Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಪಂಚಾಯತಿ...

ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಪಂಚಾಯತಿ ಚುನಾವಣೆ : ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ11 July 2026 3:32 PM IST
share
ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಪಂಚಾಯತಿ ಚುನಾವಣೆ : ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು : ರಾಜ್ಯದ ಬಹುತೇಕ ಪಂಚಾಯತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಪಂಚಾಯತಿಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕಾಗಿ ಬಂದಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಆಯೋಗ 45 ದಿನಗಳಲ್ಲಿ ಚುನಾವಣೆ ನಡೆಸುತ್ತದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಎಸ್.ಐ.ಆರ್. ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರಕಾರಿ ಸಿಬ್ಬಂದಿ ಆ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಕಾಲಾವಕಾಶ ಕೇಳಲಾಗಿದೆ ಎಂದು ತಿಳಿಸಿದರು.

ಮಹಾತ್ಮಾ ಗಾಂಧೀ ಅವರು ಗ್ರಾಮ ಸ್ವರಾಜ್ಯದ ಕಲ್ಪನೆ ಹುಟ್ಟುಹಾಕಿದ್ದರು. ಕರ್ನಾಟಕದಲ್ಲಿ 1980ರಲ್ಲಿ ನಸೀರ್ ಸಾಬ್ ಅವರು ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿದರೆ, ದಿವಂಗತ ಪ್ರಧಾನಿ ರಾಜೀವ್ ಗಾಂಧೀ ಅವರು ದೇಶದಾದ್ಯಂತ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರಲು 1989ರಲ್ಲಿ 64ನೇ ಸಂವಿಧಾನಿಕ ತಿದ್ದುಪಡಿಗೆ ಪ್ರಯತ್ನ ಮಾಡಿದ್ದರು. ನಂತರ 1992ರಲ್ಲಿ 73ನೇ ಸಾಂವಿಧಾನಿಕ ತಿದ್ದುಪಡಿ ಮಾಡಿ,1993ರ ಏಪ್ರಿಲ್ 24 ರಿಂದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂದಿದೆ. ಅಂದರೆ ಗ್ರಾಮಗಳ ಆಡಳಿತವನ್ನು ಅದೇ ಗ್ರಾಮದವರು ನಿರ್ವಹಿಸಬೇಕು ಎಂಬುದೇ ಇದರ ಉದ್ದೇಶ ಎಂದು ತಿಳಿಸಿದರು.

ಮನೆ ಮನೆಗೆ ಇ-ಸ್ವತ್ತು:

ಇನ್ನು ಇ- ಸ್ವತ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆ ಇದ್ದು, ಸಾಕಷ್ಟು ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಎಸ್.ಐ.ಆರ್. ಪ್ರಕ್ರಿಯೆ ಮುಗಿದ ನಂತರ, ಈ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸಿ, ಎಲ್ಲ ಗ್ರಾಮೀಣ ಪ್ರದೇಶದ ಆಸ್ತಿ ಮಾಲಿಕರಿಗೆ ಯಾವುದೇ ತೊಡಕಾಗದಂತೆ ಮನೆ ಬಾಗಿಲಿಗೇ ಇ-ಸ್ವತ್ತು ನೀಡಲು ಕ್ರಮ ವಹಿಸಲಾಗುವುದು ಎಂದರು.

ಬಿ ಖರಾಬು ಜಮೀನು ಬಳಸಿಕೊಂಡು ಲೇಔಟ್ ನಿರ್ಮಿಸಿದ್ದರೆ ಅಲ್ಲಿ ಇ-ಸ್ವತ್ತು ನೀಡಲಾಗುವುದಿಲ್ಲ. ಇದಕ್ಕೆ ಕಂದಾಯ ಇಲಾಖೆಯ ಸಚಿವರೊಂದಿಗೆ ಸಭೆ ನಡೆಸಬೇಕಾಗುತ್ತದೆ ಎಂದರು.

ತಾಂತ್ರಿಕ ಕಾರಣ ನೆಪಒಡ್ಡಿ 2186 ಕೋಟಿ ಕೊಡದ ಕೇಂದ್ರ ಸರಕಾರ:

ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಸರಕಾರದಿಂದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬರಬೇಕಾದ 2186.20 ಕೋಟಿ ರೂ.ಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿಲ್ಲ ಎಂದು ಈಶ್ವರ್‌ ಖಂಡ್ರೆ ತಿಳಿಸಿದರು.

ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ಹಣ ಬಿಡುಗಡೆ ಮಾಡುವುದಿಲ್ಲ ಎನ್ನುವುದು ಸರಿಯಲ್ಲ. ರಾಜ್ಯದ ಸಂಸತ್ ಸದಸ್ಯರು ಒಕ್ಕೂರಲಿನಿಂದ ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಹೇಳಿದರು.

ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ:

ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಹಣಕಾಸಿನ ಕೊರತೆ ಇಲ್ಲ. ಈಗಾಗಲೇ 117 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಮಿಗಿಲಾಗಿ ಬೆಳಗಾವಿ ಪ್ರಾದೇಶಿಕ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಯವರು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಬರ ಪರಿಸ್ಥಿತಿಯ ನಡುವೆಯೂ ನೀರು ಪೂರೈಕೆಗೆ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ ಎಂದರು.

ಗುಳೆ ಹೋಗದಂತೆ ಮನವಿ:

ಮನ್ರೇಗಾದ ಬದಲಾದ ರೂಪ ವಿ.ಬಿ.ಜಿ ರಾಮ್ ಜೀ ಯನ್ನು ರಾಜ್ಯ ಸರಕಾರ ಆರ್ಥಿಕ ಹೊರೆಯ ನಡುವೆಯೂ ಬಡವರು, ದಲಿತರು, ವಂಚಿತರು, ಗ್ರಾಮೀಣ ಬಡವರ ಹಿತದೃಷ್ಟಿಯಿಂದ ಜಾರಿಗೆ ತಂದಿದ್ದು, ಗ್ರಾಮೀಣ ಜನರಿಗೆ ಉದ್ಯೋಗದ ಖಾತ್ರಿ ನೀಡಲಾಗಿದೆ. ಹೀಗಾಗಿ ಯಾರೂ ಗುಳೆ ಹೋಗುವ ಅಗತ್ಯವಿಲ್ಲ ಎಂದರು.

2029ರ ವೇಳೆಗೆ ಒಂದು ದೇಶ ಒಂದು‌ ಚುನಾವಣೆ ನಡೆಸುತ್ತೇವೆ ಎಂಬ ಸಲಹಾ ಸಮಿತಿಯ ಅಧ್ಯಕ್ಷರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ, ಕೇಂದ್ರ ಸರಕಾರ ಸರ್ವಾಧಿಕಾರ ಧೋರಣೆ ಹೊಂದಿದೆ. ದೇಶವೇ ತಮ್ಮ ಕೈಗೊಂಬೆ ಆಗಿರಬೇಕು ಎಂದು ಬಯಸುತ್ತಾರೆ. ಈ ವಿಚಾರದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ತನ್ನ ನಿಲುವನ್ನು ತಿಳಿಸಿದೆ. ಪಕ್ಷದ ನಿಲುವೇ ನನ್ನ ನಿಲುವು ಎಂದರು.

Tags

Panchayat electionMinister Eshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X