾಗಬಹುದು ಎಂದರು.

ರಾಜಕಾರಣ ಮುಖ್ಯವಲ್ಲ, ನಿಮ್ಮ ಬದುಕು ಮುಖ್ಯ

ಈ ವಿಧಾನಸಭೆ ಕ್ಷೇತ್ರದಲ್ಲಿ ನಾವು ಸೋತಿದ್ದರೂ ನಿಮ್ಮ ಮೇಲೆ ವಿಶ್ವಾಸ ಇಟ್ಟು ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ.ನಮಗೆ ರಾಜಕಾರಣ ಮುಖ್ಯ ಅಲ್ಲ. ನಿಮ್ಮ ಬದುಕು ಮುಖ್ಯ. ನಿಮ್ಮ ಬದುಕು ಹಸನಾಗಿಸಲು ನಾವು ಕೆಲಸ ಮಾಡುತ್ತೇವೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ನಿಮ್ಮ ಮನೆ ಬಾಗಿಲಿಗೆ ಆಸ್ತಿ ದಾಖಲೆ ಪತ್ರ

ಇನ್ನೂ ಅನೇಕರು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಎಲ್ಲಾ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದೇವೆ. ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತೇವೆ. ಈ ವಿಚಾರವಾಗಿ ಯಾರೊಬ್ಬರೂ ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ ಎಂದರು.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X