Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮ ರಾಜ್ಯ ಸರಕಾರ ಸುಭದ್ರವಾಗಿದೆ,...

ನಮ್ಮ ರಾಜ್ಯ ಸರಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ಬಿಜೆಪಿ : ಸಿಎಂ ಸಿದ್ದರಾಮಯ್ಯ

"ಕೋಮುವಾದವನ್ನು ಜನರ ತಲೆಗೆ ತುಂಬಿ ರಾಜಕೀಯ ಲಾಭ ಪಡೆಯಲಷ್ಟೇ ನೀವು ಸಮರ್ಥರು "

ವಾರ್ತಾಭಾರತಿವಾರ್ತಾಭಾರತಿ8 April 2024 7:31 PM IST
share
ನಮ್ಮ ರಾಜ್ಯ ಸರಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ಬಿಜೆಪಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ನಾಯಕರೇ, ನಮ್ಮ ಸರಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬೆತ್ತಲೆ ಮಾಡಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಈ ಕುರಿತು ಎಕ್ಸ್‌ ನಲ್ಲಿ ಸರಣಿ ಪೋಸ್ಟ್‌ ಹೊಂಚಿಕೊಂಡಿರುವ ಅವರು " ಕಳೆದ ವರ್ಷದ ಎಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 10,000 ಕೋಟಿ ರೂ. ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ಈ ರೀತಿ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿರಲಿಲ್ಲ" ಎಂದು ವ್ಯಂಗ್ಯವಾಡಿದರು.

ʼಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ 84,528 ಕೋಟಿ ರೂ., ಅವರು 2021-22ರಲ್ಲಿ 67,332 ಕೋಟಿ ರೂ. ಮತ್ತು 2022 -23ರ ಅವಧಿಯಲ್ಲಿ 72,000 ಕೋಟಿ ರೂ. ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ 43,580 ಕೋಟಿ ರೂ. ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ. ನಮ್ಮ ಸರಕಾರದ ಮೇಲೆ ಆರೋಪ ಮಾಡುವ ಮೊದಲು ಕನಿಷ್ಠ ಬಸವರಾಜ ಬೊಮ್ಮಾಯಿ ಅವರನ್ನಾದರೂ ಕೇಳುವುದು ಬೇಡವೇ?ʼ ಎಂದು ಪ್ರಶ್ನಿಸಿದರು.

"ಸ್ವಾತಂತ್ರ್ಯ ಬಂದಾಗಿನಿಂದ 2018ರ ವರೆಗಿನ ರಾಜ್ಯ ಸರಕಾರದ ಒಟ್ಟು ಸಾಲದ ಮೊತ್ತ 2.42 ಲಕ್ಷ ಕೋಟಿ ರೂ. ಆಗಿತ್ತು. 2018ರಿಂದ 2023ರ ವರೆಗಿನ ಐದು ವರ್ಷಗಳ ಅವಧಿಯಲ್ಲಿ ಈ ಸಾಲ 5.40 ಲಕ್ಷ ಕೋಟಿ ರೂ.ಗಳಿಗೆ ಏರಿತ್ತು. ಕೇವಲ ಐದು ವರ್ಷಗಳ ಅವದಿಯಲ್ಲಿ ರಾಜ್ಯದ ಸಾಲ 3 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದ್ದು, ಯಾವ ಪಕ್ಷದ ಆಡಳಿತದಲ್ಲಿ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಂಡು ರಾಜ್ಯದ ಜನತೆಗೆ ತಿಳಿಸುವಂತವರಾಗಿ " ಎಂದು ಹೇಳಿದರು.

ಬಿಜೆಪಿ ನಾಯಕರೇ, ಈ ಆಡಳಿತ, ಆರ್ಥಿಕತೆ, ಅಭಿವೃದ್ದಿ ವಿಚಾರಗಳೆಲ್ಲ ನಿಮ್ಮ ಚಹದ ಬಟ್ಟಲಲ್ಲ, ಹಿಂದು-ಮುಸ್ಲಿಂ, ಕೋಮುವಾದ, ಪಾಕಿಸ್ತಾನ, ಮುಸ್ಲಿಂ ಲೀಗ್ ಮೊದಲಾದ ವಿಚಾರಗಳನ್ನು ಜನರ ತಲೆಗೆ ತುಂಬಿ ಸೌಹಾರ್ದತೆಯಿಂದ ಬಾಳುತ್ತಿದ್ದ ಜನರನ್ನು ಪರಸ್ಪರ ಸಂಘರ್ಷಕ್ಕಿಳಿಸಿ ರಾಜಕೀಯ ಲಾಭ ಪಡೆಯುವುದಕ್ಕಷ್ಟೇ ನೀವು ಸಮರ್ಥರು. ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಎಂದು ಹೇಳಿದರು.

ಸನ್ಮಾನ್ಯ @BJP4Karnataka ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ. ಕಳೆದ ವರ್ಷದ… https://t.co/7L9wOYc3AF

— Siddaramaiah (@siddaramaiah) April 8, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X