Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಜಯನಗರ ಅರಸರ ಕಾಲದ ವೈಭವ ಮರಳಿಸುವುದು...

ವಿಜಯನಗರ ಅರಸರ ಕಾಲದ ವೈಭವ ಮರಳಿಸುವುದು ನಮ್ಮ ಆದ್ಯತೆ: ಹಂಪಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

‘ಕರ್ನಾಟಕ ಸಂಭ್ರಮ–50’: ಜ್ಯೋತಿ ರಥಯಾತ್ರೆಗೆ ಸಿಎಂ ಚಾಲನೆ

ವಾರ್ತಾಭಾರತಿವಾರ್ತಾಭಾರತಿ2 Nov 2023 9:45 PM IST
share
ವಿಜಯನಗರ ಅರಸರ ಕಾಲದ ವೈಭವ ಮರಳಿಸುವುದು ನಮ್ಮ ಆದ್ಯತೆ: ಹಂಪಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ

ಹಂಪಿ, ನ.2: ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ ‘ಕರ್ನಾಟಕ ಸಂಭ್ರಮ-50’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರ ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರ ಹೋರಾಟದ ಫಲವಾಗಿ 371(ಜೆ) ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ನೀಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಬಸವಣ್ಣನವರ ರೀತಿ ನಾನೂ ಮೌಢ್ಯ ನಂಬುವುದಿಲ್ಲ. ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50ನೆ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೆ ‘ಕನ್ನಡ ಸಂಭ್ರಮ-50’ ಅನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದೆ. ಎಲ್ಲ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರಣೆ ನೀಡಿದ್ದೆ ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೆ ವ್ಯವಹರಿಸಿರಿ ಎಂದು ಕರೆ ನೀಡಿ ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ವಿಜಯನಗರ ಕ್ಷೇತ್ರದ ಶಾಸಕ ಎಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗೌರವ ಉಪಸ್ಥಿತಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಹಿರಿಯ ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ.ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ, ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Tags

ವಿಜಯನಗರಸಿದ್ದರಾಮಯ್ಯ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X